ದೆಹಲಿ ವಿಧಾನಸಭಾ ಚುನಾವಣೆ 2025; ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಅರವಿಂದ್ ಕೇಜ್ರಿವಾಲ್
ದೆಹಲಿ, ಡಿಸೆಂಬರ್ 11:ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದು, ಸ್ವತಂತ್ರವಾಗಿ ಸ್ಪರ್ಧೆಗಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೇಜ್ರಿವಾಲ್ ಅವರು ಸ್ಪಷ್ಟನೆ ನೀಡಿರುವ ಅರವಿಂದ್ ಕೇಜ್ರಿವಾಲ್ ಅವರು, ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಬಾರಿಯ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ. 2025ರ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಯಾವುದೇ ಸಾಧ್ಯತೆಯನ್ನು ಬುಧವಾರ ತಳ್ಳಿಹಾಕಿದ್ದಾರೆ.

ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಎರಡು ಪಕ್ಷಗಳ ನಡುವಿನ ಮೈತ್ರಿ ಕುರಿತ ಇತ್ತೀಚಿನ ಊಹಾಪೋಹಗಳಿಗೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ತೆರೆ ಎಳೆದಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸ್ತುತ ಆಡಳಿತದಲ್ಲಿರುವ ಎಎಪಿ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿಯ ಚುನಾವಣಾ ಕದನಕ್ಕೆ ದೆಹಲಿ ಸಾಕ್ಷಿಯಾಗಲಿದೆ, ಎಎಪಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಪಡೆಯುವ ಗುರಿಯನ್ನು ಹೊಂದಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಧಿಕಾರವನ್ನು ಮರಳಿ ಪಡೆಯಲು ಪ್ರಯತ್ನ ನಡೆಸಲಿವೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ವಿರೂಪಗೊಳಿಸಿದ ಆರೋಪದ ಮೇಲೆ ಕಾಂಗ್ರೆಸ್ ಸೇರಿದಂತೆ ಹಿರಿಯ ವಿರೋಧ ಪಕ್ಷದ ನಾಯಕರೊಂದಿಗೆ ಕೇಜ್ರಿವಾಲ್ ಅವರು ಮಂಗಳವಾರ ರಾತ್ರಿ ಇಂಡಿಯಾ ಒಕ್ಕೂಟದ ಸಭೆಯನ್ನು ಸೇರಿದ ನಂತರ ಎಎಪಿ-ಕಾಂಗ್ರೆಸ್ ಮೈತ್ರಿಯ ಸಾಧ್ಯತೆಯ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಎಎಪಿ ಮತ್ತು ಕಾಂಗ್ರೆಸ್ 2024 ರ ಲೋಕಸಭಾ ಸ್ಥಾನಗಳಲ್ಲಿ ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ದೆಹಲಿಯಲ್ಲಿ, ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಿತು, ಆದರೆ ಇಂಡಿಯಾ ಬ್ಲಾಕ್ ಎಲ್ಲಾ ಏಳು ಸ್ಥಾನಗಳನ್ನು ಕಳೆದುಕೊಂಡಿತು.
ಲೋಕಸಭಾ ಚುನಾವಣೆಯ ನಂತರ, ಕಾಂಗ್ರೆಸ್ ಮತ್ತು ಎಎಪಿ ಎರಡೂ ತಮ್ಮ ಮೈತ್ರಿ ಲೋಕಸಭೆ ಚುನಾವಣೆಗೆ ಸೀಮಿತವಾಗಿದೆ ಮತ್ತು ಅವರು ಇಂಡಿಯಾ ಒಕ್ಕೂಟದ ಪಾಲುದಾರರಾಗಿ ಮುಂದುವರಿಯಲಿದ್ದರೂ, 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುಣಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಹಾಗೂ ಎಎಪಿ ಮೈತ್ರಿ ಕುರಿತು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೆಂದರ್ ಯಾದವ್ ಅವರು ಎಎಪಿ ಜೊತೆಗಿನ ಮೈತ್ರಿಯನ್ನು "ತಪ್ಪು" ಎಂದು ಕರೆದರು. ಅಲ್ಲದೇ ದೆಹಲಿಯ 70 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು.












Click it and Unblock the Notifications