Odisha Train Accident: ರೈಲು ಅಪಘಾತಕ್ಕೆ ಮಸೀದಿ ಕಾರಣ ಎಂದು ಪೋಸ್ಟ್: ತುಮಕೂರು ಬಿಜೆಪಿ ಕಾರ್ಯಕರ್ತೆಗೆ ಸಂಕಷ್ಟ

ಒಡಿಶಾದ ಬಾಲಾಸೋರ್​ನಲ್ಲಿನಡೆದ ಭೀಕರ ರೈಲು ಅಪಘಾತದಲ್ಲಿ 288ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 900 ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಾಂತ್ರಿಕ ತೊಂದರೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಇದನ್ನು ಖಚಿತಪಡಿಸಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

ಆದರೆ ಕೆಲವು ಕಿಡಿಗೇಡಿಗಳು ಇಂತಹ ರೈಲು ದುರಂತದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಕೆಲವರು ಈ ರೈಲು ದುರಂತಕ್ಕೆ ಮಸೀದಿ ಕಾರಣ ಎಂದು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದುರಂತಕ್ಕೆ ಕೋಮು ಬಣ್ಣ ಹಚ್ಚುವ ಕೆಲಸ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರಿಂದ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಪೊಲೀಸರು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.

Shakunthala

ತುಮಕೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಹೆಚ್‌ಎಸ್‌ ಎನ್ನುವ ಮಹಿಳೆ ಕೂಡ ಇಂತಹ ಪೋಸ್ಟ್ ಹಂಚಿಕೊಂಡಿದ್ದು, ಒಡಿಶಾ ಪೊಲೀಸರು ಮಹಿಳೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಪೋಸ್ಟ್ ಹಂಚಿಕೊಂಡಿರುವ ಎಲ್ಲರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾಗೆ ಕಾನೂನು ಕ್ರಮದ ಭೀತಿ ಎದುರಾಗಿದೆ. ಸದ್ಯ ಟ್ವೀಟ್ ಡಿಲೀಟ್ ಮಾಡಿದ್ದರು, ಅದರ ಸ್ಕ್ರೀನ್‌ಶಾಟ್ ವ್ಯಾಪಕವಾಗಿ ಹಚಿಕೆಯಾಗುತ್ತಿದೆ.

ಶಕುಂತಲಾ ಬಗ್ಗೆ ಕರ್ನಾಟಕ ಪೊಲೀಸರಿಂದ ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಹಲವು ಪ್ರಮುಖರು ಕೂಡ ಈ ಫೋಟೊ ಹಂಚಿಕೊಂಡಿದ್ದು ಎಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಒಡಿಶಾ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ. ಅಲ್ಲದೆ ಇಂತಹ ಸುಳ್ಳು ಸುದ್ದಿಯನ್ನು ಹಂಚಬೇಡಿ ಮತ್ತು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಏನಿದು ಫೋಟೊ ಅಸಲಿಯತ್ತು?

ರೈಲು ಅಪಘಾತವಾದ ಸ್ಥಳದಲ್ಲಿ ಮಸೀದಿ ಇದೆ ಎಂದು ಕೆಲವರು ಫೋಟೊ ಹಂಚಿಕೊಂಡಿದ್ದಾರೆ. ಆದರೆ ಅಪಘಾತಕ್ಕೆ ಸ್ವಲ್ಪ ದೂರದಲ್ಲಿ ಇರುವುದು ಮಸೀದಿಯಲ್ಲ ಬದಲಾಗಿ ಇಸ್ಕಾನ್ ದೇವಸ್ಥಾನ ಎಂದು ತಿಳಿದುಬಂದಿದೆ. ದೇವಸ್ಥಾನದ ಅರ್ಧಭಾಗವನ್ನು ಮಾತ್ರ ಹಂಚಿಕೊಂಡು ಅದನ್ನು ಮಸೀದಿ ಎನ್ನುವಂತೆ ಬಿಂಬಿಸಲು ಯತ್ನಿಸಲಾಗಿತ್ತು.

ಸದ್ಯ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಗೊಂದಲಕ್ಕೆ ಕಾರಣವಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದರೆ, ಕೋಮು ಸೌಹಾರ್ದತೆ ಕದಡುವ ಕೆಲಸ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದೆಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+