ಅಲ್ಪ ಮತಕ್ಕೆ ಕುಸಿದ ಮಣಿಪುರದ ಬಿಜೆಪಿ ಸರ್ಕಾರ

ಮಣಿಪುರ, ಜೂನ್ 17: ಮಣಿಪುರದಲ್ಲಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ರಿವರ್ಸ್ ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಅಧಿಕಾರ ಸ್ಥಾಪನೆಯತ್ತ ಹೆಜ್ಜೆ ಇಟ್ಟಿದೆ. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ನ್ಯಾಷನಲ್ ಪೀಪಲ್ಸ್ ಪಾರ್ಟಿ ಹಿಂಪಡೆಯುವ ಮೂಲಕ ಆಘಾತ ನೀಡಿದೆ.

2017ರ ವಿಧಾನಸಭೆ ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ 28 ಸ್ಥಾನ ಪಡೆದು ಅತಿ ಹೆಚ್ಚು ಸ್ಥಾನ ಗಳಿಸಿದ ಪಕ್ಷ ಎನಿಸಿಕೊಂಡಿತ್ತು. ಬಿಜೆಪಿ 21 ಸ್ಥಾನ ಮಾತ್ರ ಗಳಿಸಲು ಸಾಧ್ಯವಾಗಿತ್ತು.

NPP withdraws support to Biren Singh govt, Congress stakes claim

ಆದರೆ, ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ), ನಾಗಾ ಪೀಪಲ್ಸ್ ಫ್ರಂಟ್ (ಎನ್ ಪಿಎಫ್) ಹಾಗೂ ಲೋಕ್ ಜನಸಕ್ತಿ ಪಾರ್ಟಿ (ಎಲ್ ಜೆಪಿ) ಬೆಂಬಲದಿಂದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿಯ ಸ್ಥಾಪಿಸಿತು. ಬಿರೇನ್ ಸಿಂಗ್ ಮುಖ್ಯಮಂತ್ರಿಯಾದರು. ಒಬ್ಬ ಪಕ್ಷೇತರ ಹಾಗೂ ಟಿಎಂಸಿ ಶಾಸಕ ಕೂಡಾ ಬಿಜೆಪಿ ಬೆಂಬಲಕ್ಕೆ ನಿಂತಿದ್ದರು.

ಆದರೆ, ಈಗ ಎನ್ ಪಿಪಿ ಬೆಂಬಲ ಹಿಂಪಡೆದಿದ್ದು, ಇದರ ಬೆನ್ನಲ್ಲೇ ಟಿಎಂಸಿ ಹಾಗೂ ಪಕ್ಷೇತರ ಶಾಸಕ ಕೂಡಾ ಹಿಂದಕ್ಕೆ ಬಿಜೆಪಿ ಸರ್ಕಾರದಿಂದ ಹೊರ ನಡೆದಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರದಲ್ಲಿ ಸಂಖ್ಯಾಬಲ 23ಕ್ಕೆ ಕುಸಿದಿದೆ. ಈ ನಡುವೆ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಓ ಐಬೊಬಿ ಸಿಂಗ್ ಅವರು ಮುಖ್ಯಮಂತ್ರಿಯಾಗಲು ಮುಂದಾಗಿದ್ದು, ರಾಜ್ಯಪಾಲರ ಭೇಟಿಗೆ ಕಾಲಾವಕಾಶ ಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+