• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗುಪ್ತಚರ ವೈಫಲ್ಯವಾಗಿಲ್ಲ, ಎನ್‌ಕೌಂಟರ್‌ನಲ್ಲಿ 30 ಮಂದಿ ನಕ್ಸಲರ ಹತ್ಯೆ

|
Google Oneindia Kannada News

ನವದೆಹಲಿ, ಏಪ್ರಿಲ್ 05: ಛತ್ತೀಸ್‌ಗಢದಲ್ಲಿ ನಡೆದ ನಕ್ಸಲರ ನಿಗ್ರಹ ಕಾರ್ಯಾಚರಣೆಯಲ್ಲಿ ಕನಿಷ್ಠ 30 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಗುಪ್ತಚರ ಮಾಹಿತಿಯ ವಿಫಲವಾಗಿಲ್ಲ ಎಂಬುದು ತಿಳಿದುಬಂದಿದೆ.
ಛತ್ತೀಸ್‌ಗಢದಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ 22 ಮಂದಿ ಸೈನಿಕರು ಹುತಾತ್ಮರಾದ ಬೆನ್ನಲ್ಲೇ ಇದೇ ಕಾರ್ಯಾಚರಣೆಯಲ್ಲಿ ಸುಮಾರು 25-30 ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯ ಮಹಾನಿರ್ದೇಶಕ ಮುಖ್ಯಸ್ಥ ಕುಲದೀಪ್ ಸಿಂಗ್ ಅವರು ಮಾಹಿತಿ ನೀಡಿದ್ದು, ' ನಕ್ಸಲರ ವಿರುದ್ಧ ಕಾರ್ಯಾಚರಣೆ ಅಥವಾ ಗುಪ್ತಚರ ವೈಫ್ಯಲ್ಯವಾಗಿಲ್ಲ, 25ರಿಂದ 30 ನಕ್ಸಲರನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದ್ದಾರೆ.

ಭಾರತೀಯ ಸೇನೆಯ ಬೃಹತ್ ನಕ್ಸಲ್ ನಿಗ್ರಹ ಕಾರ್ಯಾಚರಣೆ ಎಡವಿದ್ದೆಲ್ಲಿ?ಭಾರತೀಯ ಸೇನೆಯ ಬೃಹತ್ ನಕ್ಸಲ್ ನಿಗ್ರಹ ಕಾರ್ಯಾಚರಣೆ ಎಡವಿದ್ದೆಲ್ಲಿ?

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕುಲ್‌ದೀಪ್ ಸಿಂಗ್ ಅವರು, 'ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ಎಷ್ಟು ನಕ್ಸಲರು ಹತರಾಗಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ಕಲೆ ಹಾಕಲಾಗುತ್ತಿದೆ.

ನಕ್ಸಲ್ ದಾಳಿ ನಡೆದ ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿನಕ್ಸಲ್ ದಾಳಿ ನಡೆದ ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

ಗುಪ್ತಚರ ಅಥವಾ ಕಾರ್ಯಾಚರಣೆಯಲ್ಲಿ ವೈಫಲ್ಯವಾಗಿದೆ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಇದು ಕೇವಲ ಗುಪ್ತಚರ ವೈಫಲ್ಯವಾಗಿದ್ದರೆ, ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿರಲಿಲ್ಲ. ಹಾಗೆಯೇ ಕಾರ್ಯಾಚರಣೆ ವೈಫಲ್ಯವಾಗಿದ್ದರೆ ಅನೇಕ ನಕ್ಸಲರು ಬಲಿಯಾಗುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶವಗಳ ಸಾಗಿಸಲು ಟ್ರಾಕ್ಯರ್ ಬಳಸಿದ ನಕ್ಸಲರು

ಶವಗಳ ಸಾಗಿಸಲು ಟ್ರಾಕ್ಯರ್ ಬಳಸಿದ ನಕ್ಸಲರು

ಇದೇ ವೇಳೆ ಕಾರ್ಯಾಚರಣೆಯಲ್ಲಿ ಹತರಾದ ಮತ್ತು ಗಾಯಗೊಂಡವರನ್ನು ಸಾಗಿಸಲು ನಕ್ಸಲರು ಟ್ರ್ಯಾಕ್ಟರ್ ಗಳನ್ನು ಬಳಕೆ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹತರಾಗಿರುವ ಮತ್ತು ಗಾಯಾಳುಗಳ ದೇಹಗಳನ್ನು ಸ್ಥಳದಿಂದ ಸಾಗಿಸಲು ಮೂರು ಟ್ರ್ಯಾಕ್ಟರ್‌ಗಳನ್ನು ನಕ್ಸಲರು ಬಳಸಿದ್ದರು. ಕಾರ್ಯಾಚರಣೆಯಲ್ಲಿ ಎಷ್ಟು ನಕ್ಸಲರು ಹತರಾಗಿದ್ದಾರೆಂದು ನಿಖರವಾಗಿ ಹೇಳುವುದು ಕಷ್ಟ. ಅದರೆ ಕನಿಷ್ಠ 25-30 ನಕ್ಸಲರು ಸಾವನ್ನಪ್ಪಿರಬಹುದು ಎಂದು ಹೇಳಿದ್ದಾರೆ.

ಗಾಯಾಳು ಸೈನಿಕರ ಭೇಟಿ

ಗಾಯಾಳು ಸೈನಿಕರ ಭೇಟಿ

ಇದೇ ವೇಳೆ ನಕ್ಸಲ್ ಕಾರ್ಯಾಚರಣೆಯ ವೇಳೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಸೋಮವಾರ ಭೇಟಿ ಮಾಡುವುದಾಗಿ ಅವರು ತಿಳಿಸಿದ್ದಾರೆ.

400 ನಕ್ಸಲರಿಂದ ದಾಳಿ

400 ನಕ್ಸಲರಿಂದ ದಾಳಿ

ಬಿಜಾಪುರ ಜಿಲ್ಲೆಯ ತರೆಮ್‌, ಉಸೂರ್‌, ಪಮೇಡ್‌, ಸುಕ್ಮಾ ಜಿಲ್ಲೆಯ ಮಿನ್‌ಪಾ ಹಾಗೂ ನರ್ಸಾಪುರಂ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಕಾರ್ಯಾಚರಣೆ ಆರಂಭವಾಗಿತ್ತು. 2,000 ಸಿಬ್ಬಂದಿ ಭಾಗಿಯಾಗಿದ್ದರು. ಅಧಿಕಾರಿಯೊಬ್ಬರ ಪ್ರಕಾರ, ಗುಂಡಿನ ದಾಳಿ ಕೃತ್ಯದಲ್ಲಿ ಸುಮಾರು 400 ಮಾವೋವಾದಿಗಳು ಭಾಗಿಯಾಗಿದ್ದರು. ಪಿಎಲ್‌ಜಿಎ ಸಂಘಟನೆ 1ನೇ ಬೆಟಾಲಿಯನ್‌ನ ಹಿದ್ಮಾ ಮತ್ತು ಆತನ ಸಹಚರರಾದ ಸುಜಾತಾ ಈ ದಾಳಿಯ ಹಿಂದಿದ್ದಾರೆ ಎಂದು ಶಂಕಿಸಲಾಗಿದೆ. ಕೋಬ್ರಾ ಯೋಧರು ತೀವ್ರ ಪ್ರತಿರೋಧ ತೋರಿದ್ದರಿಂದ ನಕ್ಸಲರು ಇನ್ನಷ್ಟು ದಾಳಿ ಮುಂದುವರಿಸಲಾಗಲಿಲ್ಲ.

ಮೂರು ದಿಕ್ಕಿನಿಂದ ದಾಳಿ ನಡೆಸಿದ್ದರು

ಮೂರು ದಿಕ್ಕಿನಿಂದ ದಾಳಿ ನಡೆಸಿದ್ದರು

ಮಾವೋವಾದಿಗಳು ಮೂರು ದಿಕ್ಕಿನಿಂದ ಭದ್ರತಾ ಪಡೆಯನ್ನು ಸುತ್ತುವರಿದಿದ್ದು, ಲೈಟ್ ಮಷಿನ್ ಗನ್ ಬಳಸಿ ಗುಂಡಿನ ಸುರಿಮಳೆಗೈದಿದ್ದಾರೆ ಹಾಗೂ ಸುಧಾರಿತ ಸ್ಫೋಟಕ ಸಾಧನ (ಎಲ್ಇಡಿ)ವನ್ನೂ ದಾಳಿಗೆ ಬಳಸಿದ್ದಾರೆ. ನಕ್ಸಲೀಯರ ಕಡೆಯೂ 10 ರಿಂದ 12 ಜನರು ಸತ್ತಿರುವ ಶಂಕೆ ಇದ್ದು, ಶವಗಳನ್ನು ಅವರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಒಯ್ದಿದ್ದಾರೆ. ಇನ್ನು ಗಾಯಗೊಂಡಿರುವ ಯೋಧರು, ಭದ್ರತಾ ಸಿಬ್ಬಂದಿಗಳಲ್ಲಿ 7 ಜನರನ್ನು ರಾಯಪುರದಲ್ಲಿನ ಆಸ್ಪತ್ರೆ ಹಾಗೂ 23 ಜನರನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

English summary
There was no intelligence or operational failure in the operation in Chhattisgarh, CRPF Chief Kuldiep Singh said in the wake of the killing of 22 security personnel by Maoists in the state
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X