125 ಕೋಟಿ ಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಅಮಿತ್ ಶಾ

ಭಾರತದ ಜನಸಂಖ್ಯೆ 125 ಕೋಟಿಯಷ್ಟಿದ್ದು, ಎಲ್ಲರಿಗೂ ಉದ್ಯೋಗಾವಕಾಶ ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.

ನವದೆಹಲಿ, ಮೇ 27: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಸಂಭ್ರಮಾಚರಣೆಯಲ್ಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ನಿರುದ್ಯೋಗ ಸಮಸ್ಯೆ ಬಗ್ಗೆ ಮೋದಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಟೀಕಿಸುವವರಿಗೆ ಪ್ರತಿಕ್ರಿಯೆ ನೀಡಿದರು. 125 ಕೋಟಿ ಜನಸಂಖ್ಯೆಯುಳ್ಳ ದೇಶದಲ್ಲಿ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂದರು.

ಎಲ್ಲರೂ ಸರ್ಕಾರಿ ಉದ್ಯೋಗವೇ ಬೇಕು ಎಂದು ಅರ್ಜಿ ಹಾಕಿದರೆ, ಸರ್ಕಾರವೂ ಏನು ಮಾಡಲು ಸಾಧ್ಯವಿಲ್ಲ. ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಸ್ವಂತ ಉದ್ಯೋಗ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, 8 ಕೋಟಿಗೂ ಅಧಿಕ ಮಂದಿ ಇದರ ಲಾಭ ಪಡೆದು ಉದ್ಯೋಗ ನಡೆಸಿದ್ದಾರೆ ಎಂದು ಅಮಿತ್ ಹೇಳಿದರು.[ಮೋದಿ ಸರಕಾರಕ್ಕೆ 3 ವರ್ಷ, 900 ನಗರಗಳಲ್ಲಿ 'ಮೋದಿ ಫೆಸ್ಟ್']

Not Possible To Give Jobs To Everyone In Country Of 125 Crore: Amit Shah

ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದ್ದು, ಇದುವರೆಗೂ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ಕೇಳಿಬಂದಿಲ್ಲ. ಕಳೆದ 70 ವರ್ಷಗಳಲ್ಲಿ ಹಿಂದಿನ ಯಾವ ಸರ್ಕಾರವೂ ಮಾಡದ ಸಾಧನೆಯನ್ನು ಮೋದಿ ಸರ್ಕಾರ ಅಲ್ಪಾವಧಿಯಲ್ಲಿ ಮಾಡಿದೆ ಎಂದರು.

ಮೋದಿ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ, 2015, 2016ರಲ್ಲಿ ಕೇವಲ 1.35 ಲಕ್ಷ ಜನರಿಗೆ ಮಾತ್ರ ಉದ್ಯೋಗಗಳನ್ನು ಒದಗಿಸಿದೆ ಎಂದು ಕಾಂಗ್ರೆಸ್‌ ವಕ್ತಾರ ಅಭಿಶೇಕ್‌ ಮನು ಸಿಂಘ್ವಿ ಟೀಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+