ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆ ಉಪಾಧ್ಯಕ್ಷ ಸ್ಥಾನ ರೇಸಿನಲ್ಲಿ ನಾನಿಲ್ಲ: ಸಂಭಾವ್ಯ ಅಭ್ಯರ್ಥಿ

By Mahesh
|
Google Oneindia Kannada News

ನವದೆಹಲಿ, ಜುಲೈ 17: ಸಂಸತ್ತಿನಲ್ಲಿ ಮುಂಗಾರು ಅಧಿವೇಶನದಲ್ಲಿಸಂಸತ್ತಿನಲ್ಲಿ ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆ ಉಪಾಧ್ಯಕ್ಷರ ಆಯ್ಕೆ ಮಾಡುವ ಉತ್ಸಾಹದಲ್ಲಿದೆ. ಈ ನಡುವೆ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಈ ನಡುವೆ ಸಂಭಾವ್ಯ ಅಭ್ಯರ್ಥಿ ಎನಿಸಿಕೊಂಡಿದ್ದ ನರೇಶ್ ಗುಜ್ರಾಲ್ ಅವರು ತಾವು ಈ ರೇಸಿನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತದ ಮಾಜಿ ಪ್ರಧಾನಿ ಐ.ಕೆ ಗುಜ್ರಾಲ್ ಅವರ ಪುತ್ರ ನರೇಶ್ ಗುಜ್ರಾಲ್ ಅವರು ಶಿರೋಮಣಿ ಅಕಾಲಿ ದಳ ಪಕ್ಷ ಮುಖಂಡರಾಗಿದ್ದು, ಪಂಜಾಬಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆ ಉಪಾಧ್ಯಕ್ಷರ ಆಯ್ಕೆ ಕುತೂಹಲ! ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆ ಉಪಾಧ್ಯಕ್ಷರ ಆಯ್ಕೆ ಕುತೂಹಲ!

ಬಿಜೆಪಿ ನೇತೃತ್ವದ ಎನ್ಡಿಎ ಮಿತ್ರಪಕ್ಷದ ಮೂಲಕ ರಾಜ್ಯಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನರೇಶ್ ಗುಜ್ರಾಲ್ ಅವರು ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

Not in the race for deputy chairman post: Naresh Gujral

'ಮುಂದಿನ ರಾಜ್ಯಸಭೆ ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ನಾನು ಸದ್ಯಕ್ಕೆ ಈ ರೇಸಿನಲ್ಲಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ.

ಕಳೆದ ತಿಂಗಳು ಪಿ.ಜೆ ಕುರಿಯನ್ ಅವರು ಮೇಲ್ಮನೆ ಸದಸ್ಯತ್ವದಿಂದ ನಿವೃತ್ತಿ ಹೊಂದಿದ ಬಳಿಕ ಈ ಸ್ಥಾನ ಇನ್ನೂ ಖಾಲು ಉಳಿದಿದೆ.

ರಾಜ್ಯಸಭೆ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಉಪ ರಾಷ್ಟ್ರಪತಿ, ರಾಜ್ಯಸಭೆ ಚೇರ್ಮನ್ ವೆಂಕಯ್ಯ ನಾಯ್ಡು ಅವರು ಆಡಳಿತ ಹಾಗೂ ವಿಪಕ್ಷಗಳಿಗೆ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Amid reports of his candidature for the post of deputy chairman in the Rajya Sabha, Shiromani Akali Dal (SAD) leader Naresh Gujral today said that he was not in the race.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X