ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿ ಬಗ್ಗೆ ಸ್ಪಷ್ಟನೆ ಕೊಟ್ಟ ಕೇಂದ್ರ

|
Google Oneindia Kannada News

ನವದೆಹಲಿ, ನವೆಂಬರ್ 27: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಕುರಿತು ಮತ್ತೊಮ್ಮೆ ಸುದ್ದಿ ಹರಿದಾಡುತ್ತಿದೆ. ಆದರೆ, ವಯೋಮಿತಿ ತಗ್ಗಿಸುವ ಅಥವಾ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರದಂದು ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರವು ನಿವೃತ್ತಿ ಅಂಚಿನಲ್ಲಿರುವ ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡುವ ಕುರಿತು ಚಿಂತನೆ ನಡೆಸಿದೆ ಎನ್ನುವ ಮಾತು ಹರಿದಾಡಿತ್ತು. ಆದರೆ, ಈ ಬಗ್ಗೆ ಲೋಕಸಭೆಯಲ್ಲಿ ಲಿಖಿತ ಉತ್ತರ ರೂಪದಲ್ಲಿ ಸ್ಪಷ್ಟನೆ ನೀಡಿದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ನಿವೃತ್ತ ವಯಸ್ಸನ್ನು 60 ರಿಂದ 58ಕ್ಕಿಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆ, ಮೋದಿ ಭರವಸೆ ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆ, ಮೋದಿ ಭರವಸೆ

ಇತ್ತೀಚಿಗೆ ವೇತನ ಸಂಹಿತೆ ಕರಡು ಪ್ರತಿ ಪ್ರಕಟವಾಗಿತ್ತು. ಉದ್ಯೋಗಿಗಳು ದಿನಕ್ಕೆ ಎಷ್ಟು ಅವಧಿ ಕೆಲಸ ಮಾಡಬೇಕು? ಗೃಹಭತ್ಯೆ ಸೇರಿದಂತೆ ವಿವಿಧ ಭತ್ಯೆಗಳು ಎಷ್ಟಿರಬೇಕು? ರಾಷ್ಟ್ರೀಯ ಕನಿಷ್ಠ ವೇತನ ನಿಗದಿ, ರಜಾದಿನ ಹೀಗೆ ವಿವಿಧ ಅಂಶಗಳ ಮೇಲೆ ಸ್ಪಷ್ಟನೆ ಸಿಕ್ಕಿತ್ತು.

No proposal to reduce retirement age of employees to 58 years: Central govt

1998ರಲ್ಲಿ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ವರ್ಷಗಳಿಂದ 60 ವರ್ಷಗಳಿಗೆ ಹೆಚ್ಚಿಸಲಾಗಿತ್ತು. ಕೇಂದ್ರ ಸರ್ಕಾರದ ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ವೈದ್ಯರುಗಳು ಹೊರತುಪಡಿಸಿ ಬಹುತೇಕ ಇಲಾಖೆಗಳ ಉದ್ಯೋಗಿಗಳಿಗೆ ನಿವೃತ್ತಿ ವಯಸ್ಸು 60 ವರ್ಷ ಆಗಿದೆ.

ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 33 ವರ್ಷ ಸೇವೆ ಪೂರ್ಣಗೊಳಿಸಿದ ಅಥವಾ 60 ವರ್ಷಕ್ಕೆ ತಲುಪಿದವರ, ಯಾವುದು ಮೊದಲು ಸಾಧ್ಯವಾಗುತ್ತದೆಯೋ ಅದನ್ನು ಪರಿಗಣಿಸಿ ಸೇವೆಯಲ್ಲಿರುವವರ ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಜಾರಿಗೆ ತರುವ ಸಾಧ್ಯತೆಗಳಿವೆ ಎನ್ನಲಾಗಿತ್ತು.

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಹೆಚ್ಚಿಸಲು ಆಗ್ರಹಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಹೆಚ್ಚಿಸಲು ಆಗ್ರಹ

ಆದರೆ, ಕೇಂದ್ರ ನಾಗರಿಕಾ ಸೇವಾ(ಪಿಂಚಣಿ) ನಿಯಮ 1972ರ 48ನೇ ವಿಧಿ, 56(ಜೆ) ಹಾಗೂ ತಿದ್ದುಪಡಿ 16(3) ಅನ್ವಯ ಮತ್ತು 1958ರ ಎಲ್ಲ ಭಾರತೀಯ ಸೇವಾ ನಿಯಮಗಳ ಪ್ರಕಾರ, ಸಾರ್ವಜನಿಕ ಹಿತಾಸಕ್ತಿ ಆಧಾರ,ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸಿ ನಿವೃತ್ತಿ ವಯೋಮಿತಿ ಸೇರಿದಂತೆ ಅನೇಕ ಬದಲಾವಣೆಗಳನ್ನು ಹೊರತರಬಹುದಾಗಿದೆ. ಉದ್ಯೋಗಿಗಳನ್ನು ಮೂರು ತಿಂಗಳ ನೋಟಿಸ್ ನೀಡಿ ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ನಿವೃತ್ತಗೊಳಿಸಬಹುದಾಗಿದೆ. 55 ವರ್ಷ ಮೀರಿದ ಎಲ್ಲಾ ಉದ್ಯೋಗಿಗಳಿಗೂ ಈ ನಿಯಮ ಅನ್ವಯವಾಗಲಿದೆ.

English summary
There is no proposal to reduce the retirement age of employees from 60 years to 58 years, the government said on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X