Get Updates
Get notified of breaking news, exclusive insights, and must-see stories!

Omar Abdullah Oath Taking: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಕೇಂದ್ರಾಡಳಿತ ಪ್ರದೇಶದ ಚುನಾವಣೆಯಲ್ಲಿ ತಮ್ಮ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಜಯದ ನಂತರ ಬಿಗಿ ಭದ್ರತೆಯ ನಡುವೆ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾಷನಲ್ ಕಾನ್ಫರೆನ್ಸ್‌ನ ಸುರೀಂದರ್ ಕುಮಾರ್ ಚೌಧರಿ ಅವರು ಕೇಂದ್ರಾಡಳಿತ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2019 ರಲ್ಲಿ ಆರ್ಟಿಕಲ್ 370 ರದ್ದತಿ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಒಮರ್ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

Omar Abdullah takes oath as J amp amp K Chief Minister Surinder Choudhary his deputy

ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಮರ್ ಮತ್ತು ಅವರ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಇಂದು ಪ್ರಮಾಣ ವಚನ ಸ್ವೀಕರಿಸುವ ಮುನ್ನ ಒಮರ್ ಅಬ್ದುಲ್ಲಾ ಅವರು ಶ್ರೀನಗರದಲ್ಲಿರುವ ಶೇಕ್ ಮೊಹಮ್ಮದ್ ಅಬ್ದುಲ್ಲಾ ಅವರ ಮಜರ್-ಎ-ಅನ್ವರ್‌ನಲ್ಲಿ ನಮನ ಸಲ್ಲಿಸಿದರು.

ಇನ್ನೂ ಜಮ್ಮು ಮತ್ತು ಕಾಶ್ಮೀರದ ಸಂಪುಟದ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಅಲ್ಲದೇ ಶಾಸಕಾಂಗ ಪಕ್ಷದ ನಾಯಕನಾಗಿ ಗುಲಾಮ್ ಅಹ್ಮದ್ ಮಿರ್ ಅವರನ್ನು ಕಾಂಗ್ರೆಸ್ ಮಂಗಳವಾರ ನೇಮಕ ಮಾಡಿದೆ.

ಶ್ರೀನಗರಕ್ಕೆ ಹಲವು ನಾಯಕರ ಆಗಮನ

ಇನ್ನೂ ಇಂಡಿಯಾ ಒಕ್ಕೂಟದಕ್ಕೂ ಆಹ್ವಾನಗಳನ್ನು ನೀಡಲಾಯಿತು. ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ ಶ್ರೀನಗರಕ್ಕೆ ಆಗಮಿಸಿದ್ದಾರೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿಯ ಹಂಗಾಮಿ ನಾಯಕ ಪ್ರಕಾಶ್ ಕಾರಟ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ, ದ್ರಾವಿಡ ಮುನ್ನೇತ್ರ ಕಳಗಂ ಉಪ ಪ್ರಧಾನ ಕಾರ್ಯದರ್ಶಿ ಕನಿಮೊಳಿ ಮತ್ತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಡಿ ರಾಜಾ ಸೇರಿದಂತೆ ಇಂಡಿಯಾ ಬ್ಲಾಕ್ ನಾಯಕರು ಸೋಮವಾರ ಶ್ರೀನಗರಕ್ಕೆ ಆಗಮಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

90 ಸ್ಥಾನಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 42 ಮತ್ತು ಕಾಂಗ್ರೆಸ್ 6 ವಿಧಾನಸಭಾ ಸ್ಥಾನಗಳನ್ನು ಗೆದ್ದಿವೆ. ಇನ್ನೂ ಬಿಜೆಪಿ 29 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪಿಡಿಪಿ ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಚುನಾವಣಾ ಪೂರ್ವ ಮೈತ್ರಿಕೂಟದಿಂದ 49 ಶಾಸಕರಿದ್ದು, ಇದೀಗ ಐವರು ಸ್ವತಂತ್ರ ಶಾಸಕರು ಕೂಡ ಒಮರ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ, ಆಮ್​ ಆದ್ಮಿ ಪಕ್ಷವು ಕೂಡ ಬೆಂಬಲ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+