Maharashtra Election: ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ, 23ಕ್ಕೆ ಫಲಿತಾಂಶ
ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು 23 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ. ಇಂದು ದೆಹಲಿಯಲ್ಲಿ ಚುನಾವಣಾ ಆಯೋಗದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಯಿತು.
ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿದ ನಂತರ, ಈಗ ದೇಶದ ಗಮನ ಜಾರ್ಖಂಡ್ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣದತ್ತ ನೆಟ್ಟಿದೆ. ಇಂದು ದೆಹಲಿಯಲ್ಲಿ ಚುನಾವಣಾ ಆಯೋಗದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಯಿತು. ಈ ವೇಳೆ ಈ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯ ಜೊತೆಗೆ 50 ಸ್ಥಾನಗಳ ಉಪಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ.
ಮಹಾರಾಷ್ಟ್ರದಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 29 ಮತ್ತು ಅಕ್ಟೋಬರ್ 30 ನಾಮಪತ್ರ ಪರಿಶೀಲನೆಯ ಕೊನೆಯ ದಿನಾಂಕವಾಗಿದೆ. ಇನ್ನೂ ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.

ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು 26 ನವೆಂಬರ್ 2024 ರಂದು ಕೊನೆಗೊಳ್ಳಲಿದೆ. ಜಾರ್ಖಂಡ್ ಸದನದ ಅಧಿಕಾರಾವಧಿಯು ಜನವರಿ 5, 2025 ರಂದು ಕೊನೆಗೊಳ್ಳುತ್ತದೆ.
ಜಾರ್ಖಂಡ್‌ನಲ್ಲಿ 2 ಹಂತಗಳಲ್ಲಿ ಮತದಾನ
ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮೊದಲ ಹಂತ ನವೆಂಬರ್ 13 ರಂದು ಮತ್ತು ಎರಡನೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಸಂಖ್ಯೆಯನ್ನು ಚುನಾವಣಾ ಆಯೋಗ ಬಹಿರಂಗಪಡಿಸಿದೆ. ಮಹಾರಾಷ್ಟ್ರದಲ್ಲಿ 9.63 ಕೋಟಿ ಮತದಾರರು ಮತ ಚಲಾಯಿಸಲಿದ್ದರೆ, ಜಾರ್ಖಂಡ್‌ನಲ್ಲಿ 2.6 ಕೋಟಿ ಮತದಾರರಿದ್ದಾರೆ.
ಜಾರ್ಖಂಡ್‌ನಲ್ಲಿ 1ನೇ ಹಂತದ ಮತದಾನಕ್ಕೆ ಅಕ್ಟೋಬರ್ 25 ಹಾಗೂ ಹಂತ 2ಕ್ಕೆ ಅಕ್ಟೋಬರ್ 29 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹಂತ 1ಕ್ಕೆ ಅಕ್ಟೋಬರ್ 28 ಹಾಗೂ ಹಂತ 2ಕ್ಕೆ ಅಕ್ಟೋಬರ್ 30 ನಾಮಪತ್ರ ಪರಿಶೀಲನೆಯ ಕೊನೆಯ ದಿನಾಂಕವಾಗಿದೆ. ಇನ್ನೂ ಹಂತ 1ಕ್ಕೆ ಅಕ್ಟೋಬರ್ 30ರಂದು ಹಾಗೂ ಹಂತ 2ಕ್ಕೆ ನವೆಂಬರ್ 1 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.
ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ಯಾಕೆ ಮತದಾನ ನಡೆಯುತ್ತೆ?
ಕಡಿಮೆ ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ಏಕೆ ಮತದಾನ ನಡೆಯಲಿದೆ ಎಂಬ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರವನ್ನು ನೀಡಿದೆ. ಜಾರ್ಖಂಡ್‌ನಲ್ಲಿ ನಕ್ಸಲಿಸಂ ಜೊತೆಗೆ ಹಲವು ಸಮಸ್ಯೆಗಳಿವೆ, ಹೀಗಾಗಿ ಇಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.












Click it and Unblock the Notifications