ನನ್ನನ್ನು ಹುಡುಕಲು ನಿಮ್ಮ ಬಳಿ ಆಗಲ್ಲ: ಮಲ್ಯ ಸವಾಲು

Subscribe to Oneindia Kannada

ಬೆಂಗಳೂರು, ಮಾರ್ಚ್, 13: "ಲಂಡನ್ ನಲ್ಲಿ ಮಾಧ್ಯಮಗಳು ನನ್ನನ್ನು ಹುಡುಕುತ್ತಿವೆ, ಪ್ರಿಯ ಮಾಧ್ಯಮ ಪ್ರತಿನಿಧಿಗಳೆ ನಿಮ್ಮ ಶ್ರಮ ಮತ್ತು ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ" ಎಂದು ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ.[ಸಂಥಿಂಗ್ ವಿತ್ ಶಾಮ್ ನಲ್ಲಿ ಮಲ್ಯ, ದರ್ಶನ್ ಬಗ್ಗೆ, ಕ್ಲಿಕ್ ಮಾಡಿ]

ನನಗೆ ಮಾಧ್ಯಮಗಳೊಂದಿಗೆ ಮಾತನಾಡಲು ಇಷ್ಟವಿಲ್ಲ. ವ್ಯರ್ಥ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳಿದ್ದಾರೆ. ಈ ಮೂಲಕ ಮಲ್ಯ ನನ್ನನ್ನು ಹಿಡಿಯಲು ಸಾಧ್ಯವಿಲ್ಲ ಎಂಬ ಪರೋಕ್ಷ ಸೂಚನೆ ನೀಡಿದ್ದಾರೆ.[ವಿಜಯ್ ಮಲ್ಯ 'ಮಣ್ಣಿನ ಮಗ' ಎಂದ ದೇವೇಗೌಡ]

Once again: Vijay Mallya Hits Media on Twitter

ಹಿಂದೆಯೂ ಟ್ವೀಟ್ ಮೂಲಕ ಉತ್ತರ ನೀಡಿದ್ದ ಮಲ್ಯ "ನಾನು ಎಲ್ಲಿಯೂ ಓಡಿ ಹೋಗಿಲ್ಲ.. ನಾನೊಬ್ಬ ಅಂತಾರಾಷ್ಟ್ರೀಯ ಮಟ್ಟದ ಉದ್ಯಮಿಯಾಗಿದ್ದು, ಕೆಲಸದ ನಿಮಿತ್ತ ವಿದೇಶಕ್ಕೆ ತೆರಳುತ್ತಲೇ ಇರುತ್ತೇನೆ. ದೇಶದ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದರು.[ಟಿಪ್ಪು ಖಡ್ಗ ತಂದ ಮಲ್ಯರ ಗತಕಾಲದ ವೈಭವ ಹೇಗಿತ್ತು?]

17 ಬ್ಯಾಂಕ್ ಗಳಲ್ಲಿ ಸುಮಾರು 9 ಸಾವಿರ ಕೋಟಿ ರು. ಸಾಲ ಮಾಡಿಕೊಂಡು ಸುಸ್ತಿದಾರ ಎಂದು ಕರೆಸಿಕೊಂಡಿರುವ ಮಲ್ಯಗೆ ಜಾರಿ ನಿರ್ದೇಶನಾಲಯ ಸಮನ್ಸ್ ಸಹ ನೀಡಿದೆ. ಮಾರ್ಚ್ 18ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Vijay Mallya on Sunday, March 12th 2016 hit back at the media reports that he has fled the country to avoid legal action against him. "I am being hunted down by media in UK. Sadly they did not look in the obvious place. I will not speak to media so don't waste your efforts.
Please Wait while comments are loading...