ರಾಜ್ಯಸಭೆ ಚುನಾವಣೆಗೂ ಬಂತು 'ನೋಟಾ' ಆಯ್ಕೆ

Posted By: Gururaj
Subscribe to Oneindia Kannada

ಬೆಂಗಳೂರು, ಆ.2 : ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯುತ್ತಿರುವ ಚುನಾವಣೆ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ. ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯಲ್ಲಿಯೂ 'ನೋಟಾ'ವನ್ನು ಪರಿಚಯಿಸುತ್ತಿದೆ.

ಬಿಜೆಪಿ ಬೆದರಿಕೆಯಿಂದ ಬೆಂಗಳೂರಿಗೆ ಬಂದಿದ್ದೇವೆ : ಗುಜರಾತ್ ಶಾಸಕರ ಅಳಲು

ಆಗಸ್ಟ್ 8ರಂದು ರಾಜ್ಯಸಭೆಗೆ ಮೂವರು ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ NOTA (None Of The Above) ವ್ಯವಸ್ಥೆಯನ್ನು ಬಳಸಲು ಗುಜರಾತ್ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ಇದೇ ಮೊದಲ ಬಾರಿಗೆ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಬಳಕೆಗೆ ಅವಕಾಶ ನೀಡಲಾಗುತ್ತಿದೆ.

NOTA to be available for Rajya Sabha elections in Gujarat

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಕಾಂಗ್ರೆಸ್ ಅಭ್ಯರ್ಥಿ. ಅವರನ್ನು ಮತ್ತೊಮ್ಮೆ ಆರಿಸಿ ರಾಜ್ಯಸಭೆಗೆ ಕಳಿಸಲು ಕಾಂಗ್ರೆಸ್ ಕಾರ್ಯಕತಂತ್ರ ರೂಪಿಸಿದೆ. ಪಕ್ಷದ ಎಲ್ಲಾ ಶಾಸಕರಿಗೆ ಪಕ್ಷ ವಿಪ್ ಜಾರಿಮಾಡಲಾಗುತ್ತಿದೆ.

ಸುಪ್ರೀಂ ಮೊರೆ ಹೋದ ಕಾಂಗ್ರೆಸ್ : ರಾಜ್ಯಸಭೆ ಚುನಾವಣೆಯಲ್ಲಿ 'ನೋಟಾ' ಬಳಕೆಗೆ ಅವಕಾಶ ನೀಡುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಆ.3ರ ಗುರುವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಆ.8ರಂದು ಚುನಾವಣೆ ನಡೆಯಲಿದ್ದು, ಸುಪ್ರೀಂ ತೀರ್ಪು ಕುತೂಹಲ ಮೂಡಿಸಿದೆ.

ಐಟಿ ರೈಡ್ : ರಾಜ್ಯಸಭೆಯಲ್ಲಿ ಕೋಲಾಹಲ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಅಹಮದ್ ಪಟೇಲ್ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ಪ್ರವೇಶ ಬಯಸಿದ್ದಾರೆ. ಈ ಇಬ್ಬರು ನಾಯಕರ ಸ್ಪರ್ಧೆಯಿಂದಾಗಿ ಈ ಚುನಾವಣೆ ದೇಶದ ಗಮನ ಸೆಳೆದಿದೆ.

Till Rajya Sabha Election Gujarat Congress Mla stay In Bengaluru | Oneindia Kannada

ರಾಜ್ಯಸಭೆ ಚುನಾವಣೆಗಾಗಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಬಹುದು ಎಂದು ಎಲ್ಲಾ ಶಾಸಕರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಬೆಂಗಳೂರು ಹೊರವಲಯದ ಈಗಲ್ ಟನ್ ಗಾಲ್ಫ್ ರೆಸಾರ್ಟ್ ನಲ್ಲಿ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಬುಧವಾರ ಬೆಳಗ್ಗೆ ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The None Of The Above (NOTA) option will be available for the first time in upcoming Rajya Sabha elections in Gujarat. Election will be held on August 8, 2017.
Please Wait while comments are loading...