ರೈಲ್ವೆ ಆನ್ ಲೈನ್ ಸೇವೆಗಳಿಗೆ ಡೆಬಿಟ್ ಕಾರ್ಡ್ ನಿರ್ಬಂಧವಿಲ್ಲ
ನವದೆಹಲಿ, ಸೆಪ್ಟೆಂಬರ್ 23: ಆನ್ ಲೈನ್ ಮೂಲಕ ರೈಲ್ವೆ ಸೇವೆಗಳ ಹಣ ಪಾವತಿಸಲು ಕೆಲವು ಬ್ಯಾಂಕ್ ಗಳ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಗಳ ಬಳಕೆಯನ್ನು ಭಾರತೀಯ ರೈಲ್ವೆ ಕ್ಯಾಟೆರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (ಐಆರ್ ಸಿಟಿಸಿ) ನಿರ್ಬಂಧಿಸಿದೆ ಎಂಬ ವರದಿಗಳನ್ನು ಐಆರ್ ಸಿಟಿಸಿ ತಳ್ಳಿಹಾಕಿದೆ.
ರೈಲ್ವೆ ಮುಂಗಡ ಟಿಕೆಟ್ ಬುಕಿಂಗ್, ರೈಲಿನಲ್ಲಿ ಆಹಾರ ಖರೀದಿ ಸೇರಿದಂತೆ, ಭಾರತೀಯ ರೈಲ್ವೆಯ ಯಾವುದೇ ಸೇವೆಗಳನ್ನು ಆನ್ ಲೈನ್ ಮೂಲಕ ಪಡೆಯುವ ಗ್ರಾಹಕರು ಬಳಸುವ ಕೆಲ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳ ಮೇಲೆ ಭಾರತೀಯ ರೈಲ್ವೆ ನಿರ್ಬಂಧ ಹೇರಿದೆ ಎಂದು ಸೆ. 22ರಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಸೆ. 23ರಂದು ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಐಆರ್ ಸಿಟಿಸಿ, ರೈಲ್ವೆ ಸೇವೆಗಳಿಗೆ ಯಾವುದೇ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳನ್ನು ಉಪಯೋಗಿಸಬಹುದಾಗಿದೆ. ವೀಸಾ ಹಾಗೂ ಮಾಸ್ಟರ್ ಕಾರ್ಡ್ ಲೋಗೋ ಇರುವ ಯಾವುದೇ ಕಾರ್ಡ್ ಆಗಲೀ, ಅದರ ಮೂಲಕ ವ್ಯವಹರಿಸಲು ಈಗಲೂ ಅವಕಾಶವಿದೆ ಎಂದು ಹೇಳಿದೆ.
ಇದೇ ವೇಳೆ, ಕೆಲವಾರು ಬ್ಯಾಂಕ್ ಗಳ ಜತೆಗೆ ರೈಲ್ವೆ ಇಲಾಖೆಯು ಒಪ್ಪಂದ ಮಾಡಿಕೊಂಡಿದ್ದು, ಆಯಾ ಬ್ಯಾಂಕ್ ಗಳ ವೆಬ್ ಸೈಟ್ ಗಳ ಮೂಲಕ ವ್ಯಾಲ್ಯೂ ಆ್ಯಡೆಡ್ ಸೇವೆಗಳಿಗೆ ಅನುವು ಮಾಡಿಕೊಡಲಾಗಿದೆ. ಇದರಿಂದ ಆ ಬ್ಯಾಂಕ್ ಗ್ರಾಹಕರು ರೈಲ್ವೆ ಸೇವೆಗಳನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ಐಆರ್ ಸಿಟಿಸಿ ತಿಳಿಸಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications