ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈಯಕ್ತಿಕ ಆಹಾರ ಸಂಸ್ಕೃತಿಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ: ರಾಜ್ ನಾಥ್ ಸಿಂಗ್

ದೇಶದ ಯಾವುದೇ ಪ್ರಜೆಯ ಆಹಾರ ಪದ್ಧತಿಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಸ್ಪಷ್ಟನೆ. ದೇಶದ ಅಲ್ಲಲ್ಲಿ ನಡೆಯುತ್ತಿರುವ ಬೀಫ್ ಫೆಸ್ಟ್ ಬಗ್ಗೆ ಪ್ರತಿಕ್ರಿಯೆ.

|
Google Oneindia Kannada News

ಐಜ್ವಾಲ್, ಜೂನ್ 13: ಪ್ರತಿಯೊಬ್ಬ ವ್ಯಕ್ತಿಯ ಆಹಾರ ಸಂಸ್ಕೃತಿಯು ಆತನ ವೈಯಕ್ತಿಕ ವಿಚಾರವಾಗಿದ್ದು, ಸರ್ಕಾರವು ಯಾವುದೇ ಕಾರಣಕ್ಕೂ ಅಂತಹ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಐಜ್ವಾಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕೇಂದ್ರ ಸರ್ಕಾರದ ಗೋ ಹತ್ಯೆ ನಿಷೇಧ ಕಾನೂನಿನ ವಿರುದ್ಧ ಎದ್ದಿರುವ ಅಪಸ್ವರ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಹೀಗೆ ಉತ್ತರಿಸಿದರು.

No restrictions on choice of one's food: HM on beef fest protest in Mizoram

ಕೇಂದ್ರ ಸರ್ಕಾರವು ಇತ್ತೀಚೆಗೆ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ, ದೇಶದ ಅಲ್ಲಲ್ಲಿ ಇದರ ವಿರುದ್ಧ ಆಂದೋಲನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕಾನೂನಿನ ವಿರುದ್ಧ ಅಲ್ಲಲ್ಲಿ ಬೀಫ್ ಫೆಸ್ಟ್ ಆಯೋಜಿಸುವ ಮೂಲಕ ಪ್ರತಿಭಟನಾಕಾರರು ಸಾಮೂಹಿಕವಾಗಿ ಗೋ ಮಾಂಸದಡುಗೆ ಭಕ್ಷಿಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

English summary
Union Home Minister Rajnath Singh on Monday said the Centre will not impose any restrictions on people's choice of food. Responding to a question on a protest by locals against the central governments ban on sale of cattle for slaughter at animal markets, Singh said there should be no restriction on one's choice of food.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X