ಯುಪಿಎಸ್ಸಿ ಪರೀಕ್ಷೆಗೆ ಕಾಗದದ ಅಡ್ಮಿಟ್ ಕಾರ್ಡ್ ಇರಲ್ಲ!
ನವದೆಹಲಿ, ಡಿ.13: ಪ್ರಸಕ್ತ ವರ್ಷದ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಗೆ ಯಾವುದೇ ರೀತಿಯ ಪ್ರವೇಶ ಪತ್ರಗಳನ್ನು (ಅಡ್ಮಿಷನ್ ಕಾರ್ಡ್) ವಿತರಣೆ ಮಾಡುವುದಿಲ್ಲ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಪ್ರಕಟಣೆ ಹೊರಡಿಸಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಇನ್ನು ಮುಂದೆ ಅಂತರ್ಜಾಲದಲ್ಲಿ ಇ-ಅಡ್ಮಿಟ್ ಕಾರ್ಡ್ಗಳನ್ನು ಪಡೆದು ಬಳಸಬಹುದಾಗಿದೆ.
ಯುಪಿಎಸ್ ಸಿ ವೆಬ್ ಸೈಟ್ ನಿಂದ ಇ -ಅಡ್ಮಿಟ್ ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ಔಟ್ ತೆಗೆದುಕೊಳ್ಳಬೇಕು. ಅದೇ ಪ್ರವೇಶಾತಿ ಪತ್ರವನ್ನು ಪರೀಕ್ಷೆಗೆ ತರಬೇಕು ಎಂದು ಯುಪಿಎಸ್ಸಿ ಹೇಳಿದೆ. ಯುಪಿಎಸ್ಸಿ ಡಿ.18 ರಿಂದ 23ರವರೆಗೆ ದೇಶದ 23 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಿದೆ. [ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ಸಿ]

ಪ್ರಾಥಮಿಕ, ಮುಖ್ಯ ಹಾಗೂ ಸಂದರ್ಶನಗಳನ್ನು ಈ ಪರೀಕ್ಷೆ ಒಳಗೊಂಡಿರುತ್ತದೆ. ಈ ಮೂಲಕ ಕೇಂದ್ರವು ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆಗಳು (ಐಎಫ್ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್)ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ.[ಯುಪಿಎಸ್ಸಿ ಅರ್ಹತಾ ಪರೀಕ್ಷಾ ಫಲಿತಾಂಶ ಪ್ರಕಟ]
ಯುಪಿಎಸ್ಸಿ ಪ್ರವೇಶ ಪತ್ರಗಳನ್ನು ಈಗಾಗಲೇ ಅಪ್ಲೋಡ್ ಮಾಡಿದ್ದು, www.upsc.gov.in ವೆಬ್ ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಕೇಂದ್ರ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ. [ಯುಪಿಎಸ್ಸಿ: ರಾಜ್ಯಕ್ಕೆ ಹೆಮ್ಮೆ ತಂದ ಅಭ್ಯರ್ಥಿಗಳು]
ಅಕ್ಟೋಬರ್ 12ರಂದು ನಡೆದ ಮೊದಲ ಹಂತದ ಪರೀಕ್ಷೆಯಲ್ಲಿ ಈ ಬಾರಿ 15 ಸಾವಿರ ಮಂದಿ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ದಾಖಲೆಯ 9,45,908 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಹಾಕಿದ್ದದು. ಈ ಪೈಕಿ 4.63 ಲಕ್ಷ ಮಂದಿ ಆಗಸ್ಟ್ 23ರಂದು ಪರೀಕ್ಷೆ ಬರೆದಿದ್ದರು. (ಪಿಟಿಐ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications