Train Accident: ರೈಲು ದುರಂತಕ್ಕೆ 'ಕೋಮು ಬಣ್ಣ' ನೀಡುವವರ ವಿರುದ್ಧ ಒಡಿಶಾ ಪೊಲೀಸರ ಕಿಡಿ
ನವದೆಹಲಿ, ಜೂನ್. 04: 200ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ಭೀಕರ ರೈಲು ಅಪಘಾತಕ್ಕೆ 'ಕೋಮು ಬಣ್ಣ' ನೀಡುವವರರ ವಿರುದ್ಧ ಒಡಿಶಾ ಪೊಲೀಸರು ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಬಾಲಸೋರ್ ಅಪಘಾತದ ಕುರಿತು "ಕೆಟ್ಟ ಪ್ರೇರಿತ" ಪೋಸ್ಟ್‌ಗಳನ್ನು ಪ್ರಸಾರ ಮಾಡುತ್ತಿವೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
It has come to notice that some social media handles are mischievously giving communal colour to the tragic train accident at Balasore. This is highly unfortunate.
— Odisha Police (@odisha_police) June 4, 2023
Investigation by the GRP, Odisha into the cause and all other aspects of the accident is going on.
"ವದಂತಿಗಳನ್ನು ಹರಡುವ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆಯುಂಟು ಮಾಡಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಪ್ರಾರಂಭಿಸಲಾಗುವುದು" ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ. ಅಪಘಾತದ ಕಾರಣದ ಬಗ್ಗೆ ರಾಜ್ಯದ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ತನಿಖೆ ನಡೆಸುತ್ತಿದ್ದಾರೆ.

"ಬಾಲಸೋರ್‌ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತಕ್ಕೆ ಕೆಲವು ಸಾಮಾಜಿಕ ಮಾಧ್ಯಮಗಳು ಕಿಡಿಗೇಡಿತನದಿಂದ ಕೋಮು ಬಣ್ಣವನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ. ಅಪಘಾತದ ಕಾರಣ ಮತ್ತು ಇತರ ಎಲ್ಲ ಅಂಶಗಳ ಕುರಿತು ಒಡಿಶಾದ ಜಿಆರ್‌ಪಿಯಿಂದ ತನಿಖೆ ನಡೆಯುತ್ತಿದೆ. ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದನ್ನು ತಡೆಯಲು ನಾವು ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇವೆ. ವದಂತಿಗಳನ್ನು ಹಬ್ಬಿಸುವ ಮೂಲಕ ಕೋಮು ಸೌಹಾರ್ದತೆ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರದ ದುರಂತದ ನಂತರ ಸಾವಿನ ಸಂಖ್ಯೆ 288 ಕ್ಕೆ ಏರಿದೆ ಮತ್ತು 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಿಸ್ಟಂ ಸಮಸ್ಯೆಯಿಂದ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ಬಿಡಿ ಸದಸ್ಯ ಜಯ ವರ್ಮಾ ಸಿನ್ಹಾ ಅವರು "ಸಿಗ್ನಲಿಂಗ್ ಹಸ್ತಕ್ಷೇಪ" ಪತ್ತೆಯಾಗಿದೆ ಎಂದು ಹೇಳಿದ್ದು, ಹೆಚ್ಚಿನ ತನಿಖೆಯ ನಂತರವೇ ವಿವರಗಳು ಹೊರಬರುತ್ತವೆ.
ಭಾರತದ ಸ್ವಯಂಚಾಲಿತ ರೈಲು ಸಂರಕ್ಷಣಾ ವ್ಯವಸ್ಥೆಯಾದ 'ಕವಚ್' ಗೂ ಅಪಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರೈಲ್ವೇ ಸಚಿವರ ಹೇಳಿಕೆ ಸರಿಯಾಗಿದೆ ಎಂದು ಜಯ ವರ್ಮಾ ಸಿನ್ಹಾ ಹೇಳಿದ್ದು, ಈ ಸಂರಕ್ಷಣಾ ವ್ಯವಸ್ಥೆ ಇಂತಹ ಅಪಘಾತವನ್ನು ತಪ್ಪಿಸಲು ಇದು ಸಹಾಯಕವಾಗುವುದಿಲ್ಲ ಎಂದಿದ್ದಾರೆ.

ಕೆಲವು ತಜ್ಞರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ರೈಲ್ವೆಯ ಲೆಕ್ಕಪರಿಶೋಧನಾ ವರದಿಯನ್ನು ಹೈಲೈಟ್ ಮಾಡಿದ್ದಾರೆ. ಇದು ರೈಲು ಸುರಕ್ಷತೆಯಲ್ಲಿ ಗಂಭೀರ ಲೋಪಗಳನ್ನು ಒತ್ತಿ ಹೇಳಿದೆ. ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುಗಳ ಕುರಿತಾದ 2022 ರ ವರದಿಯು ಹಳಿತಪ್ಪುವಿಕೆಗಳು ಮತ್ತು ಘರ್ಷಣೆಗಳನ್ನು ತಡೆಗಟ್ಟುವ ಕ್ರಮಗಳನ್ನು ರೈಲ್ವೇ ಸಚಿವಾಲಯವು ಸ್ಪಷ್ಟವಾಗಿ ನಿಗದಿಪಡಿಸಿದೆ ಮತ್ತು ಜಾರಿಗೊಳಿಸಿದೆಯೇ ಎಂದು ಕಂಡುಹಿಡಿಯಲು ಪ್ರಯತ್ನಿಸಿದೆ.
ತಪಾಸಣೆಗಳಲ್ಲಿನ ಕೊರತೆಗಳು, ಅಪಘಾತಗಳ ನಂತರ ವಿಚಾರಣೆಯ ವರದಿಗಳನ್ನು ಸಲ್ಲಿಸಲು ಅಥವಾ ಸ್ವೀಕರಿಸಲು ವಿಫಲತೆ. ಆದ್ಯತೆಯ ಕಾರ್ಯಗಳಿಗೆ ಮೀಸಲಾದ ರೈಲ್ವೆ ನಿಧಿಯನ್ನು ಬಳಸದಿರುವುದು. ಟ್ರ್ಯಾಕ್ ನವೀಕರಣದಲ್ಲಿ ಅನುದಾನ ಇಳಿಮುಖವಾಗುತ್ತಿರುವ ಪ್ರವೃತ್ತಿ ಮತ್ತು ಸುರಕ್ಷತಾ ಕಾರ್ಯಾಚರಣೆಗಳಲ್ಲಿ ಸಿಬ್ಬಂದಿಯನ್ನು ನೇಮಿಸದಿರುವುದು ಸೇರಿದಂತೆ ಹಲವು ಗಂಭೀರ ಸಮಸ್ಯೆಗಳನ್ನು ಬೊಟ್ಟು ಮಾಡಿದೆ. ಒಡಿಶಾ ರೈಲು ಅಪಘಾತದ ನಂತರ ವ್ಯಾಪಕವಾಗಿ ಚರ್ಚಿಸಲಾಗುತ್ತಿರುವ ಟ್ರ್ಯಾಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ನಲ್ಲಿನ ವೈಫಲ್ಯಗಳನ್ನು ವರದಿಯು ಸೂಚಿಸಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications