ಹಿಂದೂ ರಾಷ್ಟ್ರದ ಪರಿಕಲ್ಪನೆ ತಪ್ಪಲ್ಲ-ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಂದು ವಿವಾದದ ಬಾಂಬ್ ಸಿಡಿಸಿದ್ದಾರೆ. ಹಿಂದೂ ರಾಷ್ಟ್ರದ ಕಲ್ಪನೆಯಲ್ಲಿ ಯಾವುದೇ ತಪ್ಪಿಲ್ಲ ಅಂತ ಯೋಗಿ ಹೇಳಿದ್ದಾರೆ.
ಲಕ್ನೊ, ಏಪ್ರಿಲ್ 6: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಂದು ವಿವಾದದ ಬಾಂಬ್ ಸಿಡಿಸಿದ್ದಾರೆ. ಹಿಂದೂ ರಾಷ್ಟ್ರದ ಕಲ್ಪನೆಯಲ್ಲಿ ಯಾವುದೇ ತಪ್ಪಿಲ್ಲ ಅಂತ ಯೋಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಭಿವೃದ್ಧಿ ಹಾಗೂ ಪ್ರತಿಯೊಬ್ಬರ ಕಲ್ಯಾಣಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ ಎಂದಿರುವ ಯೋಗಿ ಆದಿತ್ಯನಾಥ್, ಹಿಂದೂ ರಾಷ್ಟ್ರದ ಪರಿಕಲ್ಪನೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.[ಬಿಜೆಪಿಗೆ 37: ಪಕ್ಷದ ಮುಂದಿರುವ 10 ಸವಾಲುಗಳು]

ಇದೇ ವೇಳೆ 'ಹಿಂದುತ್ವ ಎನ್ನುವುದು ಒಂದು ಜೀವನ ಪದ್ಧತಿ' ಎಂದು ಸುಪ್ರೀಂ ಕೋರ್ಟಿನ ಆದೇಶವನ್ನೂ ಆದಿತ್ಯನಾಥ್ ಉಲ್ಲೇಖಿಸಿದ್ದಾರೆ. ಹಿಂದುತ್ವ ನಮ್ಮ ಜನರಿಗೆ ಶಾಂತಿಯಿಂದಿರಲು ಸಹಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.[ಉತ್ತರ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ಈಗ ಜೀನ್ಸ್, ಟೀ ಶರ್ಟ್ ಬ್ಯಾನ್!]
ಆದಿತ್ಯನಾಥ್ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರುತ್ತಿದ್ದಾರೆ ಎಂಬ ಆರೋಪದ ನಡುವೆಯೇ ಈ ಹೇಳಿಕೆ ಹೊರಬಿದ್ದಿದ್ದು ವಿವಾದದ ಅಲೆ ಎಬ್ಬಿಸಿದೆ. (ಒನ್ ಇಂಡಿಯಾ ಸುದ್ದಿ)












Click it and Unblock the Notifications