One Nation One Election: 'ಒಂದು ದೇಶ, ಒಂದು ಚುನಾವಣೆ' ಮಸೂದೆ ಹಿಂಪಡೆಯಲು ಪ್ರತಿಪಕ್ಷಗಳು ಒತ್ತಾಯ

ನವದೆಹಲಿ, ಡಿಸೆಂಬರ್‌ 18: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ( 'ಒಂದು ದೇಶ, ಒಂದು ಚುನಾವಣೆ' ಮಸೂದೆ) ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

" ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದರು. 'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಿದರು.

One Nation One Election bill introduced in Lok Sabha Opposition demands withdrawal

ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಮಸೂದೆ ಹಿಂಪಡೆಯಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದರು.

ಮಸೂದೆಯ ಪ್ರಸ್ತಾವನೆಗೆ ಮತದಾನ ನಡೆದಿದ್ದು ಈ ವೇಳೆ ಮಸೂದೆ ಪರವಾಗಿ 269 ಮತಗಳು ಬಂದಿದ್ದರೆ, 198 ಮತಗಳು ವಿರುದ್ಧವಾಗಿ ಚಲಾವಣೆಯಾಗಿವೆ. ನಂತರ ಕಲಾಪವನ್ನು ಮಧ್ಯಾಹ್ನ 3 ಗಂಟೆಯವರೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು.

2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಮುಖ ಚುನಾವಣಾ ಸುಧಾರಣೆಗೆ ಬಿಜೆಪಿ ದಾರಿ ಮಾಡಿಕೊಟ್ಟಿದೆ. ಈ ಮಸೂದೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ವಾದಿಸುತ್ತಿದ್ದಾರೆ. ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಅವರು ಪ್ರಶ್ನಿಸಿದ್ದಾರೆ.

ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಕೂಡ ಮಸೂದೆಗಳನ್ನು ವಿರೋಧಿಸಿದರು, ದೇಶದಲ್ಲಿ "ಸರ್ವಾಧಿಕಾರವನ್ನು ತರಲು" ಬಿಜೆಪಿಯ ಪ್ರಯತ್ನ ಎಂದು ಬಣ್ಣಿಸಿದರು.

ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ, ಕಾನೂನು ಸಚಿವ ಮೇಘವಾಲ್ ಅವರು ಮಾತನಾಡಿ, ಮಸೂದೆಗಳು ಸಂವಿಧಾನದೊಂದಿಗೆ ಹೊಂದಿಕೆಯಾಗುತ್ತವೆ ಮತ್ತು ಮೂಲಭೂತ ರಚನೆಯ ಸಿದ್ಧಾಂತದ ಮೇಲೆ ಆಕ್ರಮಣ ಮಾಡುವುದಿಲ್ಲ ಎಂದು ಹೇಳಿದರು.

ಇನ್ನೂ ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಧ್ವನಿಸಿದ್ದು, ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಗಳು ಕ್ಯಾಬಿನೆಟ್‌ನಲ್ಲಿ ಬಂದಾಗ, ಇದನ್ನು ಸಂಸತ್ತಿನ ಜಂಟಿ ಸಮಿತಿಗೆ ಉಲ್ಲೇಖಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿ ಹಂತದಲ್ಲೂ ಅದರ ಬಗ್ಗೆ ವಿವರವಾದ ಚರ್ಚೆ ನಡೆಯಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+