One Nation One Election: 'ಒಂದು ದೇಶ ಒಂದು ಚುನಾವಣೆ'ಗೆ ಬೆಂಬಲ ಕೊಟ್ಟ ಮತ್ತು ವಿರೋಧಿಸಿದ ಪಕ್ಷಗಳ ಪಟ್ಟಿ
ಗದ್ದಲದ ನಡುವೆಯೂ ಲೋಕಸಭೆಯಲ್ಲಿ 'ಒಂದು ದೇಶ, ಒಂದು ಚುನಾವಣೆ' ಮಸೂದೆಯನ್ನು ಮಂಡಿಸಲಾಗಿದೆ. ಮಸೂದೆಗೆ ವಿಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಮಸೂದೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತ ಚಲಾವಣೆ ಪ್ರಕ್ರಿಯೆ ನಡೆಸಲಾಗಿದ್ದು 269 ಸದಸ್ಯರು ಮಸೂದೆಯ ಪರವಾಗಿ ಮತ ಹಾಕಿದ್ದರೆ 198 ಸದಸ್ಯರು ಮಸೂದೆಯನ್ನು ತಿರಸ್ಕರಿಸಿ ಮತ ಚಲಾಯಿಸಿದ್ದಾರೆ.
ಡಿಸೆಂಬರ್ 12ರಂದು ಕೇಂದ್ರ ಸಚಿವ ಸಂಪುಟ 'ಒಂದು ದೇಶ, ಒಂದು ಚುನಾವಣೆ' ಮಸೂದೆಗೆ ಅನುಮೋದನೆ ನೀಡಿತ್ತು. ಮಸೂದೆ ಪರಿಚಯಿಸುವ ಮೊದಲು ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರಿ ಚರ್ಚೆ ನಡೆಯಿತು.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅದರ ಮಿತ್ರಪಕ್ಷಗಳು ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಎಂಕೆ ಸ್ಟಾಲಿನ್ ಅವರ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಹಲವು ವಿರೋಧ ಪಕ್ಷಗಳು ಇದನ್ನು ಮಸೂದೆ ಮಂಡನೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿವೆ.
ಬೆಂಬಲ ಕೊಟ್ಟಿದ್ಯಾರು
ದೇಶಾದ್ಯಂತ ಒಂದೇ ಬಾರಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಮಾಡಿದ್ದ ಶಿಫಾರಸ್ಸುಗಳನ್ನು 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತ್ತು.
ದೇಶಾದ್ಯಂತ ಎರಡು ಹಂತಗಳಲ್ಲಿ ಚುನಾವಣೆಯನ್ನು ಜಾರಿಗೆ ಸಮಿತಿಯು ಶಿಫಾರಸು ಮಾಡಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲಕ್ಕೆ ನಡೆಯಬೇಕು ಮತ್ತು ಲೋಕಸಭಾ ಚುನಾವಣೆ ಮುಗಿದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ (ಗ್ರಾಮ ಪಂಚಾಯಿತಿ, ತಾಲೂಕ್ ಪಂಚಾಯಿತಿ, ನಗರಸಭೆ, ಪುರಸಭೆ, ಪಾಲಿಕೆ) ಚುನಾವಣೆಗನ್ನು ನಡೆಸುವಂತೆ ಶಿಫಾರಸ್ಸು ಮಾಡಿದೆ. ಎಲ್ಲಾ ಚುನಾವಣೆಗಳಿಗೂ ಸಾಮಾನ್ಯ ಮತದಾರರ ಪಟ್ಟಿ ಇರಬೇಕು ಎಂದು ಹೇಳಿದೆ.
ಒಂದು ದೇಶ ಒಂದು ಚುನಾವಣೆ ಮಸೂದೆಗೆ ಒಟ್ಟಾರೆ 32 ಪ್ರಮುಖ ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಬಿಜೆಪಿಯ ರಾಜ್ಯಸಭಾ ಸಂಸದ ಬ್ರಿಜ್ ಲಾಲ್ ಮಸೂದೆಯನ್ನು ಸ್ವಾಗತಿಸಿದ್ದು ಭಾರತದಲ್ಲಿ 1966ರವರೆಗೆ ಲೋಕಸಭಾ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೆ ನಡೆಯುತ್ತಿದ್ದವು. ಒಂದೇ ಬಾರಿ ಚುನಾವಣೆ ನಡೆಸಿದರೆ ಖರ್ಚು, ಸಮಯ ಉಳಿಯುತ್ತದೆ ಎಂದು ಹೇಳಿದ್ದಾರೆ.
ಮಸೂದೆಗೆ ಬೆಂಬಲ ನೀಡಿರುವ ಪಕ್ಷಗಳು
ಬಿಜೆಪಿ
ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP)
ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIDMK)
ASOM ಗಣ ಪರಿಷತ್
ಜನತಾ ದಳ (ಯುನೈಟೆಡ್)
ಬಿಜು ಜನತಾ ದಳ (ಬಿಜೆಡಿ)
ಜಾರ್ಖಂಡ್ ವಿದ್ಯಾರ್ಥಿಗಳ ಒಕ್ಕೂಟ
ಅಪ್ನಾ ದಳ
ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ
ಲೋಕಜನ ಶಕ್ತಿ ಪಕ್ಷ (ಆರ್)
ಮಿಜೋ ನ್ಯಾಷನಲ್ ಫ್ರಂಟ್
ಶಿರೋಮಣಿ ಅಕಾಲಿದಳ (SAD)
ತಮಿಳು ಮಾನಿಲ ಕಾಂಗ್ರೆಸ್ (ಎಂ)
ರಾಷ್ಟ್ರೀಯ ಲೋಕ ಜನತಾ ದಳ
ಯುನೈಟೆಡ್ ಕಿಸಾನ್ ವಿಕಾಸ್ ಪಾರ್ಟಿ
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ)
ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್
ಪಟ್ಟಾಲಿ ಮಕ್ಕಳ್ ಕಚ್ಚಿ
ಭಾರತೀಯ ಮಕ್ಕಳ ಕಲ್ವಿ ಮುನ್ನೇತ್ರ ಕಳಗಂ
ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ
ಭಾರತೀಯ ಸಮಾಜ ಪಕ್ಷ
ಗೂರ್ಖಾ ನ್ಯಾಷನಲ್ ಲಿಬರಲ್ ಫ್ರಂಟ್
ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಅಜಿತ್ ಪವಾರ್)
ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ
ಜನ್ ಸುರಜಯ್ ಶಕ್ತಿ
ಹಿಂದೂಸ್ತಾನಿ ಆವಮ್ ಮೋರ್ಚಾ
ರಾಷ್ಟ್ರೀಯ ಲೋಕ ಜನ ಶಕ್ತಿ ಪಕ್ಷ
ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ
ಶಿವಸೇನೆ
ನಿಶಾದ್ ಪಾರ್ಟಿ
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ
ಪುತಿಯಾ ನಿಧಿ ಕಚ್ಚಿ
ಮಸೂದೆಯನ್ನು ವಿರೋಧಿಸಿದ ಪಕ್ಷಗಳು
ಆಮ್ ಆದ್ಮಿ ಪಕ್ಷ (ಎಎಪಿ)
ಕಾಂಗ್ರೆಸ್
ಸಮಾಜವಾದಿ ಪಕ್ಷ
ಬಹುಜನ ಸಮಾಜ ಪಕ್ಷ (BSP)
ತೃಣಮೂಲ ಕಾಂಗ್ರೆಸ್
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)
ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್
ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ
ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)
ನಾಗಾ ಪೀಪಲ್ಸ್ ಫ್ರಂಟ್
ವಿದುತಲೈ ಚಿರುತೈಗಲ್ ಕಚ್ಚಿ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಲಿಬರೇಶನ್
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications