ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ, ಫ್ರಂಟ್ ಲೈನ್ ಕಾರ್ಯಕರ್ತರ ಲಸಿಕೆ ನೋಂದಣಿ ಸ್ಥಗಿತ

|
Google Oneindia Kannada News

ನವದೆಹಲಿ, ಏಪ್ರಿಲ್ 4; ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಸುವುದನ್ನು ಸ್ಥಗಿತಗೊಳಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ತಕ್ಷಣದಿಂದಲೇ ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ಕಾರ್ಯಕರ್ತರ ಹೊಸ ನೋಂದಣಿ ಸ್ಥಗಿತಗೊಳಿಸಿ. ಈಗ ನೋಂದಣಿ ಮಾಡಿಸಿರುವ ಕಾರ್ಯಕರ್ತರಿಗೆ ಬೇಗ ಲಸಿಕೆ ಹಾಕಿ ಎಂದು ನಿರ್ದೇಶನವನ್ನು ನೀಡಲಾಗಿದೆ.

ಬೆಂಗಳೂರು: ಹಣನೀಡಿ ಕೊರೊನಾ ಲಸಿಕೆ ಪಡೆಯುವ ಖಾಸಗಿ ಕೇಂದ್ರಗಳು ಬೆಂಗಳೂರು: ಹಣನೀಡಿ ಕೊರೊನಾ ಲಸಿಕೆ ಪಡೆಯುವ ಖಾಸಗಿ ಕೇಂದ್ರಗಳು

ಹೊಸ ನೋಂದಣಿ ಸ್ಥಗಿತಗೊಂಡರೂ ಸಹ ಆರೋಗ್ಯ ಮತ್ತು ಫ್ರಂಟ್ ಲೈನ್ ಕಾರ್ಯಕರ್ತರು ಲಸಿಕೆಯನ್ನು ಪಡೆಯಬಹುದಾಗಿದೆ. 45 ವರ್ಷ ಮೇಲ್ಪಟ್ಟವರು ಕೋವಿನ್ ಪೋರ್ಟಲ್‌ನಲ್ಲಿ ಹೆಸರು ನೋಂದಣಿ ಮಾಡಬಹುದಾಗಿದೆ.

'ಭಾರತ ಕೋವಿಡ್-19 ಲಸಿಕೆ ರಫ್ತಿನ ಮೇಲೆ ನಿಷೇಧ ಹೇರಿಲ್ಲ''ಭಾರತ ಕೋವಿಡ್-19 ಲಸಿಕೆ ರಫ್ತಿನ ಮೇಲೆ ನಿಷೇಧ ಹೇರಿಲ್ಲ'

 No Fresh Registrations For Covid Vaccination Of Healthcare And Frontline Workers

ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್ ಲೈನ್ ಕಾರ್ಯಕರ್ತರಿಗೆ ಮೊದಲು ಕೋವಿಡ್ ಲಸಿಕೆ ನೀಡಲಾಯಿತು. ಲಸಿಕೆ ನೀಡುವುದನ್ನು ಹಲವು ಬಾರಿ ವಿಸ್ತರಣೆ ಮಾಡಲಾಯಿತು. ಮೊದಲು ಫೆಬ್ರವರಿ 25ರ ತನಕ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು, ಬಳಿಕ ಅದನ್ನು ಮಾರ್ಚ್ 6ರ ತನಕ ವಿಸ್ತರಿಸಲಾಯಿತು.

ಆಸ್ಟ್ರಾಜೆನಿಕಾ ಲಸಿಕೆ ಪಡೆದ 30 ಮಂದಿಯಲ್ಲಿ ಬ್ಲಡ್ ಕ್ಲಾಟ್ ಪ್ರಕರಣಆಸ್ಟ್ರಾಜೆನಿಕಾ ಲಸಿಕೆ ಪಡೆದ 30 ಮಂದಿಯಲ್ಲಿ ಬ್ಲಡ್ ಕ್ಲಾಟ್ ಪ್ರಕರಣ

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಕುರಿತು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವನ್ನು ಬರೆದಿದ್ದಾರೆ. "ಅರ್ಹರಲ್ಲದ ವ್ಯಕ್ತಿಗಳು ಸಹ ಕೋವಿಡ್ ಲಸಿಕೆ ಪಡೆಯುತ್ತಿದ್ದಾರೆ ಎಂದು ದೂರುಗಳು ಬಂದಿವೆ. ಇದು ಮಾರ್ಗಸೂಚಿಯ ಉಲ್ಲಂಘನೆಯಾಗಿದೆ. ಆದ್ದರಿಂದ, ಹೊಸ ನೋಂದಣಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ" ಎಂದು ಪತ್ರದಲ್ಲಿ ತಿಳಿಸಿದ್ದಾರೆ.

"ಆರೋಗ್ಯ ಮತ್ತು ಫ್ರಂಟ್ ಲೈನ್ ಕಾರ್ಯಕರ್ತರ ಹೆಸರು ನೋಂದಣಿ ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ. 45 ವರ್ಷ ಮೇಲ್ಪಟ್ಟ ವ್ಯಕ್ತಿಗಳ ಹೆಸರು ನೋಂದಣಿ ಕೋವಿನ್ ಪೋರ್ಟಲ್‌ನಲ್ಲಿ ಮುಂದುವರೆಯಲಿದೆ" ಎಂದು ಸ್ಪಷ್ಟಪಡಿಸಲಾಗಿದೆ.

English summary
Union govt directed states and Union Territories to stop fresh registrations for Covid-19 vaccination of healthcare workers and frontline workers with immediate effect. However they will continue to get vaccinated against Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X