Odisha Train accident: ಅಪಘಾತ ಸಂತ್ರಸ್ತರಿಗೆ ವಿರಾಟ್ ಕೊಹ್ಲಿ 30 ಕೋಟಿ ರೂ. ದೇಣಿಗೆ ನೀಡಿದ್ದಾರೆಯೇ?, ಅಸಲಿ ಸತ್ಯ ಏನು?
ನವದೆಹಲಿ, ಜೂನ್, 06: ಒಡಿಶಾದಲ್ಲಿನ ರೈಲು ಅಪಘಾತ ದುರಂತದಿಂದ ಇಡೀ ರಾಷ್ಟ್ರವೇ ಆಘಾತಕ್ಕೊಳಗಾಗಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈವರೆಗೂ 280ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹಾಗೆಯೇ ಅಪಘಾತದ ಸಂತ್ರಸ್ತರ ಕುಟುಂಬಸ್ಥರಿಗೆ ವಿರಾಟ್ ಕೊಹ್ಲಿ ಅವರು 30 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಈ ಬಗ್ಗೆ ವಿರಾಟ್ ಕೊಹ್ಲಿ ಎಲ್ಲಿಯೂ ಮಾಹಿತಿಯನ್ನು ಹಂಚಿಕೊಂಡಿಲ್ಲ.
ವಿರಾಟ್ ಕೊಹ್ಲಿ ಅವರು ಒಡಿಶಾದ ರೈಲು ಅಪಘಾತ ದುರಂತದಲ್ಲಿ ಮೃತಪಟ್ಟವರಿಗೆ ತಮ್ಮ ಟಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದರು ಅಷ್ಟೇ. ಆದರೆ ಸಾಮಾಜಿ ಜಾಲತಾಣಗಳಲ್ಲಿ ಮಾತ್ರ ವಿರಾಟ್ ಕೊಹ್ಲಿ ಅವರು ದೇಣಿಗೆ ನೀಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗುತ್ತಿದೆ. ಹಾಗಾದರೆ ಈ ಕುರಿತು ಅಸಲಿ ಸತ್ಯ ಇಲ್ಲಿದೆ ನೋಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಟ್ವಿಟರ್‌ರ್‌ನಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿರಾಟ್ ಕೊಹ್ಲಿ ಬಾಲಾಸೋರ್ ಜಿಲ್ಲೆಯಲ್ಲಿ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ 30 ರೂಪಾಯಿ ಕೋಟಿ ದೇಣಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ ಎನ್ನುವ ಪೋಸ್ಟರ್ ವೈರಲ್ ಆಗುತ್ತಿದೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಹಿಂದಿನಿಂದಲೂ ಸಂಕಷ್ಟದ ಸಮಯದಲ್ಲಿ ನೊಂದವರಿಗೆ ನೆರವು ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ವಿಶೇಷವಾಗಿ ಮಹಾಮಾರಿ ಕೋವಿಡ್ ಸಮಯದಲ್ಲಿ ಅವರು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಕುಟುಂಬಗಳಿಗೆ ಸಹಾಯ ಮಾಡಲು ಪಿಎಂ ಕೇರ್ಸ್ ನಿಧಿಗೆ ಹೆಚ್ಚಿನ ಹಣವನ್ನು ದೇಣಿಗೆ ನೀಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ.
ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ವಿರಾಟ್ ಕೊಹ್ಲಿ 30 ಕೋಟಿ ರೂಪಾಯಿ ದೇಣಿಗೆ ನೀಡಲು ಮುಂದಾಗಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ವಿರಾಟ್ ಕೊಹ್ಲಿ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಮತ್ತು ಅವರ ಟ್ವಿಟರ್ ಖಾತೆಯಲ್ಲೂ ಹಂಚಿಕೊಂಡಿಲ್ಲ. ಇದನ್ನು ಗಮನಿಸಿದರೆ ಯಾರೋ ಈ ಸುದ್ದಿಯನ್ನೂ ಸುಮ್ಮನೆ ಬೇಕು ಅಂತಲೇ ಹಬ್ಬಿಸಿದ್ದಾರೆ ಎನ್ನುವುದು ಮಾತ್ರ ಎದ್ದು ಕಾಣುತ್ತಿದೆ.
ಅಲ್ಲದೆ ಒಡಿಶಾ ರೈಲು ಅಪಘಾತ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸುವ ಬಗ್ಗೆ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ. ಆದರೆ ಅವರು ಸಂತ್ರಸ್ತರಿಗೆ ಯಾವುದೇ ರೀತಿಯ ದೇಣಿಗೆ ನೀಡುವ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಅಂದರೆ ಅವರು 30 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಸುಮ್ಮನೆ ಕೆಲವರು ಪೋಸ್ಟರ್‌ಗಳನ್ನು ಹರಿಬಿಟ್ಟಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
"ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತ ದುರಂತದ ಬಗ್ಗೆ ಕೇಳಿ ದುಃಖವಾಯಿತು. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಮರ್ಪಿತವಾಗುತ್ತವೆ. ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಅಂತಾ" ಅಷ್ಟೇ ವಿರಾಟ್ ಕೊಹ್ಲಿ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.
Saddened to hear about the tragic train accident in Odisha. My thoughts and prayers go out to the families who lost their loved ones and wishing a speedy recovery to the injured.
— Virat Kohli (@imVkohli) June 3, 2023
ಇನ್ನು ಬಾಲಸೋರ್ ಜಿಲ್ಲೆಯ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಾಗ ಒಡಿಶಾದಲ್ಲಿ ಈ ಅಪಘಾತ ಸಂಭವಿಸಿದೆ. ಈ ವೇಳೆ ಹಲವಾರು ಬೋಗಿಗಳು ಹಳಿತಪ್ಪಿದವು. ಅಲ್ಲದೆ ಬೆಂಗಳೂರಿನಿಂದ ಬಂದಂತಹ ಮೂರನೇ ರೈಲು ಕೂಡ ಅಳಿಯ ಮೇಲೆ ಅಡ್ಡಲಾಗಿ ಬಿದ್ದಿದ್ದ ಕೋರಮಂಡಲ್ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬಹುದೊಡ್ಡ ಅನಾಹುತವೇ ಸಂಭವಿಸಿತ್ತು.












Click it and Unblock the Notifications