ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಲ್ಯಾಕ್ ಫಂಗಸ್‌ ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ಕೇಂದ್ರ ಸರ್ಕಾರ ಸೂಚನೆ

|
Google Oneindia Kannada News

ನವದೆಹಲಿ, ಮೇ 20: ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಈಗ ದೇಶಾದ್ಯಂತ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಲ್ಯಾಕ್ ಫಂಗಸ್‌ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೂ ಪತ್ರವನ್ನು ಕಳುಹಿಸಿದೆ. ಈ ಪತ್ರದಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ನ್ಯೂಕೋರ್ಮಿಕೋಸಿಸ್ ರೋಗವನ್ನು "ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಸೂಚಿಸಬಹುದಾದ ಕಾಯಿಲೆ" ಎಂದು ತಿಳಿಸಲಾಗಿದೆ. ಹೀಗೆ ರಾಜ್ಯ ಸರ್ಕಾರಗಳು ಘೋಷಣೆ ಮಾಡಿದ ನಂತರ ದೃಢಪಟ್ಟ ಬ್ಲ್ಯಾಕ್ ಫಂಗಸ್‌ ಪ್ರಕರಣ ಹಾಗೂ ಶಂಕಿತ ಪ್ರಕರಣಗಳ ಬಗ್ಗೆ ಆರೋಗ್ಯ ಸಚಿವಾಲಯಕ್ಕೆ ವರದಿಯನ್ನು ಮಾಡಬೇಕಿದೆ.

ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ "ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ನಿರ್ವಹಣೆಗಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕು" ಎಂದು ತಿಳಿಸಲಾಗಿದೆ.

Notify Mucormycosis under Epidemic Diseases Act: Centre to states

ಮಹಾರಾಷ್ಟ್ರದಲ್ಲಿ 1500ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು 90 ಜನ ಈಗಾಗಲೇ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ 500 ದಾಟಿದೆ. ರಾಜಸ್ಥಾನ ಹಾಗೂ ತೆಲಂಗಾಣ ರಾಜ್ಯದಲ್ಲಿ ಈಗಾಗಲೇ ಬ್ಲ್ಯಾಕ್ ಫಂಗಸ್‌ಅನ್ನು ಸಾಂಕ್ರಾಮಿಕ ರೋಗ ಎಂದು ರಾಜ್ಯ ಸರ್ಕಾರಗಳು ಘೋಷಣೆ ಮಾಡಿದೆ.

English summary
Notify Mucormycosis under Epidemic Diseases Act': Centre to states as Black Fungus raises concern. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X