ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಓಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯಗಳಿಗೆ ಕೇಂದ್ರದ ತಂಡ ರವಾನಿಸಲು ಮೋದಿ ನಿರ್ದೇಶನ

|
Google Oneindia Kannada News

ನವದೆಹಲಿ, ಡಿಸೆಂಬರ್ 23: ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

ದೇಶದಲ್ಲಿ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವುದರ ಹಿನ್ನೆಲೆ ಪರಿಸ್ಥಿತಿ ಕುರಿತು ಚರ್ಚಿಸುವುದಕ್ಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಹಿರಿಯ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಮಹತ್ವದ ಸಭೆ ನಡೆಸಿದರು. ಈ ವೇಳೆ ಸಭೆಯಲ್ಲಿ ಓಮಿಕ್ರಾನ್ ಸೋಂಕು ನಿಯಂತ್ರಣ ಮತ್ತು ನಿರ್ವಹಣೆಗೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.

Infographics; ಭಾರತದ ಓಮಿಕ್ರಾನ್ ಪಕರಣಗಳು 271ಕ್ಕೆ ಏರಿಕೆInfographics; ಭಾರತದ ಓಮಿಕ್ರಾನ್ ಪಕರಣಗಳು 271ಕ್ಕೆ ಏರಿಕೆ

ಇದರ ಮಧ್ಯೆ ಮಹಾರಾಷ್ಟ್ರದಲ್ಲಿ ಗುರುವಾರವೊಂದೇ ದಿನ 23 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮುಂಬೈನಲ್ಲಿ 77 ದಿನಗಳ ನಂತರ ಮೊದಲ ಬಾರಿಗೆ 600ಕ್ಕಿಂತ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿನ ಕೊವಿಡ್-19 ಹಾಗೂ ರೂಪಾಂತರಿ ಓಮಿಕ್ರಾನ್ ಸ್ಥಿತಿ ಜೊತೆಗೆ ಪ್ರಧಾನಮಂತ್ರಿ ಮೋದಿ ಸಭೆಯ ಪ್ರಮುಖ ಅಂಶಗಳನ್ನು ಮುಂದೆ ಪಟ್ಟಿ ಮಾಡಲಾಗಿದೆ.

Omicron cases in India today (23 December 2021); Here is the PM Modi Meeting And Highlights

ಭಾರತದಲ್ಲಿ ಓಮಿಕ್ರಾನ್ ಹಾಗೂ ಮೋದಿ ಸಭೆಯ ಮುಖ್ಯಾಂಶ:

* ಹೊಸ ರೂಪಾಂತರದ ದೃಷ್ಟಿಯಿಂದ, ನಾವು ( "ಸತಾರ್ಕ್" ಮತ್ತು "ಸಾವಧಾನ್" ) ಎಚ್ಚರಿಕೆ ಮತ್ತು ಜಾಗರೂಕರಾಗಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ಸಂಜೆ ಒಮಿಕ್ರಾನ್‌ನ ಕುರಿತು ನಡೆದ ಪರಿಶೀಲನಾ ಸಭೆಯ ನಂತರ ಪ್ರಧಾನಿ ಈ ರೀತಿ ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ, ಕೋವಿಡ್-ಸುರಕ್ಷಿತ ನಡವಳಿಕೆಯ ಅಗತ್ಯವು ಇನ್ನೂ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಒತ್ತಿ ಹೇಳಿದ್ದಾರೆ.

* ಕಡಿಮೆ ವ್ಯಾಕ್ಸಿನೇಷನ್, ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣ, ಅಗತ್ಯ ಆರೋಗ್ಯ ಮೂಲಸೌಕರ್ಯ ಇಲ್ಲದ ರಾಜ್ಯಗಳಲ್ಲಿ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ನೆರವು ನೀಡುವುದಕ್ಕೆ ಕೇಂದ್ರ ಸರ್ಕಾರವು ತಜ್ಞರ ತಂಡಗಳನ್ನು ಕಳುಹಿಸಬೇಕು ಎಂದು ಪ್ರಧಾನಿ ಮೋದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

* ವೈರಸ್ ಹರಡುವುದನ್ನು ನಿರ್ಬಂಧಿಸಲು ಕ್ರಿಸ್‌ಮಸ್ ಮತ್ತು ಹೊಸ ವರ್ಷದಂದು ಕೂಟಗಳನ್ನು ನಿಷೇಧಿಸಲು ಹಲವಾರು ರಾಜ್ಯಗಳು ಮತ್ತು ಯುಟಿಗಳು ಆದೇಶಗಳನ್ನು ರವಾನಿಸಿವೆ.

* ಓಮಿಕ್ರಾನ್ ಸೋಂಕಿತ ಪ್ರಕರಣಗಳ ಏರಿಕೆ ಭೀತಿ ಹಿನ್ನೆಲೆ ಮಧ್ಯಪ್ರದೇಶದಲ್ಲಿ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೂ ರಾತ್ರಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

* ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ 77 ದಿನಗಳ ನಂತರ ಮೊದಲ ಬಾರಿಗೆ 602 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ ಅಕ್ಟೋಬರ್ 6ರಂದು ಕಡೆಯ ಬಾರಿ ಮುಂಬೈನಲ್ಲಿ 629 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು. ತದನಂತರ ಈಗ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳು ಸಂಖ್ಯೆ 2,813ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 39,423 ಮಂದಿಗೆ ಕೊವಿಡ್-19 ಸೋಂಕು ಪರೀಕ್ಷಿಸಲಾಗಿದೆ.

* ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 23 ಹೊಸ ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಪುಣೆಯಲ್ಲಿ 13, ಮುಂಬೈನಲ್ಲಿ 5, ಉಸ್ಮಾನಾಬಾದ್ 2, ಥಾಣೆ, ನಾಗ್ಪುರ, ಮಿರಾ-ಭಯಾಂದರ್ ನಗರದಲ್ಲಿ 1 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.

* ಮಹಾರಾಷ್ಟ್ರದಲ್ಲಿ ಈವರೆಗೂ 88 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, RT-PCR ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ನಂತರದಲ್ಲಿ 42 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ.

* ದೇಶದ 16 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೂ 300ಕ್ಕೂ ಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರ 88, ದೆಹಲಿ 64, ಕರ್ನಾಟಕ 31 ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

* ಓಮಿಕ್ರಾನ್ ರೂಪಾಂತರವು ಡೆಲ್ಟಾಕ್ಕಿಂತ ಕನಿಷ್ಠ ಮೂರು ಪಟ್ಟು ಹೆಚ್ಚು ಹರಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಹಿನ್ನೆಲೆ ವಾರ್ ರೂಮ್‌ಗಳನ್ನು "ಸಕ್ರಿಯಗೊಳಿಸಲು" ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈಗಾಗಲೇ ಎಚ್ಚರಿಕೆ ನೀಡಿದೆ.

English summary
Omicron cases in India today (23 December 2021); Here is the PM Modi Meeting Highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X