ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ
ನವದೆಹಲಿ, ಆಗಸ್ಟ್ 11 : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೆದುಳಿನ ತುರ್ತು ಶಸ್ತ್ರ ಚಿಕಿತ್ಸೆ ಬಳಿಕ ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ ಎಂದು ಆಸ್ಪತ್ರೆ ಹೇಳಿದೆ.
Recommended Video
ಪ್ರಣಬ್ ಮುಖರ್ಜಿ (84) ಅವರನ್ನು ಸೋಮವಾರ ಬೆಳಗ್ಗೆ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಮೆದುಳಿನಲ್ಲಿ ಉಂಟಾಗಿದ್ದ ಗೆಡ್ಡೆಯನ್ನು ತೆಗೆಯಲು ರಾತ್ರಿ ತುರ್ತು ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.
ಸೋಮವಾರ ರಾತ್ರಿಯಿಂದ ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಸೇನಾ ಆಸ್ಪತ್ರೆ ಮಂಗಳವಾರ ಸಂಜೆ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಪ್ರಣಬ್ ಮುಖರ್ಜಿ ಅವರು ವೆಂಟಿಲೇಟರ್ ಸಹಾಯದಲ್ಲಿಯೇ ಇದ್ದಾರೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿಲ್ಲ. ಪರಿಸ್ಥಿತಿ ಗಂಭೀರವಾಗಿಯೇ ಇದೆ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾವಹಿಸಿದೆ.
ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ಮಂಗಳವಾರ ಮಹಾ ಮೃತ್ಯುಂಜಯ ಹೋಮವನ್ನು ಮಾಡಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಾತ್ರಿ ಸೇನಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜೊತೆ ಪ್ರಣಬ್ ಮುಖರ್ಜಿ ಆರೋಗ್ಯದ ಬಗ್ಗೆ ಚರ್ಚೆ ನಡೆಸಿದ್ದರು.
ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಸೋಮವಾರ ತಿಳಿದುಬಂದಿತ್ತು. ಆದ್ದರಿಂದ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಮೆದುಳಿನ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿತ್ತು.












Click it and Unblock the Notifications