ಇನ್ನೊಂದು ವರ್ಷ ದೇಶದಲ್ಲಿ ಯಾವುದೇ ಹೊಸ ಯೋಜನೆ ಘೋಷಣೆಯಿಲ್ಲ

ನವದೆಹಲಿ, ಜೂನ್ 5: ಇಡೀ ದೇಶವೇ ಕೊರೊನಾ ಮಹಾಮಾರಿಗೆ ತುತ್ತಾಗಿದೆ. ಕೇಂದ್ರ ಸರ್ಕಾರವು ಕೂಡ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ.

Recommended Video

      ಫೊರ್ಬ್ಸ್ ವಿಶ್ವದ ಅತ್ಯಂತ ಶ್ರೀಮಂತ ತಾರೆಯರ ಪಟ್ಟಿಯಲ್ಲಿ ಅಕ್ಷಯ್ ಕುಮಾರ್ ಏಕೈಕ ಭಾರತೀಯ | Oneindia Kannada

      ಹಾಗಾಗಿ ಈ ವರ್ಷ ಯಾವುದೇ ಹೊಸ ಯೋಜನೆಗಳ ಘೋಷಣೆಯಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

      ಈ ಕುರಿತು ಕೇಂದ್ರ ವಿತ್ತ ಸಚಿವಾಲಯ ಆದೇಶ ಹೊರಡಿಸಿದ್ದು, ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಕ್ರೂಢೀಕರಿಸಬೇಕಿದ್ದು, ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ.

      ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಕೇಂದ್ರ ಸರ್ಕಾರ ಯಾವುದೇ ಹೊಸ ಯೋಜನೆಯನ್ನು ಘೋಷಣೆ ಮಾಡುವುದಿಲ್ಲ ಎಂದು ಹೇಳಿದೆ. ದೇಶದಲ್ಲಿ ಈ ವರೆಗೂ 2,26,770 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದ್ದು, ಮಹಾಮಾರಿ ವೈರಸ್'ಗೆ ಸುಮಾರು 6,348 ಮಂದಿ ಸಾವನ್ನಪ್ಪಿದ್ದಾರೆ.

      ಪ್ರಧಾನಮಂತ್ರಿ ಗರೋಬ್ ಕಲ್ಯಾಣ ಯೋಜನೆ

      ಪ್ರಧಾನಮಂತ್ರಿ ಗರೋಬ್ ಕಲ್ಯಾಣ ಯೋಜನೆ

      ಪ್ರಮುಖವಾಗಿ ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ್ ಯೋಜನೆಗೆ ಅನುದಾನ ದೊರೆಯಲಿದ್ದು, ಉಳಿದೆಲ್ಲಾ ಯೋಜನೆಗಳಿಗೆ ಪ್ರಸ್ತುತ ಇರುವ ಅನುದಾನವನ್ನಷ್ಟೇ ಬಳಕೆ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ತಮ್ಮ ಪ್ರಸ್ತಾವನೆಯನ್ನು ಸ್ಥಗಿತಗೊಳಿಸಬೇಕು. ಹಣಕಾಸು ಇಲಾಖೆಯು ಯಾವ ಹೊಸ ಯೋಜನೆಗಳಿಗೂ ಅನುದಾನವನ್ನು ನೀಡುವುದಿಲ್ಲ.

      ಸರ್ಕಾರಗಳು ಪ್ರಸ್ತಾವನೆ ಸಲ್ಲಿಸುವುದನ್ನು ನಿಲ್ಲಿಸಬೇಕು

      ಸರ್ಕಾರಗಳು ಪ್ರಸ್ತಾವನೆ ಸಲ್ಲಿಸುವುದನ್ನು ನಿಲ್ಲಿಸಬೇಕು

      ಹೊಸ ಯೋಜನೆಗಳಿಗೆ ಹಣಕಾಸು ಅನುಮೋದನೆ ಕೋರಿ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ಪ್ರಸ್ತಾವನೆ ಸಲ್ಲಿಸುವುದನ್ನು ನಿಲ್ಲಿಸಬೇಕು. ಕೊರೋನಾ ವೈರಸ್ ನೀಡಿರುವ ಆರ್ಥಿಕ ಹೊಡೆತದಿಂದ ತಪ್ಪಿಸಿಕೊಳ್ಳಲು ಈಗಾಗಲೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಮಾತ್ರ ಹಣಕಾಸಿನ ನೆರವು ಒದಗಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

      ಕೃಷಿ ವಲಯ, ಉದ್ಯಮ ವಲಯಕ್ಕೆ ಉತ್ತೇಜನ

      ಕೃಷಿ ವಲಯ, ಉದ್ಯಮ ವಲಯಕ್ಕೆ ಉತ್ತೇಜನ

      ಕೃಷಿ ವಲಯ, ಉದ್ಯಮ ವಲಯ, ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ವಿಶೇಷ ಆರ್ಥಿಕ ಪ್ಯಾಕೇಜ್'ನ್ನು ಮೋದಿ ಸರ್ಕಾರ ಘೋಷಣೆ ಮಾಡಿದೆ. ಆದರೆ, ಕೊರೋನಾ ವೈರಸ್ ವಿರುದ್ಧ ಹೋರಾಡಲು ಸಂಪನ್ಮೂಲದ ಕ್ರೋಡೀಕರಣ ಮಾಡಬೇಕಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆ ಘೋಷಿಸದಿರಲು ನಿರ್ಧರಿಸಲಾಗಿದೆ. ಕೊರೊನಾ ವಿರುದ್ಧ ಹೋರಾಟಕ್ಕೂ ಅನುದಾನ ನೀಡಬೇಕಿದ್ದು, ಪ್ರಸಕ್ತ ವರ್ಷದಲ್ಲಿ ಹಣಕಾಸು ಪರಿಸ್ಥಿತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕಾಗಿದೆ ಎಂದು ಹೇಳಿದೆ.

      ಕೊರೊನಾ ವೈರಸ್ ಆರ್ಥಿಕ ಆಘಾತ ನೀಡಿದೆ

      ಕೊರೊನಾ ವೈರಸ್ ಆರ್ಥಿಕ ಆಘಾತ ನೀಡಿದೆ

      ಕೊರೊನಾ ವೈರಸ್ ನೀಡಿರುವ ಆರ್ಥಿಕ ಆಘಾತದಿಂದ ದೇಶವನ್ನು ಮೇಲೆತ್ತಲು ಈಗಾಗಲೇ ಎಲ್ಲಾ ವರ್ಗಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರೂ.20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಬಿಡುಗಡೆ ಮಾಡಿದೆ. ಈ ವಿಶೇಷ ಆರ್ಥಿಕ ಪ್ಯಾಕೇಜ್ ವಿಶ್ವದ ಮೂರನೇ ಅತೀದೊಡ್ಡ ಆರ್ಥಿಕ ಪ್ಯಾಕೇಜ್ ಎಂಬ ಹೆಗ್ಗಳಿಕೆಯನ್ನೂ ಪಡೆದುಕೊಂಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+