ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಇಳಿಕೆ ಸುಳ್ಳು ಸುದ್ದಿ

ನವದೆಹಲಿ, ಸೆಪ್ಟೆಂಬರ್ 25: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಕುರಿತು ಹರಿದಾಡುತ್ತಿದ್ದ ಸುದ್ದಿ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಸರ್ಕಾರ ಮುಂದೆ ಆ ರೀತಿ ಯಾವುದೇ ಪ್ರಸ್ತಾಪ ಇಲ್ಲ ಎಂದು ಸರ್ಕಾರದ ಮೂಲಗಳು ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರವು ನಿವೃತ್ತಿ ಅಂಚಿನಲ್ಲಿರುವ ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡುವ ಕುರಿತು ಚಿಂತನೆ ನಡೆಸಿದೆ ಎನ್ನುವ ಮಾತು ಹರಿದಾಡಿತ್ತು.

ಸರ್ಕಾರಿ ನೌಕರರ ಪಿಂಚಣಿ ಸೇವೆಗಳ ನಿಯಮಗಳಲ್ಲಿ ಬದಲಾವಣೆ 1998ರಲ್ಲಿ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ವರ್ಷಗಳಿಂದ 60 ವರ್ಷಗಳಿಗೆ ಹೆಚ್ಚಿಸಲಾಗಿತ್ತು.

No Plans Before The Government Reduce Age Of Superannuation

ಹಲವು ರಾಜ್ಯ ಸರ್ಕಾರಗಳು ನೌಕರರ ನಿವೃತ್ತಿ ವಯಸ್ಸನ್ನು 60ರಿಂದ 62 ವರ್ಷಗಳಿಗೆ ಹೆಚ್ಚಿಸಿದ್ದವು. ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 33 ವರ್ಷ ಸೇವೆ ಪೂರ್ಣಗೊಳಿಸಿದ ಅಥವಾ 60 ವರ್ಷಕ್ಕೆ ತಲುಪಿದವರ, ಯಾವುದು ಮೊದಲು ಸಾಧ್ಯವಾಗುತ್ತದೆಯೋ ಅದನ್ನು ಪರಿಗಣಿಸಿ ಸೇವೆಯಲ್ಲಿರುವವರ ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಜಾರಿಗೆ ತರುವ ಸಾಧ್ಯತೆಗಳಿವೆ ಎನ್ನಲಾಗಿತ್ತು.

ಹಣಕಾಸು ಹೊರೆ, ವೆಚ್ಚ ಇತ್ಯಾದಿಗಳ ಸಾಧ್ಯಾಸಾಧ್ಯತೆಯನ್ನು ಅದು ಪರಿಶೀಲಿಸಲಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ವೈದ್ಯರುಗಳು ಹೊರತುಪಡಿಸಿ ಬಹುತೇಕ ಇಲಾಖೆಗಳ ಉದ್ಯೋಗಿಗಳಿಗೆ ನಿವೃತ್ತಿ ವಯಸ್ಸು 60 ವರ್ಷ ಆಗಿದೆ.

ಸರ್ಕಾರಿ ಅಧಿಕಾರಿಗಳ ಶೈಕ್ಷಣಿಕ ಅರ್ಹತೆ ಮತ್ತು ತರಬೇತಿ ಬಗ್ಗೆ ಮಾಹಿತಿಗಳನ್ನು ಕೂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕೇಳಿದೆ ಎಂದು ಹೇಳಲಾಗಿತ್ತು. ಆದರೆ ಈ ಸುದ್ದಿ ಸುಳ್ಳು ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+