ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಮಿಕ್ಸ್‌ ಅಂಡ್ ಮ್ಯಾಚ್‌" ಲಸಿಕೆ ಪ್ರಯೋಗಕ್ಕೆ ಶಿಫಾರಸು ಮಾಡಿಲ್ಲ; ಕೇಂದ್ರ

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ನವದೆಹಲಿ, ಆಗಸ್ಟ್‌ 03: ಭಾರತದಲ್ಲಿ ಕೊರೊನಾ ಲಸಿಕೆಗಳ ಸಂಯೋಜನೆಯ ಪ್ರಯೋಗಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಶಿಫಾರಸು ಮಾಡಲಾಗಿಲ್ಲ ಎಂದು ರಾಜ್ಯಸಭೆಗೆ ಕೇಂದ್ರ ಮಾಹಿತಿ ನೀಡಿದೆ.

ಕೊರೊನಾ ಲಸಿಕೆಗಳನ್ನು ಈಚೆಗೆ ಅಭಿವೃದ್ಧಿಗೊಳಿಸಲಾಗಿದೆ. ಒಂದೇ ವ್ಯಕ್ತಿಗೆ ಎರಡು ಭಿನ್ನ ಕೊರೊನಾ ಲಸಿಕೆಗಳನ್ನು ನೀಡುವ ಪ್ರಯೋಗ ಸಂಬಂಧ ವೈಜ್ಞಾನಿಕ ಸಾಕ್ಷ್ಯಗಳು ಇನ್ನು ಮುಂದಷ್ಟೆ ದೊರೆಯಬೇಕಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸಚಿವೆ ಭಾರತಿ ಪ್ರವೀಣ ಪವಾರ್ ತಿಳಿಸಿದ್ದಾರೆ.

ಒಂದೇ ವ್ಯಕ್ತಿಗೆ ಎರಡು ಭಿನ್ನ ಕೊರೊನಾ ಲಸಿಕೆ; ಅಪಾಯಕಾರಿ ಎಂದ WHOಒಂದೇ ವ್ಯಕ್ತಿಗೆ ಎರಡು ಭಿನ್ನ ಕೊರೊನಾ ಲಸಿಕೆ; ಅಪಾಯಕಾರಿ ಎಂದ WHO

ಕೊರೊನಾ ಲಸಿಕೆಗಳ ಸಂಯೋಜನೆ ಸಂಬಂಧ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಇವರು, "ಒಬ್ಬರಿಗೆ ಎರಡು ಭಿನ್ನ ಲಸಿಕೆಯ ಡೋಸ್‌ಗಳನ್ನು ನೀಡುವ ಸಂಬಂಧ ರಾಷ್ಟ್ರೀಯ ತಾಂತ್ರಿಕ ಸಮಿತಿ ಹಾಗೂ ರಾಷ್ಟ್ರೀಯ ತಜ್ಞರ ತಂಡದಿಂದ ಯಾವುದೇ ಶಿಫಾರಸು ಬಂದಿಲ್ಲ" ಎಂದು ಸ್ಪಷ್ಟಪಡಿಸಿದರು. ವಿಶ್ವ ಆರೋಗ್ಯ ಸಂಸ್ಥೆಯಿಂದಲೂ ನಮಗೆ ಯಾವುದೇ ಶಿಫಾರಸು ದೊರೆತಿಲ್ಲ ಎಂದರು.

No Recommendation Made On Mixing Corona Vaccines Says Centre

ದೇಶದಲ್ಲಿ ಕೊರೊನಾ ಲಸಿಕೆಗಳ ಮಿಶ್ರಣ ಪ್ರಯೋಗ ಸಂಬಂಧ ಅಧ್ಯಯನಗಳು ಹಾಗೂ ಪ್ರಗತಿ ಎಲ್ಲಿಯವರೆಗೆ ಬಂದಿದೆ ಎಂಬ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಈಚೆಗಷ್ಟೆ, ಕೊರೊನಾ ಸೋಂಕಿನ ವಿರುದ್ಧ ಲಸಿಕೆಗಳ ದಕ್ಷತೆ ಪರಿಶೀಲಿಸಲು ಎರಡು ಭಿನ್ನ ಲಸಿಕೆಗಳ ಸಂಯೋಜನೆಯ ಪ್ರಯೋಗಕ್ಕೆ ಕೇಂದ್ರ ಔಷಧ ನಿಯಂತ್ರಕ ಮಂಡಳಿ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿತ್ತು. ಭಾರತದಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್‌ ಲಸಿಕೆಗಳ ಸಂಯೋಜನೆಯ ಪ್ರಯೋಗ ನಡೆಸಲು ಶಿಫಾರಸು ಮಾಡಿರುವುದಾಗಿ ವರದಿಯಾಗಿತ್ತು.

ಇದಕ್ಕೂ ಮುನ್ನ ವಿಶ್ವ ಆರೋಗ್ಯ ಸಂಸ್ಥೆ ಲಸಿಕೆಗಳ ಈ ಪ್ರಯೋಗವನ್ನು ಅಪಾಯಕಾರಿ ಎಂದು ಕರೆದಿತ್ತು. ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಒಬ್ಬರಿಗೆ ಎರಡು ಭಿನ್ನ ಕಂಪನಿಗಳ ಲಸಿಕೆಗಳ ಬಳಕೆಯನ್ನು "ಅಪಾಯಕಾರಿ ಪ್ರವೃತ್ತಿ" ಎಂದು ಕರೆದಿದ್ದು, ಈ ಪ್ರಯೋಗದ ಯಾವುದೇ ಮಾಹಿತಿ ಲಭ್ಯವಿಲ್ಲದ ಕಾರಣ ಆರೋಗ್ಯದ ಮೇಲೆ ಇದರ ಪರಿಣಾಮದ ಬಗ್ಗೆಯೂ ಸೂಕ್ತ ಅರಿವಿಲ್ಲ. ಹೀಗಾಗಿ ಈ ಪ್ರಯೋಗವನ್ನು ಮಾಡದೇ ಇರುವುದು ಒಳಿತು ಎಂದು ತಿಳಿಸಿತ್ತು.

ಏನಿದು ಮಿಕ್ಸ್‌ ಅಂಡ್ ಮ್ಯಾಚ್ ಲಸಿಕೆ?: ಕೊರೊನಾ ಸೋಂಕಿನ ವಿರುದ್ಧ ದೇಹದಲ್ಲಿ ಹೆಚ್ಚಿನ ಪ್ರತಿಕಾಯ ಸೃಷ್ಟಿಗೆ ಮೊದಲ ಡೋಸ್ ಒಂದು ಕಂಪನಿಯ ಲಸಿಕೆಯನ್ನು ನೀಡಿ, ಮತ್ತೊಂದು ಕಂಪನಿಯ ಎರಡನೇ ಡೋಸ್ ಲಸಿಕೆ ನೀಡುವ ಪ್ರಯೋಗಕ್ಕೆ ಕೆಲವು ತಜ್ಞರು ಸಲಹೆ ನೀಡಿದ್ದರು. ಎರಡು ಭಿನ್ನ ಲಸಿಕೆಗಳ ಸಂಯೋಜನೆ ದೇಹದಲ್ಲಿ ಪ್ರತಿಕಾಯವನ್ನು ಅಧಿಕ ಮಟ್ಟದಲ್ಲಿ ಸೃಷ್ಟಿಸುವ ಸಾಧ್ಯತೆ ಕುರಿತು ಚರ್ಚೆಗಳು ನಡೆದಿದ್ದವು. ಒಂದು ಕಂಪನಿಯ ಎರಡು ಡೋಸ್ ಕೊರೊನಾ ಲಸಿಕೆ ಪಡೆದವರಿಗಿಂತ ಎರಡು ಕಂಪನಿಗಳ ಲಸಿಕೆ ಪಡೆದವರಲ್ಲಿಯೇ ರೋಗ ನಿರೋಧಕ ಶಕ್ತಿ ಹೆಚ್ಚಿನ ಮಟ್ಟದಲ್ಲಿ ಕಂಡುಬಂದಿರುವುದಾಗಿ ಪಶ್ಚಿಮ ಜರ್ಮನಿಯ ಸಾರ್ಲ್ಯಾಂಡ್ ವಿಶ್ವವಿದ್ಯಾಲಯದ ಅಧ್ಯಯನದಲ್ಲಿ ಉಲ್ಲೇಖಿಸಲಾಗಿತ್ತು.

ಇನ್ನೂ ಸ್ಪಷ್ಟತೆ ದೊರೆತಿಲ್ಲ: ಕೊರೊನಾ ಲಸಿಕೆಗಳ ಮಿಶ್ರ ಡೋಸ್ ಹೆಚ್ಚಿನ ಪ್ರತಿಕಾಯ ವೃದ್ಧಿಗೆ ನೆರವಾಗುತ್ತದೆ ಎಂದು ಅಧ್ಯಯನಗಳು ತಿಳಿಸಿವೆ. ಲಸಿಕೆಯ ಮಿಶ್ರಡೋಸ್ ಲಸಿಕೆ ಪರಿಣಾಮಕಾರಿ ಹೌದು. ಆದರೆ ಈ ಕುರಿತು ಇನ್ನಷ್ಟು ಅಧ್ಯಯನಗಳ ಅವಶ್ಯಕತೆಯಿದೆ. ಯಾವ ಯಾವ ಲಸಿಕೆಗಳನ್ನು ಸಂಯೋಜನೆ ಮಾಡಬೇಕು ಎನ್ನುವುದರ ಕುರಿತು ಸ್ಪಷ್ಟತೆ ಸಿಗಬೇಕಿದೆ" ಎಂದು ಏಮ್ಸ್‌ ನಿರ್ದೇಶಕ ರಣದೀಪ್ ಗುಲೇರಿಯಾ ತಿಳಿಸಿದ್ದರು. ಭಾರತದಲ್ಲಿ ಭಿನ್ನ ಲಸಿಕೆಗಳ ಪ್ರಯೋಗ ನಡೆಯುವ ಆಲೋಚನೆಗಳು ಸದ್ಯಕ್ಕಿಲ್ಲ. ಈ ಸಂಬಂಧ ಇನ್ನಷ್ಟು ವೈಜ್ಞಾನಿಕ ಮಾಹಿತಿಗಳನ್ನು ಕಲೆ ಹಾಕಿದ ನಂತರ ಮಿಶ್ರ ಲಸಿಕೆಗಳ ಪ್ರಯೋಗ ಸಾಧ್ಯ ಎಂದು ಸ್ಪಷ್ಟಪಡಿಸಿದ್ದರು.

English summary
No recommendation has been made so far on mixing anti-coronavirus vaccines, govt informed Rajya Sabha
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X