IMD Rain Alert: ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಎಚ್ಚರಿಕೆ, ಎಷ್ಟು ದಿನ?
ದೇಶದಾದ್ಯಂತ ಈಶಾನ್ಯ ಮಾನ್ಸೂನ್ ಚುರುಕಾಗಿದೆ. ಕೆಲವೆಡೆ ಅವಧಿಗೂ ಮುನ್ನವೇ ಚಳಿ ಶುರುವಾಗಿದೆ. ಕರ್ನಾಟಕ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಅಕ್ಟೋಬರ್ 24ರವರೆಗೆ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. 22ರಿಂದ 24ರವರೆಗೆ ತಾರೀಖಿನಂದು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ ಇದೆ. 23ರಂದು ಕರಾವಳಿ ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾ ಹಾಗೂ ತಮಿಳುನಾಡಿನ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮುಂದಿನ 5 ದಿನಗಳಲ್ಲಿ ಈ ಪ್ರದೇಶದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕೇರಳ ಕರ್ನಾಟಕದ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವಿದೆ. ಇದು ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸಲಿದ್ದು, ತೀವ್ರಗೊಳ್ಳುವ ಸಾಧ್ಯತೆಯಿದೆ. ಅಕ್ಟೋಬರ್ 21ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಕೇರಳ, ಲಕ್ಷದ್ವೀಪ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 23ರಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂನಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಅಕ್ಟೋಬರ್ 19ರಂದು ಆಗ್ನೇಯ ಮತ್ತು ಪೂರ್ವ-ಮಧ್ಯ ಅರೇಬಿಯನ್ ಸಮುದ್ರ, ಲಕ್ಷದ್ವೀಪ ಮತ್ತು ಕೊಮೊರಿನ್ ಪ್ರದೇಶ ಮತ್ತು ಕರ್ನಾಟಕ, ಕೇರಳ ಮತ್ತು ದಕ್ಷಿಣ ತಮಿಳುನಾಡು ಕರಾವಳಿಗಳಲ್ಲಿ ಗಾಳಿಯ ವೇಗ ಗಂಟೆಗೆ 45ರಿಂದ 55 ಕಿ.ಮೀ.ವರೆಗೆ ಬೀಸುವ ಸಾಧ್ಯತೆಯಿದೆ.
ಮೀನುಗಾರರಿಗೆ ಎಚ್ಚರಿಕೆ
ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರ, ಲಕ್ಷದ್ವೀಪ ಮತ್ತು ಕೊಮೊರಿನ್ ಪ್ರದೇಶ ಮತ್ತು ಕರ್ನಾಟಕ, ಕೇರಳ ಮತ್ತು ಪಕ್ಕದ ದಕ್ಷಿಣ ತಮಿಳುನಾಡು ಕರಾವಳಿಗಳಲ್ಲಿ ಸಮುದ್ರದ ಪರಿಸ್ಥಿತಿ ಮಧ್ಯಮದಿಂದ ಒರಟಾಗುವ ಸಾಧ್ಯತೆಯಿದೆ. ಮೀನುಗಾರರು ಅಕ್ಟೋಬರ್ 20ರವರೆಗೆ ಆಗ್ನೇಯ ಅರೇಬಿಯನ್ ಸಮುದ್ರ, ಲಕ್ಷದ್ವೀಪ ಮತ್ತು ಕೊಮೊರಿನ್ ಪ್ರದೇಶ ಮತ್ತು ಕರ್ನಾಟಕ, ಕೇರಳ ಮತ್ತು ಪಕ್ಕದ ದಕ್ಷಿಣ ತಮಿಳುನಾಡು ಕರಾವಳಿಗಳಲ್ಲಿ ಮತ್ತು ಅಕ್ಟೋಬರ್ 20ರಿಂದ 22 ರವರೆಗೆ ನೈರುತ್ಯ ಮತ್ತು ಪಕ್ಕದ ಪಶ್ಚಿಮ ಮಧ್ಯ ಅರೇಬಿಯನ್ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಮಳೆಯೊಂದಿಗೆ ಚಳಿ ಕೂಡ ಹೆಚ್ಚಾಗಿದ್ದು, ಬೆಳಗಿನ ಸಮಯದಲ್ಲಿ ಅನೇಕ ಸ್ಥಳಗಳಲ್ಲಿ ಮಂಜು ಹೆಚ್ಚಾಗಿರಲಿದೆ, ಸ್ಪಷ್ಟ ಆಕಾಶ ಕಾಣುವ ಸಾಧ್ಯತೆಯಿದೆ. ದೆಹಲಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರಬಹುದು. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ. ಪ್ರಧಾನ ಮೇಲ್ಮೈ ಗಾಳಿಯು ಈಶಾನ್ಯ ದಿಕ್ಕಿನಿಂದ ಬೆಳಗಿನ ಸಮಯದಲ್ಲಿ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.












Click it and Unblock the Notifications