ಓಮಿಕ್ರಾನ್: ಆಸ್ಪತ್ರೆಗಳು, ನಿಯಂತ್ರಣ ಕೊಠಡಿಗಳ ಸ್ಥಾಪಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ, ಜನವರಿ 2: ದೇಶದಲ್ಲಿ ಹೊಸ ವರ್ಷದ ಮೊದಲ ದಿನವೇ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಕೊರೊನಾ ಸೋಂಕು ಹರಡುವುದನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದಲ್ಲಿ ಕೊರೊನಾವೈರಸ್ ಪ್ರಕರಣಗಳ ಹೆಚ್ಚಳವನ್ನು ಎದುರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮತ್ತು ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿಗಳನ್ನು ರಚಿಸುವಂತೆ ಆರೋಗ್ಯ ಕಾರ್ಯದರ್ಶಿ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ಜಿಲ್ಲೆ/ಉಪ-ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ಮತ್ತು ಕೋವಿಡ್ ಮೀಸಲಾದ ಆರೋಗ್ಯ ಮೂಲಸೌಕರ್ಯವನ್ನು ಮರುಪರಿಶೀಲಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ. "ದೇಶದಲ್ಲಿ ಕೊರೊನಾದೊಂದಿಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏಕಾಏಕಿ ಅಧಿಕವಾಗುತ್ತಿದೆ. ಹೀಗಾಗಿ ನಾವು ಆರೋಗ್ಯ ಮೂಲಸೌಕರ್ಯವನ್ನು ಮೇಲ್ವಿಚಾರಣೆ ಮಾಡಬೇಕಾಗಿದೆ. ಕ್ಷೇತ್ರ ಮಟ್ಟದಲ್ಲಿ ಮೇಕ್-ಶಿಫ್ಟ್ ಆಸ್ಪತ್ರೆಗಳನ್ನು ಮಾಡಬೇಕು, ಜಿಲ್ಲಾ ಮಟ್ಟದ ಕಣ್ಗಾವಲು ಸಕ್ರಿಯಗೊಳಿಸಬೇಕು" ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಭಾರತದಲ್ಲಿ ಈವರೆಗೆ ಸುಮಾರು 1,525 ಜನರು ಓಮಿಕ್ರಾನ್ ರೂಪಾಂತರಕ್ಕೆ ಒಳಗಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಹೊಸದಾಗಿ 460 ಓಮಿಕ್ರಾನ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಇದು ಅತೀ ಹೆಚ್ಚು ಪ್ರಕರಣಗಳನ್ನು ಹೊಂದಿರುವ ರಾಜ್ಯವಾಗಿದೆ. ಇಂದು ದೇಶದಲ್ಲಿ 27,553 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸುಮಾರು 284 ಜನರು ವೈರಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶ ತೋರಿಸಿದೆ.

Omicron surge in the country: central letter to states
ಮಹಾರಾಷ್ಟ್ರದಲ್ಲಿ 9,170 ಹೊಸ ಕೊರೊನವೈರಸ್ ಪ್ರಕರಣಗಳು ವರದಿಯಾಗಿವೆ, ಹಿಂದಿನ ದಿನಕ್ಕಿಂತ ಹೋಲಿಸಿದರೆ 1,103 ಪ್ರಕರಣಗಳು ಹೆಚ್ಚಾಗಿವೆ. ಶನಿವಾರ ಏಳು ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಶುಕ್ರವಾರ, ರಾಜ್ಯದಲ್ಲಿ 8,067 ಕೋವಿಡ್ -19 ಪ್ರಕರಣಗಳು ಮತ್ತು ಎಂಟು ಸಾವುಗಳು ವರದಿಯಾಗಿವೆ. ಗುರುವಾರ, ಹೊಸ ಪ್ರಕರಣಗಳು 5,368 ಮತ್ತು 22 ಸಾವುಗಳು ವರದಿಯಾಗಿವೆ. ಮಹಾರಾಷ್ಟ್ರದ ಕೋವಿಡ್ -19 ಪ್ರಕರಣಗಳ ಸಂಖ್ಯೆ ಶನಿವಾರ 66,87,991 ಕ್ಕೆ ಏರಿಕೆಯಾಗಿದೆ. ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 1,41,533 ಕ್ಕೆ ಏರಿಕೆಯಾಗಿದೆ. ಕಳೆದ ದಿನ 1,445 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ, ಇದುವರೆಗೆ ಚೇತರಿಸಿಕೊಂಡವರ ಸಂಖ್ಯೆ 65,10,541 ಕ್ಕೆ ತಲುಪಿದೆ. ಈಗ 32,225 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 460 ಒಮಿಕ್ರಾನ್ ಪ್ರಕರಣಗಳು ದಾಖಲಾಗಿದ್ದು WHO ಕಳವಳ ವ್ಯಕ್ತಪಡಿಸಿದೆ.

ಶನಿವಾರದಂದು ದೆಹಲಿಯು ಕೊರೊನವೈರಸ್ ಪ್ರಕರಣಗಳಲ್ಲಿ ಶೇಕಡಾ 50ರಷ್ಟು ಹೆಚ್ಚಳವನ್ನು ದಾಖಲಿಸಿದೆ. 2,716 ಕೊರೊನವೈರಸ್ ಪ್ರಕರಣಗಳು ದಾಖಲಾಗಿದ್ದು, ನಗರದಲ್ಲಿ ಒಂದು ಸಾವು ಕೂಡ ದಾಖಲಾಗಿದೆ. ನಗರದಲ್ಲಿ ಮೇ 21 ರಿಂದ ಕೊರೊನಾ ಹರಡುವಿಕೆ ಅತ್ಯಧಿಕವಾಗಿದೆ. ಈ ದಿನ 3,009 ಪ್ರಕರಣಗಳು ದಾಖಲಾಗಿದ್ದರೆ, 252 ಸಾವುಗಳು ವರದಿಯಾಗಿವೆ. ಶುಕ್ರವಾರ ಹೊಸ ವರ್ಷದ ಮುನ್ನಾದಿನದಂದು 1,796 ಪ್ರಕರಣಗಳು ದಾಖಲಾಗಿವೆ. ಗುರುವಾರ ಅಧಿಕೃತ ಅಂಕಿಅಂಶಗಳ ಪ್ರಕಾರ 1,313 ಪ್ರಕರಣಗಳು ದಾಖಲಾಗಿವೆ. ನಗರದಲ್ಲಿ ಕೊರೊನಾವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 25,108 ಕ್ಕೆ ಏರಿದೆ.

Omicron surge in the country: central letter to states
ಇನ್ನೂ COVID-19 ನ ಹೊಸ Omicron ವೈರಸ್ ದೆಹಲಿಯಲ್ಲಿ ಕಳೆದ ಕೆಲವು ದಿನಗಳ ಅವಧಿಯಲ್ಲಿ ಭಾರಿ ಏರಿಕೆ ದಾಖಲಾಗಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಬುಧವಾರ, ಮಂಗಳವಾರ ಮತ್ತು ಸೋಮವಾರ ದೈನಂದಿನ ಪ್ರಕರಣಗಳ ಸಂಖ್ಯೆ ಕ್ರಮವಾಗಿ 923, 496 ಮತ್ತು 331 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಐದು ರಾಜ್ಯಗಳೆಂದರೆ ಮಹಾರಾಷ್ಟ್ರ 9,170 ಪ್ರಕರಣಗಳು, ಪಶ್ಚಿಮ ಬಂಗಾಳ 4,512 ಪ್ರಕರಣಗಳು, ದೆಹಲಿ 2,716 ಪ್ರಕರಣಗಳು, ಕೇರಳ 2,435 ಪ್ರಕರಣಗಳು ಮತ್ತು ತಮಿಳುನಾಡು 1,489 ಪ್ರಕರಣಗಳು ದಾಖಲಾಗಿವೆ. ಭಾನುವಾರದಂದು ಕೇರಳದಲ್ಲಿ 241 ಕೋವಿಡ್ ಸಾವುಗಳು ಮತ್ತು ಪಶ್ಚಿಮ ಬಂಗಾಳದಲ್ಲಿ ಒಂಬತ್ತು ಸಾವುಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ, ಭಾರತವು ಒಟ್ಟು 25,75,225 ಲಸಿಕೆ ಡೋಸ್‌ಗಳನ್ನು ನೀಡಿದ್ದು, ಇದುವರೆಗೆ ನೀಡಲಾದ ಒಟ್ಟು ಡೋಸ್‌ಗಳ ಸಂಖ್ಯೆಯನ್ನು 1,45,44,13,005 ಕ್ಕೆ ತಲುಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+