ಗುಪ್ತಚರ ವೈಫಲ್ಯವಾಗಿಲ್ಲ, ಎನ್‌ಕೌಂಟರ್‌ನಲ್ಲಿ 30 ಮಂದಿ ನಕ್ಸಲರ ಹತ್ಯೆ
ನವದೆಹಲಿ, ಏಪ್ರಿಲ್ 05: ಛತ್ತೀಸ್‌ಗಢದಲ್ಲಿ ನಡೆದ ನಕ್ಸಲರ ನಿಗ್ರಹ ಕಾರ್ಯಾಚರಣೆಯಲ್ಲಿ ಕನಿಷ್ಠ 30 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಗುಪ್ತಚರ ಮಾಹಿತಿಯ ವಿಫಲವಾಗಿಲ್ಲ ಎಂಬುದು ತಿಳಿದುಬಂದಿದೆ.
ಛತ್ತೀಸ್‌ಗಢದಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ 22 ಮಂದಿ ಸೈನಿಕರು ಹುತಾತ್ಮರಾದ ಬೆನ್ನಲ್ಲೇ ಇದೇ ಕಾರ್ಯಾಚರಣೆಯಲ್ಲಿ ಸುಮಾರು 25-30 ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯ ಮಹಾನಿರ್ದೇಶಕ ಮುಖ್ಯಸ್ಥ ಕುಲದೀಪ್ ಸಿಂಗ್ ಅವರು ಮಾಹಿತಿ ನೀಡಿದ್ದು, ' ನಕ್ಸಲರ ವಿರುದ್ಧ ಕಾರ್ಯಾಚರಣೆ ಅಥವಾ ಗುಪ್ತಚರ ವೈಫ್ಯಲ್ಯವಾಗಿಲ್ಲ, 25ರಿಂದ 30 ನಕ್ಸಲರನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕುಲ್‌ದೀಪ್ ಸಿಂಗ್ ಅವರು, 'ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ಎಷ್ಟು ನಕ್ಸಲರು ಹತರಾಗಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ಕಲೆ ಹಾಕಲಾಗುತ್ತಿದೆ.
ಗುಪ್ತಚರ ಅಥವಾ ಕಾರ್ಯಾಚರಣೆಯಲ್ಲಿ ವೈಫಲ್ಯವಾಗಿದೆ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಇದು ಕೇವಲ ಗುಪ್ತಚರ ವೈಫಲ್ಯವಾಗಿದ್ದರೆ, ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿರಲಿಲ್ಲ. ಹಾಗೆಯೇ ಕಾರ್ಯಾಚರಣೆ ವೈಫಲ್ಯವಾಗಿದ್ದರೆ ಅನೇಕ ನಕ್ಸಲರು ಬಲಿಯಾಗುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶವಗಳ ಸಾಗಿಸಲು ಟ್ರಾಕ್ಯರ್ ಬಳಸಿದ ನಕ್ಸಲರು
ಇದೇ ವೇಳೆ ಕಾರ್ಯಾಚರಣೆಯಲ್ಲಿ ಹತರಾದ ಮತ್ತು ಗಾಯಗೊಂಡವರನ್ನು ಸಾಗಿಸಲು ನಕ್ಸಲರು ಟ್ರ್ಯಾಕ್ಟರ್ ಗಳನ್ನು ಬಳಕೆ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹತರಾಗಿರುವ ಮತ್ತು ಗಾಯಾಳುಗಳ ದೇಹಗಳನ್ನು ಸ್ಥಳದಿಂದ ಸಾಗಿಸಲು ಮೂರು ಟ್ರ್ಯಾಕ್ಟರ್‌ಗಳನ್ನು ನಕ್ಸಲರು ಬಳಸಿದ್ದರು. ಕಾರ್ಯಾಚರಣೆಯಲ್ಲಿ ಎಷ್ಟು ನಕ್ಸಲರು ಹತರಾಗಿದ್ದಾರೆಂದು ನಿಖರವಾಗಿ ಹೇಳುವುದು ಕಷ್ಟ. ಅದರೆ ಕನಿಷ್ಠ 25-30 ನಕ್ಸಲರು ಸಾವನ್ನಪ್ಪಿರಬಹುದು ಎಂದು ಹೇಳಿದ್ದಾರೆ.

ಗಾಯಾಳು ಸೈನಿಕರ ಭೇಟಿ
ಇದೇ ವೇಳೆ ನಕ್ಸಲ್ ಕಾರ್ಯಾಚರಣೆಯ ವೇಳೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಸೋಮವಾರ ಭೇಟಿ ಮಾಡುವುದಾಗಿ ಅವರು ತಿಳಿಸಿದ್ದಾರೆ.

400 ನಕ್ಸಲರಿಂದ ದಾಳಿ
ಬಿಜಾಪುರ ಜಿಲ್ಲೆಯ ತರೆಮ್, ಉಸೂರ್, ಪಮೇಡ್, ಸುಕ್ಮಾ ಜಿಲ್ಲೆಯ ಮಿನ್‌ಪಾ ಹಾಗೂ ನರ್ಸಾಪುರಂ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಕಾರ್ಯಾಚರಣೆ ಆರಂಭವಾಗಿತ್ತು. 2,000 ಸಿಬ್ಬಂದಿ ಭಾಗಿಯಾಗಿದ್ದರು. ಅಧಿಕಾರಿಯೊಬ್ಬರ ಪ್ರಕಾರ, ಗುಂಡಿನ ದಾಳಿ ಕೃತ್ಯದಲ್ಲಿ ಸುಮಾರು 400 ಮಾವೋವಾದಿಗಳು ಭಾಗಿಯಾಗಿದ್ದರು. ಪಿಎಲ್‌ಜಿಎ ಸಂಘಟನೆ 1ನೇ ಬೆಟಾಲಿಯನ್‌ನ ಹಿದ್ಮಾ ಮತ್ತು ಆತನ ಸಹಚರರಾದ ಸುಜಾತಾ ಈ ದಾಳಿಯ ಹಿಂದಿದ್ದಾರೆ ಎಂದು ಶಂಕಿಸಲಾಗಿದೆ. ಕೋಬ್ರಾ ಯೋಧರು ತೀವ್ರ ಪ್ರತಿರೋಧ ತೋರಿದ್ದರಿಂದ ನಕ್ಸಲರು ಇನ್ನಷ್ಟು ದಾಳಿ ಮುಂದುವರಿಸಲಾಗಲಿಲ್ಲ.

ಮೂರು ದಿಕ್ಕಿನಿಂದ ದಾಳಿ ನಡೆಸಿದ್ದರು
ಮಾವೋವಾದಿಗಳು ಮೂರು ದಿಕ್ಕಿನಿಂದ ಭದ್ರತಾ ಪಡೆಯನ್ನು ಸುತ್ತುವರಿದಿದ್ದು, ಲೈಟ್ ಮಷಿನ್ ಗನ್ ಬಳಸಿ ಗುಂಡಿನ ಸುರಿಮಳೆಗೈದಿದ್ದಾರೆ ಹಾಗೂ ಸುಧಾರಿತ ಸ್ಫೋಟಕ ಸಾಧನ (ಎಲ್ಇಡಿ)ವನ್ನೂ ದಾಳಿಗೆ ಬಳಸಿದ್ದಾರೆ. ನಕ್ಸಲೀಯರ ಕಡೆಯೂ 10 ರಿಂದ 12 ಜನರು ಸತ್ತಿರುವ ಶಂಕೆ ಇದ್ದು, ಶವಗಳನ್ನು ಅವರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಒಯ್ದಿದ್ದಾರೆ. ಇನ್ನು ಗಾಯಗೊಂಡಿರುವ ಯೋಧರು, ಭದ್ರತಾ ಸಿಬ್ಬಂದಿಗಳಲ್ಲಿ 7 ಜನರನ್ನು ರಾಯಪುರದಲ್ಲಿನ ಆಸ್ಪತ್ರೆ ಹಾಗೂ 23 ಜನರನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications