ಅಮಿತ್ ಶಾಗೆ ಕೋವಿಡ್ ಪರೀಕ್ಷೆ ವರದಿ ನಗೆಟಿವ್; ಗೃಹ ಇಲಾಖೆ ಹೇಳಿದ್ದೇನು?

ನವದೆಹಲಿ, ಆಗಸ್ಟ್ 09: ಕೇಂದ್ರ ಗೃಹ ಸಚಿವ ಅಮಿತ್ ಶಾ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂಬ ವಿಚಾರ ಭಾನುವಾರ ಚರ್ಚೆಗೆ ಕಾರಣವಾಗಿದೆ. ಗೃಹ ಇಲಾಖೆ ಈ ಕುರಿತು ಸ್ಪಷ್ಟನೆ ನೀಡಿದೆ.

ಭಾನುವಾರ ಬಿಜೆಪಿ ನಾಯಕ ಮತ್ತು ಸಂಸದ ಮನೋಜ್ ತಿವಾರಿ ಅಮಿತ್ ಶಾ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದರು. ಬಳಿಕ ಅದನ್ನು ಡಿಲೀಟ್ ಮಾಡಿದ್ದರು.

ಗೃಹ ಇಲಾಖೆ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ. ಕಳೆದ ಭಾನುವಾರದ ಬಳಿಕ ಅಮಿತ್ ಶಾ ಅವರಿಗೆ ಕೋವಿಡ್ ಪರೀಕ್ಷೆ ಮಾಡಿಲ್ಲ ಎಂದು ಇಲಾಖೆ ಸ್ಪಷ್ಟನೆಯಲ್ಲಿ ತಿಳಿಸಿದೆ.

No COVID Test Done On Amit Shah Since Last Week Says Home Ministry

ಕಳೆದ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರಿಗೆ ಕೋವಿಡ್ ಪರೀಕ್ಷೆ ಮಾಡಿಲ್ಲ.

ಮನೋಜ್ ತಿವಾರಿ ಮಾಡಿದ ಟ್ವೀಟ್ ಬಗ್ಗೆ ಭಾರಿ ಚರ್ಚೆ ಆರಂಭವಾಗಿತ್ತು. ಅದರಲ್ಲೂ ಅವರು ಟ್ವೀಟ್ ಡಿಲೀಟ್ ಮಾಡಿದ್ದು ಏಕೆ? ಎಂಬುದು ಇನ್ನೂ ಬಹಿರಂಗವಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+