Jammu & Kashmir: ಕಲ್ಲು ತೂರಾಟ ಮಾಡಿದ ಉಗ್ರರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲ್ಲ; ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಮೂರು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಪ್ರಚಾರ ಮಾಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾನುವಾರ ಕೂಡ ಪ್ರಚಾರ ಮುಂದುವರೆಸಿದ್ದಾರೆ. ನೌಶೇರಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕಲ್ಲು ತೂರಾಟ ಮಾಡುವವರು ಮತ್ತು ಭಯೋತ್ಪಾದಕರನ್ನು ಬಿಡುಗಡೆ ಮಾಡುವುದಿಲ್ಲ, ಭಯೋತ್ಪಾದನೆಯನ್ನು ಬುಡಸಮೇತ ಕಿತ್ತು ಹಾಕುವವರೆಗೂ ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರನ್ನು ಬೆಂಬಲಿಸಿ ಚುನಾವಣಾ ರ್‍ಯಾಲಿ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಯುವಕರ ಜೊತೆ ಮಾತನಾಡಲು ಬಯಸುತ್ತೇನೆ ಎಂದು ಹೇಳಿದ ಅವರು, ಯುವಕರನ್ನು ಸಿಂಹಗಳು ಎಂದು ಕರೆದರು.

ಎನ್‌ಸಿ ಮತ್ತು ಕಾಂಗ್ರೆಸ್ ಮೈತ್ರಿ ಪಕ್ಷಗಳು ಕಲ್ಲು ತೂರಾಟಗಾರರು ಮತ್ತು ಭಯೋತ್ಪಾದಕರನ್ನು ಬಿಡುಗಡೆ ಮಾಡಲು ಬಯಸುತ್ತಾರೆ. ಇದನ್ನೇ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿದ್ದಾರೆ. ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಬೆಟ್ಟಗಳಲ್ಲಿ ಭಯೋತ್ಪಾದನೆಯ ಪುನರುಜ್ಜೀವನದ ಬಗ್ಗೆ ಮಾತನಾಡುತ್ತಿದ್ದಾರೆ ಆದರೆ ಆಡಳಿತದಲ್ಲಿರುವುದು ಮೋದಿ ಸರ್ಕಾರ ಮತ್ತು ನಾವು ಭಯೋತ್ಪಾದನೆಯನ್ನು ಬುಡಸಮೇತ ಕಿತ್ತುಹಾಕುತ್ತೇವೆ ಎಂದು ಅವರಿಗೆ ಹೇಳಲು ಬಯಸುತ್ತೇನೆ. ಭಯೋತ್ಪಾದಕರು ಅಥವಾ ಕಲ್ಲು ತೂರಾಟಗಾರನನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದರು.
ಪಾಕಿಸ್ತಾನದ ಜೊತೆ ಮಾತುಕತೆ ಇಲ್ಲ
ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲು ಎನ್‌ಸಿ ಮತ್ತು ಕಾಂಗ್ರೆಸ್ ಬೆಂಬಲ ನೀಡುತ್ತಿವೆ. ಆದರೆ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವವರೆಗೆ ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಫಾರೂಕ್ ಅಬ್ದುಲ್ಲಾ ಮತ್ತು ರಾಹುಲ್ ಗಾಂಧಿ ಇದನ್ನು ಅರ್ಥ ಮಾಡಿಕೊಳ್ಳಬೇಕು. ಜಮ್ಮು ಮತ್ತು ಕಾಶ್ಮೀರದ ಸಿಂಹಗಳೊಂದಿಗೆ (ಯುವಕರು) ಮಾತನಾಡುತ್ತೇನೆ ಆದರೆ ಪಾಕಿಸ್ತಾನದ ಜೊತೆ ಮಾತನಾಡುವುದಿಲ್ಲ ಎಂದರು.
ಗಡಿ ಭಾಗದ ನಿವಾಸಿಗಳ ಸುರಕ್ಷತೆಗಾಗಿ ಸರ್ಕಾರ ಹಲವು ವರ್ಷಗಳಿಂದ ಭೂಗತ ಬಂಕರ್‌ಗಳ ಬಗ್ಗೆ ಮಾತನಾಡಿದ ಅವರು, ಗಡಿಯಾಚೆಯಿಂದ ಗುಂಡಿನ ದಾಳಿ ನಡೆಸಲು ಯಾರಿಗೂ ಅಧಿಕಾರವಿಲ್ಲ, ಅಂತಹ ಬಂಕರ್ ಗಳನ್ನು ನಿರ್ಮಿಸುವ ಅಗತ್ಯವೂ ಇಲ್ಲ ಎಂದು ಹೇಳಿದರು.
ಗಡಿಯಾಚೆಯಿಂದ ಗುಂಡು ಹಾರಿಸಿದರೆ ನಾವು ಶೆಲ್ ಮೂಲಕ ಉತ್ತರ ಕೊಡುತ್ತೇವೆ ಎಂದು ಹೇಳಿದರು. ಮೀಸಲಾತಿ ಕುರಿತಂತೆ ಎನ್‌ಸಿ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಟೀಕಿಸಿದ ಅವರು, ಪಹಾರಿಗಳು, ಗುಜ್ಜರ್‌ಗಳು, ದಲಿತರು, ಇತರ ಹಿಂದುಳಿದ ವರ್ಗಗಳಿಗೆ ಸಿಗುತ್ತಿರುವ ಮೀಸಲಾತಿಯನ್ನು ಮುಟ್ಟಲು ಯಾರಿಗೂ ಸಾಧ್ಯವಿಲ್ಲ ಎಂದು ಹೇಳಿದರು.












Click it and Unblock the Notifications