ಯಾರ ವಿರುದ್ಧವೂ ರಾಜಕೀಯ ಹುನ್ನಾರವಿಲ್ಲ: ಅಮಿತ್ ಶಾ
ಇತ್ತೀಚೆಗೆ ಲಾಲು ಪ್ರಸಾದ್ ಯಾದವ್ ಮಂತಾದವರ ವಿರುದ್ಧದ ಹಗರಣದ ತನಿಖೆಗಳನ್ನು ಕೇಂದ್ರ ಸರ್ಕಾರವೇ ನಿರ್ದೇಶಿಸುತ್ತಿದೆ ಎಂಬ ಆರೋಪಗಳಿಗೆ ಅಮಿತ್ ಶಾ ನೀಡಿದ ಉತ್ತರವಿದು.
ನವದೆಹಲಿ, ಮೇ 27: ಕೇಂದ್ರ ಸರ್ಕಾರವು ತನ್ನ ಅಧೀನದಲ್ಲಿರುವ ಕೆಲವು ತನಿಖಾ ಸಂಸ್ಥೆಗಳನ್ನು ಉಪಯೋಗಿಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಪಿತೂರಿ ನಡೆಸುತ್ತಿದೆ ಎಂಬ ಆರೋಪವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಳ್ಳಿ ಹಾಕಿದ್ದಾರೆ.
ಈ ಆರೋಪಗಳಿಗೆ ಉತ್ತರ ನೀಡಿದ ಅವರು, ''ನಾವು (ಬಿಜೆಪಿ) ಯಾರ ವಿರುದ್ಧವೂ ಪಿತೂರಿ ಮಾಡುತ್ತಿಲ್ಲ. ಆದರೆ, ಕೆಲವು ವಿರೋಧ ಪಕ್ಷಗಳ ನಾಯಕರು ಈ ಪ್ರಕರಣಗಳನ್ನು ವಿವಾದಾತ್ಮಕವಾಗಿಸಲು ಪ್ರಯತ್ನಿಸುತ್ತಿದ್ದಾರೆ'' ಎಂದು ತಿಳಿಸಿದರು.[ವಿಟಮಿನ್ ಡಿ ಸಿಗಲ್ಲ ಅಂತ ಬುರ್ಖಾ ನಿಷೇಧ ಸರಿಯಾ?]

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಕೇಳಿಬಂದಿರುವ 1000 ಕೋಟಿ ರು. ಹಗರಣ, ನಾರದ ಟೇಪ್ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಹೆಸರುಗಳ ಪ್ರಸ್ತಾಪ - ಇವೇ ಮುಂತಾದ ಪ್ರಕರಣಗಳು ಬೆಳಕಿಗೆ ಬಂದಿದ್ದು ಅವುಗಳ ತನಿಖೆ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ಕೆಲವು ವಿರೋಧ ಪಕ್ಷಗಳ ನಾಯಕರು, ಈ ತನಿಖೆಗಳನ್ನು ಮೋದಿ ಸರ್ಕಾರವೇ ನಿರ್ದೇಶಿಸುತ್ತಿದೆ ಎಂದು ಹುಯಿಲೆಬ್ಬಿಸಿದ್ದವು. ಇದಕ್ಕೆ ಅಮಿತ್ ಶಾ ಅವರು ಹೀಗೆ ಉತ್ತರಿಸಿದ್ದಾರೆ.[ಮೋದಿ ಸರ್ಕಾರಕ್ಕೆ ಮೂರು ವರ್ಷ: ಫಲ ನೀಡಿದ ಟಾಪ್ 20 ಯೋಜನೆಗಳು]
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications