Breaking: ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡು ಹಾರಿಸಿದ ಪೊಲೀಸ್, ಸ್ಥಿತಿ ಗಂಭೀರ

ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಭುವನೇಶ್ವರ, ಜನವರಿ. 29: ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಬ್ರಜರಾಜ ನಗರದ ಗಾಂಧಿ ಚೌಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿವೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದು, ಸಚಿವರ ಎದೆಗೆ ಗುಂಡು ತಗುಲಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Odisha Health Minister Shot at by Aassistant sub inspector

ಸಚಿವ ನಬಾ ಕಿಶೋರ್ ದಾಸ್ ಅವರು ವಾಹನದಿಂದ ಕೆಳಗೆ ಇಳಿಯುತ್ತಿದ್ದಂತೆ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ, ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ಸ್ಪಷ್ಟವಾಗಿಲ್ಲ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ರಕ್ತಸಿಕ್ತವಾಗಿದ್ದ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯಗಳು ಹೊರಬಂದಿವೆ.

"ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಅವರು ಸಚಿವರ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಬ್ರಜರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಭೋಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಸಾರ್ವಜನಿಕ ಕುಂದುಕೊರತೆಗಳ ಕಚೇರಿ ಉದ್ಘಾಟನೆಯಲ್ಲಿ ಸಚಿವ ನಬಾ ದಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಕಾರಿನಿಂದ ಕೆಳಗೆ ಇಳಿಯುವಾಗ ಅವರನ್ನು ಸ್ವಾಗತಿಸಲು ಜನರು ಜಮಾಯಿಸಿದರು. ಇದ್ದಕ್ಕಿದ್ದಂತೆ ಗುಂಡಿನ ಸದ್ದು ಕೇಳಿಸಿತು. ಪೊಲೀಸ್ ಸಿಬ್ಬಂದಿಯೊಬ್ಬರು ಹತ್ತಿರದಿಂದ ಗುಂಡು ಹಾರಿಸಿ ಓಡಿಹೋಗುವುದನ್ನು ನಾವು ನೋಡಿದ್ದೇವೆ. ಸಚಿವರನ್ನು ವಿಮಾನದಲ್ಲಿ ಭುವನೇಶ್ವರಕ್ಕೆ ಕರೆದೊಯ್ಯಲಾಗುವುದು" ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+