ಒಡಿಶಾದಲ್ಲಿ ಮಳೆ : ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲೂ ಮಳೆ ಮುನ್ಸೂಚನೆ
ಬೆಂಗಳೂರು, ಫೆಬ್ರವರಿ 25: ಪೂರ್ವ ಮತ್ತು ಈಶಾನ್ಯ ಭಾರತದ ಅನೇಕ ರಾಜ್ಯಗಳು ಈ ವಾರವನ್ನು ಮಳೆಯ ಜೊತೆಗೆ ಬರಮಾಡಿಕೊಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನವನ್ನು ತಗ್ಗಿಸಲು ಮಳೆಯ ಅವಶ್ಯಕತೆಯೂ ಇದೆ.
ಒಡಿಶಾದಲ್ಲಿ ಸೋಮವಾರದಿಂದ ಆರಂಭವಾಗಿರುವ ಮಳೆ ಇಂದೂ ಮುಂದುವರೆದಿದೆ. ಸೋಮವಾರ ಮತ್ತು ಮಂಗಳವಾರ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಬರುವ ಶುಕ್ರವಾರದವರೆಗೂ ಮಳೆ ಮುಂದುವರೆಯಲಿದೆ.
ಒಡಿಶಾದಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಒಡಿಶಾದಲ್ಲಿ 70 ಮಿ.ಮೀ ಮಳೆಯಾಗಿದೆ. 30-40 ಸೆಂ.ಮೀನಷ್ಟು ಹಿಮಪಾತವಾಗಿದೆ.
ಸಿಕ್ಕಿಂ, ತ್ರಿಪುರ, ಮೇಘಾಲಯ, ಮಿಜೋರಾಂ, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶದಲ್ಲಿ ಮಳೆಯಾಗಲಿದೆ. ಈ ಪ್ರದೇಶದಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತಲೂ ಹೆಚ್ಚಿರಿಲಿದೆ.

ಎಲ್ಲಿ ಮಳೆಯಾಗಿದೆ?
ಛತ್ತೀಸ್‌ಗಢ, ಜಾರ್ಖಂಡ್, ಉತ್ತರ ಪ್ರದೇಶದಲ್ಲಿ ಸೋಮವಾರ ಆಲಿಕಲ್ಲು, ಗುಡುಗು ಸಹಿತ ಮಳೆಯಾಗಿದೆ. ಮಂಗಳವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಒಡಿಶಾದಲ್ಲಿ ಮಳೆಯಾಗಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ, ತ್ರಿಪುರ, ಅರುಣಾಚಲ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ ಈ ಪ್ರದೇಶಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬುಧವಾರ ಈ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ.

ಉತ್ತರಾಖಂಡ್‌ನಲ್ಲಿ ಹಿಮಪಾತ
ಉತ್ತರಾಖಂಡ್‌ನಲ್ಲಿ ಹಿಮಪಾತವಾಗುತ್ತಿದೆ. ಭದ್ರಾಕ್, ಜಾಜ್‌ಪುರ, ಕಟಕ್ ಸಂಬಲ್‌ಪುರ, ಅಂಗುಲ್, ಧೆಂಕನಲ್, ಮಯ್ಯೂರ್ಭಂಜ್, ಸೋನೆಪುರಿ, ಬೌಧ್, ಗಜಪತಿ, ಖುದರ್ದಾ ಕೇಂದ್ರಪಾರಾ, ಜಜ್ಪುರ್, ಬಾಲಸೋರ್‌ನಲ್ಲಿ ಮಳೆಯಾಗಲಿದೆ.

ಕರ್ನಾಟಕದಲ್ಲೂ ಮಳೆಯ ಮುನ್ಸೂಚನೆ
ಶಿವಮೊಗ್ಗದಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರ್ನಾಟದಕ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕರ್ನಾಟಕದ ಉತ್ತರ ಒಳನಾಡು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದೆ. ನಗರದಲ್ಲಿ ಗರಿಷ್ಠ 29.6 ಡಿಗ್ರಿ ಸೆಲ್ಸಿಯಸ್ , ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.












Click it and Unblock the Notifications