Naba Kishore Das : ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ತುತ್ತಾಗಿದ್ದಒಡಿಶಾ ರಾಜ್ಯದ ಆರೋಗ್ಯ ಸಚಿವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ನವದೆಹಲಿ, ಜನವರಿ 29: ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ತುತ್ತಾಗಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಭಾನುವಾರ ಗುಂಡಿನ ದಾಳಿ ನಡೆದಿದೆ. ಬ್ರಜರಾಜ ನಗರದ ಗಾಂಧಿ ಚೌಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಝಾರ್ಸುಗುಡ ಜಿಲ್ಲೆ ವ್ಯಾಪ್ತಿಯ ಬ್ರಜರಾಜನಗರ ಬಳಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುಂಡಿನ ದಾಳಿ ನಡೆಸಿದ್ದರ ಬಗ್ಗೆ ಪಿಟಿಐ ವರದಿ ಮಾಡಿತ್ತು.

ತೀವ್ರ ರಕ್ತಸ್ರಾವವಾಗಿದ್ದ ಆರೋಗ್ಯ ಸಚಿವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಸಚಿವ ನಬಾ ಕಿಶೋರ್ ದಾಸ್ ಕೊನೆಯುಸಿರೆಳೆದರು.
ಘಟನೆ ಹಿನ್ನೆಲೆ
ಒಡಿಶಾ ರಾಜ್ಯದ ಆರೋಗ್ಯ ಸಚಿವರಾದ ನಬಾ ಕಿಸೋರ್ ದಾಸ್ ಅವರು ಭಾನುವಾರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 1ಗಂಟೆಗೆ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್‌ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸಚಿವರ ಮೇಲೆ ಗುಂಡಿನ ದಾಳಿ ನಡೆಸಿದರು.

ಘಟನೆಯಲ್ಲಿ ಸಚಿವರ ಎದೆಗೆ ಗುಂಡು ತಗುಲಿದ್ದರಿಂದ ಅವರಿಗೆ ತೀವ್ರವಾಗಿ ರಕ್ತಸ್ರಾವವಾಯಿತು. ಕೂಡಲೇ ಅವರನ್ನು ಹತ್ತಿರದಲ್ಲಿದ್ದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.
ಗುಂಡಿನ ದಾಳಿಯಲ್ಲಿ ಸಚಿವರ ಎದೆಗೆ ತೀವ್ರ ಗಾಯಗಳಾಗಿದ್ದವು. ಗಾಯ ಸರಿಪಡಿಸಲಾಗಲಿಲ್ಲ. ಹೃದಯ ಬಡಿತ ಸುಧಾರಿಸಲು ವೈದ್ಯರು ಸಾಕಷ್ಟು ಪ್ರಯತನ್ ಪಟ್ಟರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ವೈದ್ಯರ ಸಕಲ ಪ್ರಯತ್ನಗಳೆಲ್ಲವು ವಿಫಲವಾದವು. ಸಚಿವರನ್ನು ಬದುಕುಳಿಸಲಾಗಲಿಲ್ಲ ಎಂದು ಅಪೋಲೋ ಆಸ್ಪತ್ರೆ ವೈದ್ಯರ ಹೇಳಿಕೆಯಲ್ಲಿ ತಿಳಿಸಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications