ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ಗೆ ಮೋದಿ ಶುಭಾಶಯ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಡಿಸೆಂಬರ್ 12: ಗುಜರಾತ್ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಹುಲ್ ಗಾಂಧಿ ಪರಸ್ಪರ ಟೀಕೆಯಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧ ಆಯ್ಕೆಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧ ಆಯ್ಕೆ

ಹೀಗಿದ್ದೂ ಸೋಮವಾರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪ್ರಧಾನಿ ಶುಭಾಶಯಕ್ಕೆ ಅಷ್ಟೇ ವಿನಮ್ರವಾಗಿ ರಾಹುಲ್ ಗಾಂಧಿ ಧನ್ಯವಾದವನ್ನೂ ಸಲ್ಲಿಸಿದ್ದಾರೆ.

On Rahul Gandhi’s elevation, this is what Modi had to say

"ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರಿಗೆ ನಾನು ಶುಭಾಶಯ ಕೋರುತ್ತೇನೆ. ಅಧಿಕಾರಾವಧಿ ಫಲಪ್ರದವಾಗಿರಲಿ ಎಂದು ಬಯುಸುತ್ತೇನೆ," ಎಂದು ಸೋಮವಾರ ಸಂಜೆ 6.41ಕ್ಕೆ ಮೋದಿ ಟ್ವೀಟ್ ಮಾಡಿದ್ದರು.

ಇದಕ್ಕೆ ಸುಮಾರು 5 ಗಂಟೆ ನಂತರ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. "ನಿಮ್ಮ ಶುಭಾಶಯಕ್ಕೆ ಧನ್ಯವಾದಗಳು ಮೋದಿ ಜೀ," ಎಂದು ರಾಹುಲ್ ಟ್ವೀಟ್ ನಲ್ಲೇ ಧನ್ಯವಾದ ಹೇಳಿದ್ದಾರೆ.

ಇದೇ ಡಿಸೆಂಬರ್ 16ರಂದು ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪುತ್ರನಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.

English summary
Rahul Gandhi was elected unopposed as the president of the Congress. Prime Minister Narendra Modi and Rahul Gandhi who have exchanged barbs galore at each other during the campaign for the Gujarat assembly elections, however, took time out to exchange pleasantries following the latter's elevation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X