ಯಾಕೂಬ್ ಮೆಮನ್ ಗೆ ಗಲ್ಲುಶಿಕ್ಷೆ ಕಾಯಂ : ಸುಪ್ರೀಂ

ನವದೆಹಲಿ, ಜುಲೈ 29: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ ಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ. ಗಲ್ಲುಶಿಕ್ಷೆ ತಡೆಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟಿನ ತ್ರಿಸದಸ್ಯ ವಿಸ್ತೃತ ನ್ಯಾಯಪೀಠ ಬುಧವಾರ ಮಧ್ಯಾಹ್ನ ತಳ್ಳಿ ಹಾಕಿದೆ. ಹೀಗಾಗಿ ಪೂರ್ವ ನಿಗದಿಯಂತೆ ಜುಲೈ 30ರಂದೇ ನಾಗ್ಪುರ ಜೈಲಿನಲ್ಲಿ ಮೆಮನ್ ಗೆ ಗಲ್ಲುಶಿಕ್ಷೆ ವಿಧಿಸಲಾಗುತ್ತದೆ.

ಯಾಕೂಬ್ ಮೆಮನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ಅವರು ಹೊಸ ತ್ರಿಸದಸ್ಯ ಪೀಠ ರಚಿಸಿದ್ದರು. ಜಸ್ಟೀಸ್ಸ್ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರು ಮೆಮನ್ ಜೀವನ್ಮರಣ ಪ್ರಶ್ನೆಗೆ ಉತ್ತರ ನೀಡಿದ್ದಾರೆ. [1993ರ ಮುಂಬೈ ಸ್ಫೋಟ 2 ದಶಕದ ನಂತರ ತೀರ್ಪು-timeline]

ಜುಲೈ 30ರಂದು ಗಲ್ಲುಶಿಕ್ಷೆ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆ ನೀಡಿತ್ತು. ತ್ರಿಸದಸ್ಯ ವಿಭಾಗೀಯ ನ್ಯಾಯಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು. [ಮೆಮನ್ ಬೆಂಬಲಿಸುವವರು ದೇಶ ದ್ರೋಹಿಗಳು: ಟ್ವೀಟ್ಸ್]

No Mercy for Yakub Memon to be hanged on

ಯಾಕೂಬ್ ಮೆಮನ್ ಪರ ಆರ್ ರಾಮಚಂದ್ರನ್ ಅವರು ವಾದಿಸುತ್ತಿದ್ದು, ಕ್ಯೂರೇಟರ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠದ ಬಗ್ಗೆ ಪ್ರಶ್ನೆ ಎತ್ತಿದ್ದರು. ಈ ಕ್ಯೂರೇಟರ್ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಪೀಠ ತಿರಸ್ಕರಿದ್ದರಲ್ಲಿ ಯಾವುದೇ ಲೋಪ ಎಸಗಿಲ್ಲ ಎಂದು ಹೊಸ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. [ಹುಟ್ಟುಹಬ್ಬದ ದಿನದಂದೇ ಯಾಕೂಬ್ ಗೆ ಗಲ್ಲು ಶಿಕ್ಷೆ]

ಯಾಕೂಬ್ ಫಿಟ್ ಆಗಿದ್ದಾನೆ: ಈ ನಡುವೆ ಟಿವಿ ವರದಿಗಳ ಪ್ರಕಾರ ನಾಗ್ಪುರ ಜೈಲಿನಲ್ಲಿ ನಾಳೆ ಯಾಕೂಬ್ ರನ್ನು ಗಲ್ಲಿಗೇರಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ವೈದ್ಯರಿಂದ ಯಾಕೂಬ್ ದೈಹಿಕ ಹಾಗೂ ಮಾನಸಿಕ ಪರೀಕ್ಷೆ ಪೂರ್ಣಗೊಳಿಸಲಾಗಿದ್ದು, ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ವರದಿ ನೀಡಿದ್ದಾರೆ.

ಕ್ಯೂರೇಟರ್ ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಇದ್ದ ಪರಿಸ್ಥಿತಿಗೂ ಈಗಿನ ಪರಿಸ್ಥಿತಿಗೂ ವ್ಯತ್ಯಾಸವಿದೆ. 1996 ಸ್ಕಿಜೋಫ್ರೆನಿಯಾ ಕಾಯಿಲೆಯಿಂದ ಬಳಲುತ್ತಿದ್ದೇನೆ. 20 ವರ್ಷಗಳಿಂದ ಜೈಲುವಾಸ ಅನುಭವಿಸಿದ್ದೇನೆ. ನನಗೆ ನೀಡಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ, ಗಲ್ಲು ಹಾಗೂ ಜೀವಾವಧಿ ಎರಡನ್ನು ಹೇಗೆ ಅನುಭವಿಸಲಿ ಎಂದು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+