ಕರ್ನಾಟಕದ ಬೆಂಗಳೂರು ಸೇರಿದ ದೇಶದ ಪ್ರಮುಖ ನಗರಗಳಲ್ಲಿ ಫೆಬ್ರವರಿ 7ರಂದು ಕ್ಯಾಬ್, ಆಟೋ, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಸಾಧ್ಯತೆ
Ola, Uber, Rapido Drivers strike: ಭಾರತದಲ್ಲಿ ಆ್ಯಪ್ ಆಧಾರಿತ ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಚಾಲಕರ ಸಂಘಟನೆಗಳು ಫೆಬ್ರವರಿ 7ರ ಶನಿವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಓಲಾ, ಉಬರ್ ಹಾಗೂ ರ್ಯಾಪಿಡೋ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರು ಈ ಹೋರಾಟದಲ್ಲಿ ಭಾಗವಹಿಸುವ ಸಾಧ್ಯತೆಯಿದ್ದು, ಕರ್ನಾಟಕ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕ್ಯಾಬ್, ಆಟೋ ಹಾಗೂ ಬೈಕ್ ಟ್ಯಾಕ್ಸಿ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಪ್ರತಿಭಟನೆಯನ್ನು 'ಆಲ್ ಇಂಡಿಯಾ ಬ್ರೇಕ್‌ಡೌನ್' ಎಂದು ಕರೆಯಲಾಗಿದ್ದು, ಸುಮಾರು 6 ಗಂಟೆಗಳ ಕಾಲ ಆ್ಯಪ್ ಆಧಾರಿತ ಸಾರಿಗೆ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಯಾಕಂದ್ರೆ, ಚಾಲಕರು ತಮ್ಮ ರೈಡ್-ಹೇಲಿಂಗ್ ಅಪ್ಲಿಕೇಶನ್‌ಗಳನ್ನು ಏಕಕಾಲದಲ್ಲಿ ಸ್ವಿಚ್ ಆಫ್ ಮಾಡುವ ನಿರೀಕ್ಷೆಯಿದೆ. ತೆಲಂಗಾಣ ಗಿಗ್ ಮತ್ತು ಪ್ಲಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ ಮುಷ್ಕರಕ್ಕೆ ನೇತೃತ್ವ ವಹಿಸಿದ್ದು, ಇತರ ರಾಜ್ಯಗಳ ಚಾಲಕ ಸಂಘಟನೆಗಳು ಸಹ ಬೆಂಬಲ ಸೂಚಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಾಲಕರ ಆದಾಯ ಕುಸಿತ: ಚಾಲಕರ ಸಂಘಗಳ ಆರೋಪದಂತೆ, 2025ರ ಮೋಟಾರು ವಾಹನ ಮಾರ್ಗಸೂಚಿಗಳು ಇದ್ದರೂ ಸಹ ಹಲವು ರೈಡ್-ಹೇಲಿಂಗ್ ಕಂಪನಿಗಳು ದರಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸುತ್ತಿವೆ. ಇದರಿಂದ ಚಾಲಕರ ಆದಾಯ ಕುಸಿತವಾಗಿದ್ದು, ಕೆಲಸದ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆಯ ಕೊರತೆ ಎದುರಾಗುತ್ತಿದೆ. ಕನಿಷ್ಠ ದರಗಳಿಲ್ಲದೆ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಗಳು ಅಸಮಾಧಾನ ವ್ಯಕ್ತಪಡಿಸಿವೆ.
ಫೆಬ್ರವರಿ 7ರಂದು ಕೆಲಸ ಸ್ಥಗಿತದ ಎಚ್ಚರಿಕೆ: ಈ ಹಿಂದೆ ಟ್ವಿಟರ್‌ನಲ್ಲಿ ಮುಷ್ಕರ ಘೋಷಿಸಿದ ಸಂಘಗಳು, ದೇಶಾದ್ಯಂತ ಅಪ್ಲಿಕೇಶನ್ ಆಧಾರಿತ ಸಾರಿಗೆ ಕಾರ್ಮಿಕರು ಫೆಬ್ರವರಿ 7ರಂದು ಕೆಲಸ ಸ್ಥಗಿತಗೊಳಿಸುತ್ತಾರೆ ಎಂದು ಹೇಳಿವೆ. ಈ ಮುಷ್ಕರದಿಂದ ಹಲವು ನಗರಗಳಲ್ಲಿ ಸಾರಿಗೆ ಸೇವೆ ಸ್ಥಗಿತವಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಇದೆ.
Hon’ble @nitin_gadkari ji, @MORTHIndia @Ponnam_INC App-based drivers and riders across India demand government-notified minimum base fares for #Ola, #Uber, #Rapido #Porter other aggregators, as mandated under Motor Vehicle Aggregator Guidelines, 2025. pic.twitter.com/epMHtJKOXS
— Telangana Gig and Platform Workers Union (@TGPWU) February 1, 2026
ಸಂಘಟನೆಗಳ ಆಗ್ರಹವೇನು?: ಸಂಘಟನೆಗಳ ಪ್ರಕಾರ, ಕಂಪನಿಗಳು ದೊಡ್ಡ ಪ್ರಮಾಣದ ಲಾಭ ಗಳಿಸುತ್ತಿವೆ. ಆದರೂ ಸಹ ಚಾಲಕರಿಗೆ ನ್ಯಾಯಯುತ ಆದಾಯ ಒದಗಿಸುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ನಿಯಂತ್ರಣಾತ್ಮಕ ಚೌಕಟ್ಟನ್ನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಚಾಲಕರ ಪ್ರಮುಖ ಬೇಡಿಕೆಗಳು
* ಆಟೋ, ಕ್ಯಾಬ್ ಮತ್ತು ಬೈಕ್ ಟ್ಯಾಕ್ಸಿಗಳಿಗೆ ಕನಿಷ್ಠ ಮೂಲ ದರಗಳನ್ನು ನಿಗದಿಪಡಿಸಬೇಕು.
* ವಾಣಿಜ್ಯ ಉದ್ದೇಶಕ್ಕೆ ಖಾಸಗಿ ವಾಹನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು.
* ಚಾಲಕರಿಗೆ ಸಾಮಾಜಿಕ ಭದ್ರತೆ, ವಿಮೆ ಹಾಗೂ ಕೆಲಸದ ಸಮಯಕ್ಕೆ ಸಂಬಂಧಿಸಿದ ನಿಯಮಗಳನ್ನು ಕಾನೂನುಬದ್ಧವಾಗಿ ಜಾರಿಗೆ ತರಬೇಕು.
ಯಾವೆಲ್ಲಾ ನಗರಗಳಲ್ಲಿ ಸೇವೆ ಸ್ಥಗಿತ?: ಮುಷ್ಕರದ ಪರಿಣಾಮ ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್, ಚೆನ್ನೈ ಸೇರಿದಂತೆ ಹಲವಾರು ಮಹಾನಗರಗಳಲ್ಲಿ ಆ್ಯಪ್ ಆಧಾರಿತ ಸಾರಿಗೆ ಸೇವೆಗಳು ಸ್ಥಗಿತವಾಗುವ ಸಾಧ್ಯತೆಯಿದೆ. ಪ್ರಯಾಣಿಕರು ಪರ್ಯಾಯ ಸಾರಿಗೆ ವ್ಯವಸ್ಥೆಗಳನ್ನು ಹುಡುಕಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ಚಾಲಕರ ಸಂಘಗಳು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧವಿದ್ದು, ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ದೊಟ್ಟ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಈ ಮುಷ್ಕರವು ಗಿಗ್ ಕಾರ್ಮಿಕರ ಸಮಸ್ಯೆಗಳತ್ತ ದೇಶದ ಗಮನ ಸೆಳೆಯುವ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications