Government Employee; ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿ ಏರಿಕೆ, ಸಚಿವರ ಸ್ಪಷ್ಟನೆ

ನವದೆಹಲಿ, ಡಿಸೆಂಬರ್ 05: ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಏರಿಕೆ ಕುರಿತು ಪೋಸ್ಟ್‌ಗಳು ಹರಿದಾಡುತ್ತಿವೆ. ಪ್ರಸ್ತುತ ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿ 60 ವರ್ಷಗಳಿವೆ. ಇದನ್ನು 62ಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಪೋಸ್ಟ್‌ಗಳಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಚರ್ಚೆಗಳು ನಡೆಯುತ್ತಿರುವಾಗಲೇ ಕೇಂದ್ರ ಸರ್ಕಾರ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ. ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಏರಿಕೆಯ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.

ಲೋಕಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಕುರಿತು ಲೋಕಸಭೆಯ ಕಲಾಪದಲ್ಲಿ ಲಿಖಿತ ಉತ್ತರವನ್ನು ಕೇಂದ್ರ ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ನೀಡಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದ ಸುದ್ದಿಗಳನ್ನು ತಳ್ಳಿ ಹಾಕಿದ್ದಾರೆ.

No Proposal To Increase Retirement Age Of Union Government Employees

ಸಚಿವರು ಹೇಳಿದ್ದೇನು?: ಸಚಿವ ಜಿತೇಂದ್ರ ಸಿಂಗ್ ತಮ್ಮ ಉತ್ತರದಲ್ಲಿ, "ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾವಣೆ ಮಾಡುವ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಪರಿಶೀಲನೆಯಲ್ಲಿ ಇಲ್ಲ" ಎಂದು ಸ್ಪಷ್ಟಪಡಿಸಿದರು.

ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, "ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡುವಂತೆ ನಿರ್ದೇಶವನ್ನು ನೀಡಲಾಗುತ್ತಿದೆ. ಹುದ್ದೆಗಳ ಭರ್ತಿಗೆ ರೋಜ್‌ಗಾರ್ ಮೇಳವನ್ನು ಸಹ ಆಯೋಜನೆ ಮಾಡಲಾಗುತ್ತದೆ" ಎಂದು ಸಚಿವರು ಹೇಳಿದರು.

ಸದ್ಯ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷಗಳು. ಇದನ್ನು 62ಕ್ಕೆ ಏರಿಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿತ್ತು. ಈ ಸುದ್ದಿಗಳಿಗೆ ಈಗ ಸರ್ಕಾರದ ಕಡೆಯಿಂದಲೇ ಉತ್ತರ ಸಿಕ್ಕಿದೆ.

ಪೋಸ್ಟ್ ವೈರಲ್: ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಏಪ್ರಿಲ್ 2025ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ತನ್ನ ನೌಕರರ ನಿವೃತ್ತಿ ವಯಸ್ಸನ್ನು 62 ವರ್ಷಗಳಿಗೆ ಏರಿಕೆ ಮಾಡಲಿದೆ ಎಂದು ಮಾಹಿತಿ ನೀಡಲಾಗಿತ್ತು. ಸದ್ಯ 60 ವರ್ಷವ ವಯೋಮಿತಿ ಇದೆ. ವಯೋಮಿತಿ ಹೆಚ್ಚಳ ಮಾಡಿದರೆ ಆಗುವ ಪರಿಣಾಮಗಳ ಕುರಿತು ಸಹ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿದ್ದವು.

'ನಿವೃತ್ತಿ ವಯಸ್ಸು ಹೆಚ್ಚಳ 2024' ಎಂಬ ಪೋಸ್ಟ್‌ ನಕಲಿ ಎಂದು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಫ್ಯಾಕ್ಟ್ ಚೆಕ್ ಘಟಕ ಸಹ ಹೇಳಿತ್ತು. ಇದು ನಕಲಿ ಪೋಸ್ಟ್ ಇಂತಹ ಮಾಹಿತಿಯನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿತ್ತು. ಕೇಂದ್ರ ಸರ್ಕಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪತ್ರಿಕಾ ಮಾಹಿತಿ ಬ್ಯೂರೋ ಅಡಿಯಲ್ಲಿ ಫ್ಯಾಕ್ಟ್ ಚೆಕ್ ಯೂನಿಟ್ ಸ್ಥಾಪನೆ ಮಾಡಿದೆ. ಮಾಹಿತಿ ತಂತ್ರಜ್ಞಾನದ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು) ನಿಯಮ 3 ರ ಉಪ-ನಿಯಮ (1) ರ ಉಪ-ಕಲಂ (v) ನ ನಿಬಂಧನೆಗಳ ಅಡಿಯಲ್ಲಿ ಇದನ್ನು ಸ್ಥಾಪಿಸಿ ಆದೇಶವನ್ನು ಹೊಡಿಸಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಸುದ್ದಿಗಳ ಸವಾಲು ಎದುರಿಸಲು ಇದನ್ನು ರಚನೆ ಮಾಡಲಾಗಿದೆ. ಇದು ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ಸೃಷ್ಟಿಕರ್ತರು ಮತ್ತು ಪ್ರಸರಣವನ್ನು ಹುಡುಕಿ ಜನರಿಗೆ ಸರಿಯಾದ ಮಾಹಿತಿಯನ್ನು ನೀಡುತ್ತದೆ.

ಇದೇ ಫ್ಯಾಕ್ಟ್ ಚೆಕ್ ಯೂನಿಟ್ ನವೆಂಬರ್ 19, 2024ರ ಪೋಸ್ಟ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿ ಏರಿಕೆ ಕುರಿತು ಹರಿದಾಡುತ್ತಿರುವ ಪೋಸ್ಟ್ ನಕಲಿ ಎಂದು ಹೇಳಿತ್ತು. ಈಗ ಕೇಂದ್ರ ಸಚಿವರು ಸಹ ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+