ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಮೀಸಲಾತಿ ಅಗ್ಗಿಷ್ಟಿಕೆಯಲ್ಲಿ ಬೇಯುತ್ತಿರುವ ಗುಜರಾತ್

|
Google Oneindia Kannada News

ಅಹಮದಾಬಾದ್, ಆ.26 : ಹಾರ್ದಿಕ್ ಪಟೇಲ್ ಎಂಬ ಯುವಕ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಪ್ರತಿಭಟನೆಯ ಕಿಚ್ಚು ಹಚ್ಚಿದ್ದಾನೆ. ಪಟೇಲ್ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾರೂಪ ಪಡೆದುಕೊಳ್ಳುತ್ತಿದ್ದು, ಅಹಮದಾಬಾದ್‌ನಲ್ಲಿ ಪರಿಸ್ಥಿತಿ ನಿಯಂತ್ರಿಸಲು ಸೇನೆ ನಿಯೋಜನೆ ಮಾಡಲಾಗಿದೆ.

22 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್, ಪಟೇಲ್ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವವರ ಮುಂದಾಳತ್ವ ವಹಿಸಿಕೊಂಡಿದ್ದಾನೆ. ಮಂಗಳವಾರ ರಾತ್ರಿ ಮತ್ತು ಬುಧವಾರ ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ ನಡೆದಿದೆ. ಬಸ್, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. [ಹಾರ್ದಿಕ್ ಪಟೇಲ್ ಯಾರು?]

ಹಿಂಸಾಚಾರದಿಂದ ಏನನ್ನೂ ಸಾಧಿಸಲಾಗದು, ಶಾಂತಿ ಕಾಪಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನರಲ್ಲಿ ಮನವಿ ಮಾಡಿದ್ದಾರೆ. ಆದರೆ, ಬುಧವಾರ ಸೂರತ್, ಅಹಮದಾಬಾದ್‌ನ ಹಲವಾರು ಕಡೆ ಪೊಲೀಸರು ಮತ್ತು ಜನರ ನಡುವೆ ಸಂಘರ್ಷ ನಡೆದಿದೆ. [ಜಾತಿ ಮೀಸಲಾತಿ ನಿಷೇಧ ಅಸಾಧ್ಯ, ಏಕೆಂದರೆ?]

ಹಾರ್ದಿಕ್ ಪಟೇಲ್ ಕರೆ ನೀಡಿರುವ ಹೋರಾಟಕ್ಕೆ ಅಪಾರವಾದ ಜನ ಬೆಂಬಲ ವ್ಯಕ್ತವಾಗಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಹೆಸರಿನಲ್ಲಿ ಮೀಸಲಾತಿಗಾಗಿ ಹಾರ್ದಿಕ್ ಒತ್ತಾಯಿಸುತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸೋಣ ಎಂದು ಅವರು ಕರೆ ನೀಡಿದ್ದಾರೆ. ಚಿತ್ರಗಳಲ್ಲಿ ನೋಡಿ ಗುಜರಾತ್‌ನಲ್ಲಿನ ಪರಿಸ್ಥಿತಿ.... [ಪಿಟಿಐ ಚಿತ್ರಗಳು]

ಮೋದಿ ತವರು ರಾಜ್ಯದಲ್ಲಿ ಮೀಸಲಾತಿ ಹೋರಾಟ

ಮೋದಿ ತವರು ರಾಜ್ಯದಲ್ಲಿ ಮೀಸಲಾತಿ ಹೋರಾಟ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಬಸ್, ವಾಹನ, ಅಂಗಡಿಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

22 ವರ್ಷದ ಯುವಕನ ಕರೆಗೆ ಭಾರೀ ಬೆಂಬಲ

22 ವರ್ಷದ ಯುವಕನ ಕರೆಗೆ ಭಾರೀ ಬೆಂಬಲ

22 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್ ಅವರು ಪಟೇಲ್ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವವರ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಮತ್ತು ಬುಧವಾರ ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ ನಡೆದಿದೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸೋಣ

ಶಾಂತಿಯುತವಾಗಿ ಪ್ರತಿಭಟನೆ ನಡೆಸೋಣ

ಮಂಗಳವಾರ ರಾತ್ರಿ ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ ಸಂಭವಿಸಿದ ಬಳಿಕ ಬುಧವಾರ ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸೋಣ ಎಂದು ಹಾರ್ದಿಕ್ ಪಟೇಲ್ ಕರೆ ನೀಡಿದ್ದಾರೆ.

ಶಾಂತಿ ಕಾಪಾಡುವಂತೆ ಪ್ರಧಾನಿ ಕರೆ

ಶಾಂತಿ ಕಾಪಾಡುವಂತೆ ಪ್ರಧಾನಿ ಕರೆ

ಹಿಂಸಾಚಾರದಿಂದ ಏನನ್ನೂ ಸಾಧಿಸಲಾಗದು, ಶಾಂತಿ ಕಾಪಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನರಲ್ಲಿ ಮನವಿ ಮಾಡಿದ್ದಾರೆ. ಆದರೆ, ಬುಧವಾರ ಹಲವು ಕಡೆ ಪೊಲೀಸರ ಜೊತೆ ಪ್ರತಿಭಟನಾಕಾರರು ಸಂಘರ್ಷಕ್ಕೆ ಇಳಿದಿದ್ದಾರೆ.

ಗುಜರಾತ್ ಬಂದ್‌ಗೆ ಕರೆ ನೀಡಲಾಗಿತ್ತು

ಗುಜರಾತ್ ಬಂದ್‌ಗೆ ಕರೆ ನೀಡಲಾಗಿತ್ತು

ಒಬಿಸಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವವರ ಮುಂದಾಳತ್ವ ವಹಿಸಿಕೊಂಡಿರುವ ಹಾರ್ದಿಕ್ ಬುಧವಾರ ಗುಜರಾತ್ ಬಂದ್ ಗೆ ಕರೆ ನೀಡಿದ್ದರು. ಈ ಸುದ್ದಿ ಎಲ್ಲ ಕಡೆ ಹಬ್ಬುವುದನ್ನು ತಪ್ಪಿಸಲು ಸರ್ಕಾರ ಮೊಬೈಲ್ ಮತ್ತು ಇಂಟರ್ ನೆಟ್‌ ಸಂಪರ್ಕವನ್ನು ಸ್ಥಗಿತಗೊಳಿಸಿದೆ.

ಹಾರ್ದಿಕ್ ಪಟೇಲ್ ಬಂಧಿಸಿ ತಪ್ಪು ಮಾಡಿದ ಪೊಲೀಸ್

ಹಾರ್ದಿಕ್ ಪಟೇಲ್ ಬಂಧಿಸಿ ತಪ್ಪು ಮಾಡಿದ ಪೊಲೀಸ್

ಮಂಗಳವಾರ ಹಾರ್ದಿಕ್ ಪಟೇಲ್ ಅವರನ್ನು ಕೆಲ ಕಾಲ ಬಂಧಿಸಿದ ಗುಜರಾತ್ ಪೊಲೀಸರಿಗೆ ತಮ್ಮ ತಪ್ಪಿನ ಅರಿವಾಯಿತು. ಏಕೆಂದರೆ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತು. ಬೈಕ್, ಕಾರುಗಳಿಗೆ ಜನರು ಬೆಂಕಿ ಹಚ್ಚಿದರು.

ಬಸ್ಸಿಗೆ ಕಲ್ಲು ತೂರಿದ ಸಿಬ್ಬಂದಿ

ಬಸ್ಸಿಗೆ ಕಲ್ಲು ತೂರಿದ ಸಿಬ್ಬಂದಿ

ಹಾರ್ದಿಕ್ ಪಟೇಲ್ ಬಂಧನ ಖಂಡಿಸಿ ಪ್ರತಿಭಟನಾಕಾರರು ಅಹಮದಾಬಾದ್‌ನಲ್ಲಿ ಬಸ್ಸಿಗೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಪೊಲೀಸ್ ಮತ್ತು ಸೇನೆ ಭದ್ರತೆ

ಪೊಲೀಸ್ ಮತ್ತು ಸೇನೆ ಭದ್ರತೆ

ಗುಜರಾತ್‌ನಲ್ಲಿ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸ್ ಮತ್ತು ಸೇನೆಯನ್ನು ನಿಯೋಜನೆ ಮಾಡಲಾಗಿದೆ.

English summary
After violence on Tuesday night, Gujarat is set for another tense day as Patel community protesters have called for a state-wide bandh on Wednesday. Gujarat violence in pictures.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X