ಛತ್ತೀಸ್‌ಗಡ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಸಾವು
ರಾಯ್ಪುರ್, ಜೂನ್ 27: ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ನಡೆಸಿರುವ ಎನ್‌ಕೌಂಟರ್‌ನಲ್ಲಿ ಬಂಡುಕೋರರ ಮಲಂಗೀರ್ ಪ್ರದೇಶ ಸಮಿತಿ ಸದಸ್ಯನಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಸಂತೋಷ್ ಮಾರ್ಕಮ್ ಅನ್ನು ಹೊಡೆದುರುಳಿಸಲಾಗಿದೆ.
ದಾಂತೇವಾಡ ಜಿಲ್ಲೆಯ ಪೊರ್ದಮ್ ಎಂಬಲ್ಲಿ ಮಧ್ಯಾಹ್ನ 12.30ರ ಹೊತ್ತಿಗೆ ಭದ್ರತಾ ಸಿಬ್ಬಂದಿ ಮತ್ತು ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ 25 ಪ್ರಕರಣಗಳಲ್ಲಿ ಬೇಕಾಗಿರುವ ಸಂತೋಷ್ ಮಾರ್ಕೆಮ್ ಅನ್ನು ಹಿಡಿದು ಕೊಟ್ಟವರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು. ಇದೀಗ ಭದ್ರತಾ ಪಡೆಯ ಗುಂಡಿಗೆ ಅದೇ ಭಯೋತ್ಪಾದಕ ಬಲಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
"ಛತ್ತೀಸ್ ಗಢದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ) ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ತದನಂತರದಲ್ಲಿ ನಂತರ ಭದ್ರತಾ ಸಿಬ್ಬಂದಿ ನಡೆಸಿದ ಪ್ರತಿದಾಳಿಯಲ್ಲಿ ಸಂತೋಷ್ ಮಾರ್ಕೆಮ್ ಮೃತಪಟ್ಟಿದ್ದಾನೆ," ಎಂದು ದಾಂತೇವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.

ಶೋಧ ಕಾರ್ಯಚರಣೆ ವೇಳೆ ಮೃತದೇಹ ಪತ್ತೆ:
ದಾಂತೇವಾಡ ಜಿಲ್ಲೆಯ ಪೊರ್ದಮ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಬಳಿಕ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿಗೆ ಒಂದು ಪಿಸ್ತೂಲ್ ಮತ್ತು ಮದ್ದು ಗುಂಡಿನ ಜೊತೆಗೆ ಮೃತದೇಹವೊಂದು ಪತ್ತೆಯಾಗಿದೆ. ಈ ಮೃತದೇಹ ಸಂತೋಷ್ ಮಾರ್ಕಮ್ ಎಂಬ ಭಯೋತ್ಪಾದಕನದ್ದು ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಅರ್ನಪುರ್ ಪೊಲೀಸ್ ಠಾಣೆಯಲ್ಲಿ 25 ಕ್ರಿಮಿನಲ್ ಪ್ರಕರಣ ದಾಖಲಾಗಿದ್ದವು ಎಂದು ತಿಳಿದು ಬಂದಿದೆ.
"ರಾಯ್‌ಪುರದಿಂದ 400 ಕಿ.ಮೀ ದೂರದಲ್ಲಿನ ಕಾಡಿನಲ್ಲಿ ಇರುವ ದಟ್ಟವಾದ ಸಸ್ಯರಾಶಿ ನಡುವೆ ಅಗತ್ಯವಿರುವ ಸಸ್ಯಗಳನ್ನು ತೆಗೆದುಕೊಂಡ ಭಯೋತ್ಪಾದಕರು ಅಲ್ಲಿಂದ ಪರಾರಿಯಾಗಿದ್ದರು," ಎಂದು ದಾಂತೇವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications