Mekedatu Project: ಕರ್ನಾಟಕ 'ತಿಪ್ಪರಲಾಗ ಹಾಕಿದ್ರೂʼ ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ: ತಮಿಳುನಾಡು!
Mekedatu Project: ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಪರಿಸ್ಥಿತಿ ಸುಧಾರಿಸುತ್ತಿದೆ. ಎರಡೂ ರಾಜ್ಯಗಳ ನಡುವೆ ಇರುವ ಕಾವೇರಿ ನೀರು ಹಂಚಿಕೆ ವಿವಾದ ಹಾಗೂ ಮೇಕೆದಾಟು ಯೋಜನೆ ವಿಷಯಗಳಿಗೆ ಪರಿಹಾರ ಸಿಗಲಿದೆ ಎಂದು ಕನ್ನಡಿಗರು ನಿಟ್ಟುಸಿರುವ ಬಿಡುವಾಗಲೇ ತಮಿಳುನಾಡು ಸರ್ಕಾರವು ಕ್ಯಾತೆ ತೆಗೆದಿದೆ. ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ, ಕೇಂದ್ರದಿಂದ ದಕ್ಷಿಣ ರಾಜ್ಯಗಳಿಗೆ ಅನುದಾನ ತಾರತಮ್ಯ ಹಾಗೂ ಹಿಂದಿ ಹೇರಿಕೆಯ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳು ಒಂದಾಗಿದ್ದು. ದಕ್ಷಿಣ ಭಾರತದ ರಾಜ್ಯಗಳ ನಡುವೆ ಇರುವ ಸಮಸ್ಯೆಗಳು ಸಹ ಇದೇ ಸಂದರ್ಭದಲ್ಲಿ ಪರಿಹಾರವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಇರುವ ಜಲ ವಿವಾದ ಸದ್ಯಕ್ಕೆ ಮುಗಿಯವಂತೆ ಕಾಣಿಸುತ್ತಿಲ್ಲ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಜಾರಿಗೆ ಅವಕಾಶ ಕೊಡುವುದಿಲ್ಲ ಎಂದು ತಮಿಳುನಾಡು ಸರ್ಕಾರವು ಕರ್ನಾಟಕಕ್ಕೆ ಟಕ್ಕರ್ ಕೊಟ್ಟಿದೆ.
ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆ ಜಾರಿಗೆ ತಿಪ್ಪರಲಾಗ ಹಾಕಿದರೂ ಜಾರಿ ಮಾಡುವುದಕ್ಕೆ ಬಿಡುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶ ಹೊಂದಿರುವ ಮಹತ್ವದ ಮೇಕೆದಾಟು ಯೋಜನೆ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಈ ಮೂಲಕ ಮತ್ತೊಮ್ಮೆ ಕರ್ನಾಟಕಕ್ಕೆ ಟಕ್ಕರ್ ಕೊಡಲಾಗಿದೆ. ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ ಶಿವಕುಮಾರ್ ಅವರು ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆಯ ಬಗ್ಗೆಯೂ ಡಿ.ಕೆ ಶಿವಕುಮಾರ್ ಅವರು ಚರ್ಚೆ ಮಾಡಬೇಕಿತ್ತು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಎರಡೂ ರಾಜ್ಯಗಳಲ್ಲಿ ಇರುವ ಹಿನ್ನೆಲೆಯಲ್ಲಿ ಜಲ ವಿವಾದಕ್ಕೆ ಪರಿಹಾರ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.

ಈ ನಡುವೆ ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆ ಜಾರಿ ಮಾಡುವುದಕ್ಕೆ ಅನುಮತಿ ಪಡೆದುಕೊಳ್ಳಲು ಮುಂದಾಗುತ್ತಿದೆ. ಕರ್ನಾಟಕ ಮೇಕೆದಾಟು ಯೋಜನೆಗೆ ಒಂದು ಹೆಜ್ಜೆ ಮುಂದೆ ಇರಿಸಿರುವಾಗಲೇ ತಮಿಳುನಾಡು ಕ್ಯಾತೆ ತೆಗೆದಿದೆ. ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ಅಥವಾ ಮೇಕೆದಾಡು ಯೋಜನೆ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಈ ಯೋಜನೆ ಜಾರಿಗೆ ಅವಕಾಶ ನೀಡದಂತೆ ಕಾನೂನು ರೂಪಿಸಲಾಗುವುದು. ಅಲ್ಲದೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುವುದು ಎಂದು ತಮಿಳುನಾಡು ಹೇಳಿದೆ. ಈ ವಿಚಾರ ಇದೀಗ ಮತ್ತೆ ಭಾರೀ ಚರ್ಚೆಗೆ ಕಾರಣವಾಗಿದೆ.
ಮೇಕೆದಾಟು ಇಲ್ಲವೇ ಕರ್ನಾಟಕದ ಯಾವುದೇ ಭಾಗದಲ್ಲಾದರೂ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಕರ್ನಾಟಕದಲ್ಲಿ ಡ್ಯಾಂ ನಿರ್ಮಾಣ ಮಾಡುವುದು ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪು, ನ್ಯಾಯಾಧೀಕರಣದ ಅಂತಿಮ ಆದೇಶ ಹಾಗೂ ತಮಿಳುನಾಡಿನ ಹಕ್ಕುಗಳ ಸುರಕ್ಷತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಹೇಳಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ: ಕರ್ನಾಟಕದಿಂದ ಮನವಿ
ಇನ್ನು ಮೇಕೆದಾಟು ಯೋಜನೆಯನ್ನು ಜಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಆದ್ಯತೆ ಮೇರೆಗೆ ಅನುಮೋದನೆ ಕೊಡುವಂತೆ ಕೇಂದ್ರೀಯ ಜಲ ಆಯೋಗಕ್ಕೆ ನಿರ್ದೇಶನ ಕೊಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಕರ್ನಾಟಕದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಈ ಯೋಜನೆ ಜಾರಿಗೆ ಅಡ್ಡಿಪಡಿಸುತ್ತಿದೆ.












Click it and Unblock the Notifications