ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾವೈರಸ್ 3ನೇ ಅಲೆಗೆ ಡೆಲ್ಟಾ ಪ್ಲಸ್ ಕಾರಣವೇ?

|
Google Oneindia Kannada News

ನವದೆಹಲಿ, ಜೂನ್ 24: "ಭಾರತದಲ್ಲಿ ಹರಡುತ್ತಿರುವ ಡೆಲ್ಟಾ ಪ್ಲಸ್ ರೂಪಾಂತರ ತಳಿಯು ಕೊರೊನಾವೈರಸ್ ಸೋಂಕಿನ ಮೂರನೇ ಅಲೆಗೆ ಪ್ರಮುಖ ಕಾರಣವಾಗಲಿದೆ ಎಂಬುದನ್ನು ಸ್ಪಷ್ಟಪಡಿಸುವುದಕ್ಕೆ ಯಾವುದೇ ಪುರಾವೆಗಳಿಲ್ಲ," ಎಂದು ಜೀನೋಮ್ ಸೀಕ್ವೆನ್ಸರ್ ಸ್ಪಷ್ಟಪಡಿಸಿದೆ.

ದೇಶದ ನಾಲ್ಕೈದು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ಪ್ರಕರಣಗಳು ವರದಿ ಆಗುತ್ತಿದ್ದಂತೆ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಆತಂಕ ವ್ಯಕ್ತಪಡಿಸಿದ್ದರು. ಭಾರತದಲ್ಲಿ ಕೊವಿಡ್-19 ಮೂರನೇ ಅಲೆಗೆ ಡೆಲ್ಟಾ ಪ್ಲಸ್ ಪ್ರಮುಖ ಪಾತ್ರ ವಹಿಸಲಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದರು.

ಡೆಲ್ಟಾಗಿಂತ ಡೆಲ್ಟಾ ಪ್ಲಸ್ ರೂಪಾಂತರ ಅಪಾಯಕಾರಿಯೇ? ಇಲ್ಲಿದೆ ಎರಡರ ನಡುವಣ ವ್ಯತ್ಯಾಸಡೆಲ್ಟಾಗಿಂತ ಡೆಲ್ಟಾ ಪ್ಲಸ್ ರೂಪಾಂತರ ಅಪಾಯಕಾರಿಯೇ? ಇಲ್ಲಿದೆ ಎರಡರ ನಡುವಣ ವ್ಯತ್ಯಾಸ

"ಈ ಹಂತದಲ್ಲಿ ಕೊರೊನಾವೈರಸ್ ಸೋಂಕಿನ ಮೂರನೇ ಅಲೆಗೆ ಡೆಲ್ಟಾ ಪ್ಲಸ್ ರೂಪಾಂತರ ತಳಿಯೇ ಕಾರಣ ಎಂದು ಹೇಳುವುದಕ್ಕೆ ಯಾವುದೇ ಪುರಾವೆಗಳಿಲ್ಲ, ಮುಂದಿನ ದಿನಗಳಲ್ಲಿ ಇದೇ ತಳಿಯು ಮೂರನೇ ಅಲೆಗೆ ಕಾರಣವಾಗುವ ಸಾಧ್ಯತೆಗಳನ್ನೂ ತಳ್ಳಿ ಹಾಕುವಂತಿಲ್ಲ," ಎಂದು ಇನ್ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಅಂಡ್ ಇಂಟಿಗ್ರೇಟಿವ್ ಬಯಾಲಜಿಯ ನಿರ್ದೇಶಕ ಡಾ. ಅನುರಾಗ್ ಅಗರ್ವಾಲ್ ಎನ್ ಡಿ ಟಿವಿಗೆ ಹೇಳಿದ್ದಾರೆ.

ಡೆಲ್ಟಾ ಪ್ಲಸ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ

ಡೆಲ್ಟಾ ಪ್ಲಸ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ

"ಪ್ರಸ್ತುತ ಸಂದರ್ಭದಲ್ಲಿ ಡೆಲ್ಟಾ ಪ್ಲಸ್ ತಳಿಯ ಬಗ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಡೆಲ್ಟಾ ರೂಪಾಂತರ ರೋಗಾಣುವಿಗಿಂತ ಡೆಲ್ಟಾ ಪ್ಲಸ್ ರೂಪಾಂತರವೇ ಹೆಚ್ಚು ಅಪಾಯಕಾರಿ ಅಥವಾ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಮೂರನೇ ಅಲೆಗೆ ಡೆಲ್ಟಾ ಪ್ಲಸ್ ಪ್ರಮುಖ ಕಾರಣವಾಗಲಿದೆ ಎಂದು ಹೇಳುವ ಯಾವುದೇ ಸಾಕ್ಷ್ಯಗಳು ಇದುವರೆಗೂ ಪತ್ತೆಯಾಗಿಲ್ಲ," ಎಂದು ಡಾ. ಅನುರಾಗ್ ಅಗರ್ವಾಲ್ ಹೇಳಿದ್ದಾರೆ.

"ಶೇ.1ಕ್ಕಿಂತಲೂ ಕಡಿಮೆ ಡೆಲ್ಟಾ ಪ್ಲಸ್ ಪ್ರಕರಣ"

"ನಮ್ಮ ಸಂಸ್ಥೆಯು ಜೂನ್ ತಿಂಗಳಲ್ಲಿ ಮಹಾರಾಷ್ಟ್ರದಿಂದ 3,500ಕ್ಕೂ ಹೆಚ್ಚು ಜನರ ಮಾದರಿಗಳನ್ನು ಸಂಗ್ರಹಿಸಿತ್ತು. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲೂ ಕೆಲವು ಜನರ ಮಾದರಿ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಡೆಲ್ಟಾ ಪ್ಲಸ್ ರೂಪಾಂತರಗಳು ತಳಿಯು ಹೆಚ್ಚಾಗಿ ಪತ್ತೆಯಾಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ ಅದು ಶೇಕಡಾ ಒಂದು ಕ್ಕಿಂತ ಕಡಿಮೆಯಾಗಿತ್ತು," ಎಂದು ಅವರು ತಿಳಿಸಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ವೇಗ ಕಡಿಮೆಯಾಗುತ್ತಿದ್ದಂತೆ ನಿಯಮಗಳನ್ನು ಸಡಿಲಗೊಳಿಸುವುದು ಸೂಕ್ತವಲ್ಲ. ಎರಡನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ರೂಪಾಂತರವು ಮತ್ತೊಂದು ಕಾಳಜಿಯ ರೂಪಾಂತರವನ್ನು ಹುಟ್ಟು ಹಾಕುವ ಬಗ್ಗೆ ವೈದ್ಯರು ಮೊದಲೇ ಎಚ್ಚರಿಕೆ ನೀಡಿದ್ದರು.

ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಎಚ್ಚರಿಕೆ ಸಂದೇಶ

ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಎಚ್ಚರಿಕೆ ಸಂದೇಶ

ಭಾರತದಲ್ಲಿ ಇದುವರೆಗೂ ನಾಲ್ಕೈದು ರಾಜ್ಯಗಳಲ್ಲಿ 22 ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ. ಕೊರೊನಾವೈರಸ್ ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ತಳಿಯು ಪತ್ತೆ ಆಗಿರುವ ರಾಜ್ಯಗಳು ಮತ್ತು ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ತಕ್ಷಣದಿಂದಲೇ ಜಾರಿಗೊಳಿಸಬೇಕು. ಸೋಂಕು ಪತ್ತೆ ಆಗಿರುವ ಸ್ಥಳದಲ್ಲಿ ಕಣ್ಗಾವಲು ಇರಿಸಬೇಕು. ಜನ ಸಂದಣಿ ನಿಯಂತ್ರಣ, ಹೆಚ್ಚು ಜನ ಸೇರುವುದಕ್ಕೆ ನಿಯಂತ್ರಣ ಹಾಕುವುದರ ಜೊತೆಗೆ ಸೋಂಕಿನ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಸೂಚಿಸಲಾಗಿದೆ.

ಡೆಲ್ಟಾ ಪ್ಲಸ್ ನಿಯಂತ್ರಣಕ್ಕೆ ಮುಖ್ಯ ಕಾರ್ಯದರ್ಶಿ ಸಲಹೆ

ಡೆಲ್ಟಾ ಪ್ಲಸ್ ನಿಯಂತ್ರಣಕ್ಕೆ ಮುಖ್ಯ ಕಾರ್ಯದರ್ಶಿ ಸಲಹೆ

ಡೆಲ್ಟಾ ಪ್ಲಸ್ ರೂಪಾಂತರ ತಳಿ ಪತ್ತೆಯಾಗಿರುವ ರಾಜ್ಯಗಳಲ್ಲಿ ಯಾವ ರೀತಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ಕೊರೊನಾವೈರಸ್ ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ತಳಿಯ ಪತ್ತೆಗೆ ಪ್ರಾಮಾಣಿಕವಾಗಿ ಪರೀಕ್ಷೆಗಳನ್ನು ನಡೆಸುವುದು. ಆದ್ಯತೆ ಮೇರೆಗೆ ಕೊವಿಡ್-19 ಲಸಿಕೆ ವಿತರಣೆ ಜೊತೆಗೆ ರೂಪಾಂತರ ತಳಿ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ. ಇದರ ಜೊತೆ ಸಾಂಕ್ರಾಮಿಕ ರೋಗದ ನಡುವಿನ ವೈದ್ಯಕೀಯ ಸಂಬಂಧವನ್ನು ಪತ್ತೆ ಮಾಡುವುದಕ್ಕಾಗಿ ಸೋಂಕು ತಗುಲಿದ ವ್ಯಕ್ತಿಗಳ ಮಾದರಿಯನ್ನು INSACOG ಪ್ರಯೋಗಾಲಯಗಳಿಗೆ ಕಳುಹಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.

"ದೇಶದ 28 ಕಡೆಗಳಲ್ಲಿ INSACOG ಪ್ರಯೋಗಾಲಯಗಳಿದ್ದು, ಹೊಸ ತಳಿಯ ಹರಡುವಿಕೆ ವೇಗ, ಶ್ವಾಸಕೋಶದ ಮೇಲೆ ಬೀರುವ ಪ್ರಭಾವ, ಮೊನೊಕ್ಲೋನಲ್ ಪ್ರತಿಕಾಯ ವ್ಯವಸ್ಥೆ ಇಳಿಮುಖಗೊಳಿಸುವಲ್ಲಿ ಹೊಸ ವೈರಸ್ ಪಾತ್ರದ ಬಗ್ಗೆ ಪರಿಶೋಧನೆ ನಡೆಸಲಾಗುತ್ತದೆ," ಎಂದು ಕೇಂದ್ರ ಆರೋಗ್ಯ ಸಚಿವಾಲಯ ಘೋಷಿಸಿದೆ.

English summary
No Evidence Found To Say Delta Plus Variant Is Reason For Major 3rd Wave of Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X