ಸದಸ್ಯತ್ವ ಅನರ್ಹತೆ ಬಗ್ಗೆ ಹೆದರಲ್ಲ: ಮೋದಿ, ಅದಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ, ಮಾರ್ಚ್‌ 25: 2019ರಲ್ಲಿ ಮೋದಿ ಉಪನಾಮ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ, ರಾಹುಲ್‌ ಗಾಂಧಿ ಅವರು ಪತ್ರಿಕಾಗೋಷ್ಠಿ ನಡೆಸಿ ಅದಾನಿ, ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು.

ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ಅದಾನಿ ಬಗ್ಗೆ ಒಂದೇ ಒಂದು ಪ್ರಶ್ನೆ ಕೇಳಿದ್ದೆ. ನಾನು ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ. ಸಂಸತ್ತಿನಲ್ಲಿ ನಾನು ಭಾಷಣ ಮಾಡದಂತೆ ತಡೆಯಲಾಯಿತು. ನಂತರ ನಾನು ಲೋಕಸಭೆ ಸ್ಪೀಕರ್‌ಗೆ ವಿವರವಾದ ಉತ್ತರವನ್ನು ಬರೆದೆ. ಕೆಲವು ಮಂತ್ರಿಗಳು ನನ್ನ ಬಗ್ಗೆ ಸುಳ್ಳು ಹೇಳಿದರು. ಆದರೆ ನಾನು ಪ್ರಶ್ನೆ ಕೇಳುವುದನ್ನು ನಿಲ್ಲಿಸುವುದಿಲ್ಲ. ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ಪ್ರಶ್ನಿಸುತ್ತಲೇ ಇರುತ್ತೇನೆ ಎಂದರು.

rahul gandhi

ದೇಶದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಈ ಹಿಂದೆಯೂ ಹಲವು ಬಾರಿ ಹೇಳಿದ್ದೆ. ಇಂತಹ ಉದಾಹರಣೆಗಳನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ. ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧದ ಬಗ್ಗೆ ನಾನು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದೇನೆ, ಕೇಳುತ್ತಲ್ಲೇ ಇರುತ್ತೇನೆ. ಅದಾನಿ ವಿಚಾರದಲ್ಲಿ ಮೋದಿ ಯಾಕೆ ಮೌನಿಯಾಗಿದ್ದಾರೆ. ಅವರು ಈ ದೇಶಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಮೌನಿಯಾಗಿದ್ದಾರೆ ಎಂದರು.

ಅದಾನಿ ಶೆಲ್ ಕಂಪನಿಗಳಿಗೆ ಹೋದ ₹20,000 ಕೋಟಿ ಯಾರದು? ಎಂಬ ಸರಳ ಪ್ರಶ್ನೆಯಿಂದ ಪ್ರಧಾನಿಯನ್ನು ರಕ್ಷಿಸಲು ನಡೆಸಲಾದ ಸಂಪೂರ್ಣ ನಾಟಕ ಇದು. ಈ ಬೆದರಿಕೆ, ಅನರ್ಹತೆ ಅಥವಾ ಜೈಲು ಶಿಕ್ಷೆಗೆ ನಾನು ಹೆದರುವುದಿಲ್ಲ. ನನಗೆ ಸತ್ಯವನ್ನು ಹೊರತುಪಡಿಸಿ ಯಾವುದರಲ್ಲೂ ಆಸಕ್ತಿ ಇಲ್ಲ. ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ, ಇದು ನನ್ನ ಕೆಲಸ ಮತ್ತು ನನ್ನನ್ನು ಅನರ್ಹಗೊಳಿಸಿದರೂ ಅಥವಾ ಬಂಧಿಸಿದರೂ ನಾನು ಸತ್ಯವನ್ನು ಮಾತನಾಡುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ ಮತ್ತು ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ.

rahul gandhi

ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಹೆದರಿದ್ದು, ಅವರ ಕಣ್ಣಲ್ಲಿ ಅದನ್ನು ಕಂಡಿದ್ದೇನೆ. ಅದಕ್ಕಾಗಿಯೇ, ಮೊದಲು ಗೊಂದಲ ಮತ್ತು ನಂತರ ಅನರ್ಹತೆಯನ್ನು ನನ್ನ ವಿರುದ್ದ ಕುತಂತ್ರ ಮಾಡಲಾಗಿದೆ. ಯಾವುದೇ ನಿರ್ದಿಷ್ಟ ಜಾತಿಯನ್ನು ಗುರಿಯಾಗಿಸಿಕೊಂಡಿಲ್ಲ. ಅವರು ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಕೆಲಸವನ್ನು ಮಾಡುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಡುತ್ತಲೇ ಇರುತ್ತೇನೆ ಎಂದು ರಾಹುಲ್‌ ತಿಳಿಸಿದರು.

ಸರ್ಕಾರದ ಭಯಭೀತ ಪ್ರತಿಕ್ರಿಯೆಯಿಂದ ಪ್ರತಿಪಕ್ಷಗಳಿಗೆ ಹೆಚ್ಚಿನ ಲಾಭವೇ ಆಗುತ್ತದೆ. ಪ್ರಧಾನಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ. ನನಗೆ ಒಂದೇ ಒಂದು ಹೆಜ್ಜೆ ಅದು ಸತ್ಯಕ್ಕಾಗಿ ಹೋರಾಡುವುದು. ಈ ದೇಶದ ಪ್ರಜಾಪ್ರಭುತ್ವದ ಸ್ವರೂಪವನ್ನು ರಕ್ಷಿಸುವುದು. ನನ್ನನ್ನು ಜೀವನಪರ್ಯಂತ ಅನರ್ಹಗೊಳಿಸಿ, ಜೀವಾವಧಿಯವರೆಗೆ ಜೈಲಿನಲ್ಲಿರಿಸಿದರೂ ನಾನು ದೇಶಕ್ಕಾಗಿ ಮಾತು ಮುಂದುವರಿಸುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+