ಪರಮಾಣು ಪೂರೈಕೆದಾರ ಸದಸ್ಯತ್ವ: ಭಾರತಕ್ಕೆ ಬ್ರಿಟನ್ ಬೆಂಬಲ
ನವದೆಹಲಿ, ಸೆಪ್ಟೆಂಬರ್ 28: ಪರಮಾಣು ಪೂರೈಕೆದಾರರ ಗುಂಪು (ಎನ್ಎಸ್ಜಿ) ಸದಸ್ಯತ್ವಕ್ಕಾಗಿ ಭಾರತಕ್ಕೆ ಬೇಷರತ್ ಬೆಂಬಲ ನೀಡುವುದಾಗಿ ಬ್ರಿಟನ್ ಪುನರುಚ್ಚರಿಸಿದೆ.
ಅಂತಾರಾಷ್ಟ್ರೀಯ ಪರಮಾಣು ವಹಿವಾಟಿನ ಉನ್ನತ ಗುಂಪಿನೊಳಗೆ ಭಾರತ ಪ್ರವೇಶ ಪಡೆದುಕೊಳ್ಳಲು ಎಲ್ಲ ರೀತಿಯ ಅರ್ಹತೆ ಹೊಂದಿದೆ ಎಂದು ಬ್ರಿಟನ್ ಹೇಳಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಬ್ರಿಟನ್ನ ವಿದೇಶಾಂಗ ಮತ್ತು ಕಾಮನ್ವೆಲ್ತ್ ಕಚೇರಿ ಅಧಿಕಾರಿಗಳ ನಡುವೆ ನಡೆದ ಮಾತುಕತೆಯ ವೇಳೆ ಅಂತಾರಾಷ್ಟ್ರೀಯ ನಿಯಮಾವಳಿಗಳ ರಕ್ಷಕ ಮತ್ತು ಪ್ರಮುಖ ಸದಸ್ಯನಾಗುವ ಅರ್ಹತೆ ಹೊಂದಿರುವುದನ್ನು ಬ್ರಿಟನ್ ಗಮನಿಸಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

'ಎನ್ಎಸ್ಜಿ ಸದಸ್ಯತ್ವ ಹೊಂದಕ್ಕೆ ಭಾರತ ಸೂಕ್ತ ದೇಶವಾಗಿದೆ. ಅದು ಸದಸ್ಯತ್ವ ಪಡೆಯಬೇಕು ಎನ್ನುವುದು ನಮ್ಮ ನಂಬಿಕೆ. ಭಾರತದ ಸದಸ್ಯತ್ವಕ್ಕೆ ಯಾವ ಆಕ್ಷೇಪಣೆಗಳಿವೆ ಎಂದು ಚೀನಾ ಮಾತ್ರವೇ ವಿವರಿಸಬಲ್ಲದು' ಎಂದು ಹೇಳಿವೆ.
ಪರಮಾಣು ಪ್ರಸರಣ ಮತ್ತು ಅಂತಾರಾಷ್ಟ್ರೀಯ ಕುರಿತು ನಡೆದ ಮಾತುಕತೆ ವೇಳೆ ಭಾರತ, ಪಾಕಿಸ್ತಾನ ಮತ್ತು ಉತ್ತರ ಕೊರಿಯಾಗಳ ನಡುವಿನ ಪರಮಾಣು ಪ್ರಸರಣ ನಂಟಿನ ಬಗ್ಗೆ ಪ್ರಸ್ತಾಪಿಸಿತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಈಗಿನ ವರ್ತನೆ ಬಗ್ಗೆ ಚಿಂತೆ ಪಡುವ ಅಗತ್ಯವಿಲ್ಲ ಎಂದು ಬ್ರಿಟನ್ ಹೇಳಿದೆ.
ರಾಸಾಯನಿಕ ಶಸ್ತ್ರಾಸ್ತ್ರ ನಿಷೇಧ ಸಂಸ್ಥೆಗಳಲ್ಲಿ (ಒಪಿಸಿಡಬ್ಲ್ಯೂ) ರಷ್ಯಾದೊಂದಿಗೆ ಭಾರತವೂ ಒಂದಾಗಿರುವುದು ನಮಗೆ ಬೇಸರ ತಂದಿದೆ. ಭಾರತ ತನ್ನ ನಿಲುವನ್ನು ಮರುಪರಿಶೀಲಿಸಲಿದೆ ಎಂಬ ಭರವಸೆ ಇರುವುದಾಗಿ ಬ್ರಿಟನ್ ತಿಳಿಸಿದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications