ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ಟ್ರಾಜೆನಿಕಾ ಕೊರೊನಾ ಲಸಿಕೆ ಹಾಕಿಸಿಕೊಂಡರೆ ಹೆಪ್ಪುಗಟ್ಟುತ್ತದೆಯೇ ರಕ್ತ?

|
Google Oneindia Kannada News

ನವದೆಹಲಿ, ಮಾರ್ಚ್ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ನೀಡುತ್ತಿರುವ ಆಸ್ಟ್ರಾಜೆನಿಕಾ ಲಸಿಕೆ ಪಡೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುತ್ತದೆ ಎಂಬುದಕ್ಕೆ ಯಾವುದೇ ರೀತಿ ಸಾಕ್ಷ್ಯಗಳಿಲ್ಲ ಎಂದು ಆಸ್ಟ್ರಾಜೆನಿಕಾ ಸಂಸ್ಥೆ ಸ್ಪಷ್ಟಪಡಿಸಿದೆ.

ಯುನೈಟೆಡ್ ಕಿಂಗ್ ಡಮ್(ಇಂಗ್ಲೆಂಡ್) ಮತ್ತು ಯುರೋಪ್ ರಾಷ್ಟ್ರಗಳಲ್ಲಿ 1.70 ಕೋಟಿ ಫಲಾನುಭವಿಗಳಿಗೆ ಆಸ್ಟ್ರಾಜೆನಿಕಾ ಲಸಿಕೆ ನೀಡಲಾಗಿದೆ. ಇತ್ತೀಚಿಗೆ ಲಸಿಕೆ ಪಡೆದ ಆರೋಗ್ಯ ಕಾರ್ಯಕರ್ತರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಹಲವು ರಾಷ್ಟ್ರಗಳು ಲಸಿಕೆ ವಿತರಣೆಯನ್ನು ರದ್ದುಗೊಳಿಸಿದ್ದವು.

 ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಆಕ್ಷೇಪ; ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟನೆ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಆಕ್ಷೇಪ; ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟನೆ

ಆಸ್ಟ್ರಾಜೆನಿಕಾ ಲಸಿಕೆಯಿಂದ ಕೆಲವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆ ಕಾಣಿಸಿಕೊಂಡ ಈ ಹಿನ್ನೆಲೆ ಕೊವಿಡ್-19 ಲಸಿಕೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಡೆನ್ಮಾರ್ಕ್ ತಿಳಿಸಿತ್ತು. ಕೊರೊನಾವೈರಸ್ ಸೋಂಕಿತರಲ್ಲಿ ಲಸಿಕೆ ನೀಡಿದ ನಂತರದಲ್ಲಿ ರಕ್ತ ಹೆಪ್ಪುಗಟ್ಟುವುದು ಸೇರಿದಂತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಡೆನ್ಮಾರ್ಕ್ ಆರೋಗ್ಯ ಪ್ರಾಧಿಕಾರವು ಸ್ಪಷ್ಟಪಡಿಸಿದೆ.

ಮರು ಪರಿಶೀಲನೆ ಬಳಿಕ ಸಂಸ್ಥೆಯಿಂದ ಸ್ಪಷ್ಟನೆ

ಮರು ಪರಿಶೀಲನೆ ಬಳಿಕ ಸಂಸ್ಥೆಯಿಂದ ಸ್ಪಷ್ಟನೆ

ಯುರೋಪಿಯನ್ ರಾಷ್ಟ್ರಗಳು ಮತ್ತು ಇಂಗ್ಲೆಂಡ್‌ನಲ್ಲಿ 1.70 ಕೋಟಿ ಜನರಿಗೆ ಆಸ್ಟ್ರಾಜೆನಿಕಾ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಈ ಎಲ್ಲ ದತ್ತಾಂಶಗಳನ್ನು ಮರು ಪರಿಶೀಲನೆ ನಡೆಸಿದಾಗ ಲಸಿಕೆಯಿಂದ ಆರೋಗ್ಯದಲ್ಲಿ ಯಾವುದೇ ರೀತಿ ಅಡ್ಡ ಪರಿಣಾಮಗಳು ಗೋಚರಿಸಿಲ್ಲ. ಕೆಲವರಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗೆ ಲಸಿಕೆಯೇ ಕಾರಣ ಎಂಬುದನ್ನು ಸಾಬೀತುಪಡಿಸುವಂತಾ ಸಾಕ್ಷ್ಯಗಳು ಸಹ ಸಿಕ್ಕಿಲ್ಲ ಎಂದು ಸಂಸ್ಥೆಯು ಸ್ಪಷ್ಟಪಡಿಸಿದೆ.

ಈ ರಾಷ್ಟ್ರಗಳಲ್ಲಿ ಆಸ್ಟ್ರಾಜೆನಿಕಾ ಲಸಿಕೆ ವಿತರಣೆ ಸ್ಥಗಿತ

ಈ ರಾಷ್ಟ್ರಗಳಲ್ಲಿ ಆಸ್ಟ್ರಾಜೆನಿಕಾ ಲಸಿಕೆ ವಿತರಣೆ ಸ್ಥಗಿತ

ಆಸ್ಟ್ರಾಜೆನಿಕಾ ಲಸಿಕೆಯನ್ನು ಯುರೋಪಿಯನ್ ಖಂಡದ 17 ರಾಷ್ಟ್ರಗಳಿಗೆ ಕಳುಹಿಸಲಾಗಿತ್ತು. ಈ ಪೈಕಿ ನಾಲ್ಕು ಯುರೋಪಿಯನ್ ರಾಷ್ಟ್ರಗಳಾದ ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಲಕ್ಸೆಂಬರ್ಗ್ ನಲ್ಲಿ ಕೊರೊನಾವೈರಸ್ ಲಸಿಕೆಗಳ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ. ಮಾರ್ಚ್ 9 ರ ಹೊತ್ತಿಗೆ, ಯುರೋಪಿಯನ್ ಆರ್ಥಿಕ ಪ್ರದೇಶದಲ್ಲಿ ಮೂರು ದಶಲಕ್ಷಕ್ಕೂ ಹೆಚ್ಚು ಜನರಲ್ಲಿ ಲಸಿಕೆ ಹಾಕಿದವರಲ್ಲಿ 22 ರಕ್ತ ಹೆಪ್ಪುಗಟ್ಟುವಿಕೆ ಪ್ರಕರಣಗಳು ವರದಿಯಾಗಿವೆ ಎಂದು ಇಎಂಎ ತಿಳಿಸಿದೆ.

ಐರ್ಲೆಂಡ್, ಡೆನ್ಮಾರ್ಕ್, ನಾರ್ವೆ, ಐಸ್ ಲ್ಯಾಂಡ್, ನೆದರ್ ಲ್ಯಾಂಡ್‌ನಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಸಲು ಮೊದಲು ನೀಡುತ್ತಿದ್ದ ಆಸ್ಟ್ರಾಜೆನಿಕಾ ಲಸಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಆಸ್ಟ್ರಿಯಾದಲ್ಲಿ ಕಳೆದ ವಾರವೇ ಆಸ್ಟ್ರಾಜೆನಿಕಾ ಲಸಿಕೆ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.

ಆಸ್ಟ್ರಾಜೆನಿಕಾದಿಂದ ಅಪಾಯವಿಲ್ಲ ಎಂದ ವಿಶ್ವ ಆರೋಗ್ಯ ಸಂಸ್ಥೆ

ಆಸ್ಟ್ರಾಜೆನಿಕಾದಿಂದ ಅಪಾಯವಿಲ್ಲ ಎಂದ ವಿಶ್ವ ಆರೋಗ್ಯ ಸಂಸ್ಥೆ

ಆಸ್ಟ್ರಾಜೆನಿಕಾ ಲಸಿಕೆ ಪಡೆದಿದ್ದಕ್ಕಾಗಿಯೇ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ಸಾಬೀತುಪಡಿಸುವಂತಾ ಯಾವುದೇ ಘಟನೆಗಳು ವರದಿಯಾಗಿಲ್ಲ. ಆಸ್ಟ್ರಾಜೆನಿಕಾ ಲಸಿಕೆಯ ಸುರಕ್ಷತೆ ಬಗ್ಗೆ ಯಾವುದೇ ಅನುಮಾನಗಳಿಲ್ಲ ಎಂದು ಯುರೋಪಿಯನ್ ಮೆಡಿಸನ್ ಏಜೆನ್ಸಿ ಸ್ಪಷ್ಟಪಡಿಸಿತ್ತು. ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಇದೇ ರೀತಿ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಆಸ್ಟ್ರಾಜೆನಿಕಾ ಅತ್ಯುತ್ತಮ ಲಸಿಕೆಯಾಗಿದ್ದು, ಅದರ ಬಗ್ಗೆ ಮರುಪರಿಶೀಲನೆ ನಡೆಸಿದ್ದಾಗಿದೆ. ಈ ಲಸಿಕೆಯಲ್ಲಿ ಯಾವುದೇ ಅಡ್ಡ ಪರಿಣಾಮವಿಲ್ಲದ ಕಾರಣ ಲಸಿಕೆಯ ಬಳಕೆಯನ್ನು ಮುಂದುವರಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಹೇಳಿತ್ತು.

ಆಸ್ಟ್ರಾಜೆನಿಕಾ ಲಸಿಕೆಯ ಸುರಕ್ಷತೆ ಬಗ್ಗೆ ಪ್ರತಿವಾರ ವರದಿ

ಆಸ್ಟ್ರಾಜೆನಿಕಾ ಲಸಿಕೆಯ ಸುರಕ್ಷತೆ ಬಗ್ಗೆ ಪ್ರತಿವಾರ ವರದಿ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಂಸ್ಥೆಯು ಸಂಶೋಧಿಸಿರುವ ಕೊರೊನಾವೈರಸ್ ಲಸಿಕೆ ಬಳಕೆಗೆ ಯುರೋಪಿಯನ್ ರಾಷ್ಟ್ರಗಳಲ್ಲಿ ಅನುಮೋದನೆ ನೀಡಲಾಗಿದೆ. ಆಸ್ಟ್ರಾಜೆನಿಕಾ ಲಸಿಕೆಯ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತಿವಾರ ಮರು ಪರೀಕ್ಷೆ ನಡೆಸಲಾಗುತ್ತದೆ. ಅದರ ವರದಿಯನ್ನು ಸಹ ಬಿಡುಗಡೆ ಮಾಡಲಾಗುವುದು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

English summary
No Evidence Found Of Increases Blood Clot Risk From AstraZeneca Vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X