ಜಮ್ಮು & ಕಾಶ್ಮೀರ ಸಿಎಂ ಆಗಿ ಇಂದು ಹೊಸ ಇತಿಹಾಸ ಬರೆಯಲಿದ್ದಾರೆ ಒಮರ್ ಅಬ್ದುಲ್ಲಾ

ಶ್ರೀನಗರ, ಅಕ್ಟೋಬರ್ 16: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ಕಾಂಗ್ರೆಸ್-ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟದ ಸರ್ಕಾರ ಬುಧವಾರ ಅಸ್ತಿತ್ವಕ್ಕೆ ಬರಲಿದೆ. ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನ್ಯಾಷನಲ್ ಕಾನ್ಪರೆನ್ಸ್‌ಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿದ್ದು, ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಒಟ್ಟು 90 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46.

2024ರ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಪರೆನ್ಸ್ 42 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಪಕ್ಷದ 6, ನಾಲ್ವರು ಪಕ್ಷೇತರರು ಸೇರಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಬುಧವಾರ 54 ವರ್ಷದ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಒಮರ್ ಅಬ್ದುಲ್ಲಾ 2ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ.

Omar Abdullah To Take Oath As Jammu and Kashmir Chief Minister First CM Of Union Territory

ಹೊಸ ಇತಿಹಾಸ ನಿರ್ಮಾಣ: ಕೇಂದ್ರದ ಎನ್‌ಡಿಎ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿ ಅಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿತ್ತು. ಬಳಿಕ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಲಾಗಿದೆ. ಒಮರ್ ಅಬ್ದುಲ್ಲಾ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿ ಎಂಬ ಇತಿಹಾಸ ನಿರ್ಮಾಣ ಮಾಡಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಅಕ್ಟೋಬರ್ 8ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು. ನ್ಯಾಷನಲ್ ಕಾನ್ಪರೆನ್ಸ್ 42, ಬಿಜೆಪಿ 29, ಕಾಂಗ್ರೆಸ್ 6, ಪಿಡಿಪಿ 3, ಜೆಪಿಸಿ 1 ಮತ್ತು ಇತರರು 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಪಕ್ಷೇತರರು ನ್ಯಾಷನಲ್ ಕಾನ್ಪರೆನ್ಸ್ ಬೆಂಬಲಿಸಿದ್ದಾರೆ. ಆದ್ದರಿಂದ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಶೇರ್-ಐ-ಕಾಶ್ಮೀರ ಇಂಟರ್ ನ್ಯಾಷನಲ್ ಕನ್ವೆಕ್ಷನ್ ಸೆಂಟರ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೂತನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

'ಇಂಡಿಯಾ' ಮೈತ್ರಿಕೂಟ ಪಕ್ಷಗಳ ಪ್ರಮುಖ ನಾಯಕರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸೇರಿದಂತೆ ಹಲವು ನಾಯಕರಿಗೆ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಬುಧವಾರ ಒಮರ್ ಅಬ್ದುಲ್ಲಾ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಬಳಿಕ ಅವರು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಂತರ ನಡೆಯಲಿದೆ. ನ್ಯಾಷನಲ್ ಕಾನ್ಪರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಯಲ್ಲಿ ಕಾಂಗ್ರೆಸ್‌ಗೆ ಸಚಿವ ಸ್ಥಾನ ಸಿಗಲಿದೆಯೇ? ಎಂದು ಕಾದು ನೋಡಬೇಕಿದೆ.

ಕೇಂದ್ರಾಡಳಿತ ಪ್ರದೇಶವಾದ ಕಾರಣ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾದರೂ ಸಹ ಹಲವು ಅಧಿಕಾರಗಳು ಲೆಫ್ಟಿನೆಂಟ್ ಗವರ್ನರ್ ಕೈಯಲ್ಲಿ ಇರುತ್ತವೆ. ಆದ್ದರಿಂದ ದೆಹಲಿ ಮಾದರಿಯಲ್ಲಿ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗವರ್ನರ್ ನಡುವೆ ಜಟಾಪಟಿ ನಡೆಯುವ ನಿರೀಕ್ಷೆಯೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+