ಕೊರೊನಾವೈರಸ್ ಕಾಲದಲ್ಲಿ ಗಂಗಾ ನದಿಯಲ್ಲಿ ತೇಲಿದ ಹೆಣಗಳ ಸಂಖ್ಯೆ ಎಷ್ಟು?
ನವದೆಹಲಿ, ಫೆಬ್ರವರಿ 8: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ಸಂದರ್ಭದಲ್ಲಿ ಅತಿಹೆಚ್ಚು ಸಾವಿನ ಪ್ರಕರಣ ವರದಿಯಾಗಿದ್ದವು. ಅಂದು ಅಂತ್ಯಸಂಸ್ಕಾರಕ್ಕೂ ವ್ಯವಸ್ಥೆ ಮತ್ತು ಸಮಯವಿಲ್ಲದೇ ಅದೆಷ್ಟೋ ಮೃತದೇಹಗಳನ್ನು ಗಂಗಾ ನದಿಗೆ ಎಸೆಯಲಾಗಿದ್ದು, ಅದರ ಕುರಿತು ಇಂದಿಗೂ ಲೆಕ್ಕ ಸಿಕ್ಕಿಲ್ಲ.
ದೇಶದಲ್ಲಿ ಕೊವಿಡ್-19 ಎರಡನೇ ಅಲೆ ವೇಳೆ ಗಂಗಾ ನದಿಗೆ ಎಸೆಯಲಾದ ಮೃತದೇಹಗಳು ಎಷ್ಟು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ್ ತುಡು, ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಮಿಷನ್ (ಎನ್‌ಎಂಸಿಜಿ) ನದಿಯಲ್ಲಿ ತೇಲುತ್ತಿರುವ ಮೃತದೇಹಗಳು ಮತ್ತು ತೆಗೆದುಕೊಂಡ ಕ್ರಮಗಳ ಕುರಿತು ವರದಿಯನ್ನು ರಾಜ್ಯ ಸರ್ಕಾರದಿಂದ ಕೇಳಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರವು ಗಂಗಾ ನದಿ ಶುದ್ಧೀಕರಕ್ಕೆ ಸಂಬಂಧಿಸಿದಂತೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಂಡಿದೆ. ಕೊವಿಡ್-19 ಕಾಲದಲ್ಲಿ ಮೃತದೇಹಗಳ ವಿಲೇವಾರಿ ಮತ್ತು ಮೃತದೇಹಗಳ ನಿರ್ವಹಣೆಗೆ ಏನೆಲ್ಲ ಕ್ರಮಗಳನ್ನು ಅನುಸರಿಸಿದೆ ಎಂಬುದರ ಬಗ್ಗೆ ಮಾಹಿತಿ ಕೋರಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ್ ತುಡು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರ:
"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಪ್ರಾಣ ಬಿಟ್ಟಿರುವವರಿಗೆ ಸಂಬಂಧಿಸಿದಂತೆ ಗಂಗಾ ನದಿಯಲ್ಲಿ ಎಸೆಯಲಾಗಿದೆ ಎಂದು ಅಂದಾಜಿಸಲಾದ ಮೃತದೇಹಗಳ ಸಂಖ್ಯೆಯ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ," ಎಂದು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ್ ತುಡು ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ನಮಾಮಿ ಗಂಗೆ ಕಾರ್ಯಕ್ರಮದಡಿಯಲ್ಲಿ ಮಾಧ್ಯಮ ಮತ್ತು ಪ್ರಚಾರ ಸೇರಿದಂತೆ ಸಂವಹನ ಮತ್ತು ಸಾರ್ವಜನಿಕ ಔಟ್ರೀಚ್ ಮುಖ್ಯಸ್ಥರ ಅಡಿಯಲ್ಲಿ 126 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು.
ಇತ್ತೀಚಿನ ಪುಸ್ತಕವೊಂದರಲ್ಲಿ, ಮಾಜಿ NMCG ಮಹಾನಿರ್ದೇಶಕ ರಾಜೀವ್ ರಂಜನ್ ಮಿಶ್ರಾ ಅವರು ಜಿಲ್ಲಾಧಿಕಾರಿಗಳು ಮತ್ತು ಪಂಚಾಯತ್ ಸಮಿತಿಗಳ ವರದಿಗಳ ಪ್ರಕಾರ, COVID-19 ರ ಎರಡನೇ ಅಲೆಯ ಸಮಯದಲ್ಲಿ ಗಂಗಾ ನದಿಗೆ ಎಸೆಯಲ್ಪಟ್ಟ ದೇಹಗಳ ಸಂಖ್ಯೆ 300ಕ್ಕಿಂತ ಹೆಚ್ಚಿಲ್ಲ ಎಂದು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications