'ಶೋಭಾ ಯಾತ್ರೆ' ಮುನ್ಸೂಚನೆ: ಬಿಗಿ ಪೊಲೀಸ್ ಬಂದೋಬಸ್ತ್!
ನೂಹ್: ಇತ್ತೀಚೆಗಷ್ಟೇ ಹಿಂಸಾಚಾರದ ಕೆಂಡದಿಂದ ಹೊರಗೆ ಬಂದಿರುವ ಹರಿಯಾಣದಲ್ಲಿ ಮತ್ತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ನೂಹ್‌ನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಿದ್ದು, ಎಲ್ಲೆಲ್ಲೂ ಹದ್ದಿನ ಕಣ್ಣಿಡಲಾಗಿದೆ. ಹಾಗಾದರೆ ದಿಢೀರ್ ನೂಹ್‌ನಲ್ಲಿ ಭದ್ರತೆ ಹೆಚ್ಚಿಸಿದ್ದು ಯಾಕೆ? ಹರಿಯಾಣದಲ್ಲಿ ಪರಿಸ್ಥಿತಿ ಈಗ ಹೇಗಿದೆ? ಬನ್ನಿ ತಿಳಿಯೋಣ.
ಅಷ್ಟಕ್ಕೂ ಹರಿಯಾಣದ ನೂಹ್‌ನಲ್ಲಿ ಸಮುದಾಯಗಳ ಘರ್ಷಣೆಯಿಂದ ಜುಲೈನಲ್ಲಿ ಅರ್ಧಕ್ಕೆ ನಿಂತಿದ್ದ, 'ಬ್ರಿಜ್ ಮಂಡಲ್ ಶೋಭಾ ಯಾತ್ರೆ' ಮತ್ತೆ ಶುರುವಾಗುವ ಮುನ್ಸೂಚನೆ ಸಿಕ್ಕಿದೆ. 'ಬ್ರಿಜ್ ಮಂಡಲ್ ಶೋಭಾ ಯಾತ್ರೆ' ಮತ್ತೆ ಆರಂಭಿಸುವ ಕುರಿತು ಹಿಂದೂ ಸಂಘಟನೆಗಳು ತಿಳಿಸಿವೆ. ಇದೇ ಕಾರಣಕ್ಕೆ ಅಲರ್ಟ್ ಆಗಿ ಭದ್ರತೆಯನ್ನ ಹೆಚ್ಚಿಸಿದೆ ಸ್ಥಳೀಯ ಆಡಳಿತ. ಈ ಮಧ್ಯೆ ಅಧಿಕಾರಿಗಳು ಅನುಮತಿ ನೀಡದಿದ್ರೂ ಯಾತ್ರೆ ನಡೆಸಲು ಆಯೋಜಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ನೂಹ್ ಸೇರಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸೂಕ್ಷ್ಮ ಪರಿಸ್ಥಿತಿ ನಿಭಾಯಿಸುವುದೇ ಕಷ್ಟ
ಹರಿಯಾಣದಲ್ಲಿ ಹೊತ್ತಿದ್ದ ಕೋಮು ದ್ವೇಷದ ಕಿಚ್ಚು ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಹೀಗಾಗಿ ಪರಿಸ್ಥಿತಿ ಹಿಡಿತಕ್ಕೆ ತರುವಲ್ಲಿ ಭದ್ರತಾ ಪಡೆಗಳು ಕೂಡ ಪರದಾಡಿ ಹೋದವು. ಹೀಗಾಗಿ ಮತ್ತೆ ಯಾತ್ರೆ ಆರಂಭಿಸಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಜೊತೆಗೆ ಸೆಪ್ಟೆಂಬರ್ 3 ರಿಂದ 7 ರವರೆಗೆ ನೂಹ್‌ನಲ್ಲಿ ಜಿ20 ಶೆರ್ಪಾ ಗುಂಪುಗಳ ಸಭೆ ಇರುವ ಕಾರಣಕ್ಕೂ ಯಾತ್ರೆ ನಡೆಸಲು ಅನುಮತಿ ನೀಡಲಾಗಿಲ್ಲ ಎಂದು ಹರಿಯಾಣ ಪೊಲೀಸ್ ಮಹಾನಿರ್ದೇಶಕ ಶತ್ರುಜಿತ್ ಕಪೂರ್ ಸ್ಪಷ್ಟನೆ ನೀಡಿದ್ದಾರೆ. ಮತ್ತೊಮ್ಮೆ ಪರಿಸ್ಥಿತಿ ಕೈಮೀರದಂತೆ ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗಿದೆ.
ಹೊರಗಿನಿಂದ ಯಾರೂ ಬರುವಂತಿಲ್ಲ
ಇನ್ನು ಅರೆಸೇನಾ ಪಡೆ ಮತ್ತು ಭದ್ರತಾ ಸಿಬ್ಬಂದಿಗೆ ರಾಜ್ಯದ ಒಳಗೆ ಮತ್ತು ಜಿಲ್ಲೆಗಳ ಗಡಿಗಳಲ್ಲಿ ಸೂಕ್ತ ಭದ್ರತೆ ಒದಗಿಸಿ, ಪರಿಸ್ಥಿತಿ ಗಮನಿಸಲು ಸೂಚನೆ ನೀಡಲಾಗಿದೆ. ಇಷ್ಟು ಮಾತ್ರವಲ್ಲ, ಆಗಸ್ಟ್ 26 ರಿಂದ 28 ರವರೆಗೂ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿ ಆದೇಶ ಕೂಡ ಹೊರಡಿಸಲಾಗಿದೆ. ಅಲ್ಲದೆ ನೂಹ್‌ನಲ್ಲಿ 1,900 ಹರಿಯಾಣ ಪೊಲೀಸ್ ಸಿಬ್ಬಂದಿ ಮತ್ತು 24 ಅರೆಸೇನಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲೆಗೆ ಪ್ರವೇಶಿಸುವ ಎಲ್ಲಾ ದಾರಿ ಬಂದ್ ಮಾಡಲಾಗಿದ್ದು, ಹೊರಗಿನಿಂದ ಯಾರೂ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ.

ಎಲ್ಲೆಲ್ಲೂ ಬಂದ್ ವಾತಾವರಣ ನಿರ್ಮಾಣ
ಒಟ್ನಲ್ಲಿ 'ಬ್ರಿಜ್ ಮಂಡಲ್ ಶೋಭಾ ಯಾತ್ರೆ'ಯ ಪುನಾರಂಭ ಮುನ್ಸೂಚನೆ ಹಿನ್ನೆಲೆಯಲ್ಲಿ, ಹಲವು ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಅಲ್ದೆ ಸ್ಕೂಲ್, ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆ & ಬ್ಯಾಂಕ್‌ಗಳನ್ನು ಬಂದ್ ಮಾಡಲಾಗಿದೆ. ಎಸ್‌ಎಂಎಸ್ ಸೇವೆ ನಿರ್ಬಂಧಿಸಿದೆ ಸ್ಥಳೀಯ ಆಡಳಿತ. ಈ ಮೂಲಕ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದ್ದು, ಒಟ್ಟು 4 ಅಥವಾ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ ಎಂದು ಖಡಕ್ ಆದೇಶ ಹೊರಡಿಸಿದೆ. ಇದು ಸ್ಥಳೀಯರಲ್ಲಿ ಮತ್ತೆ ಚಿಂತೆ ತಂದಿದ್ದು, ಸೂಕ್ಷ್ಮವಾಗಿರುವ ಸ್ಥಿತಿ ನಿಭಾಯಿಸಲು ಪೊಲೀಸರು ಹಾಗೂ ಅರೆಸೇನಾ ಪಡೆ ಯೋಧರು ಸಜ್ಜಾಗಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications