One Nation One Election: ಲೋಕಸಭೆಯಲ್ಲಿ ಮಸೂದೆ ಮಂಡನೆ, ಗದ್ದಲ
ನವದೆಹಲಿ, ಡಿಸೆಂಬರ್ 17: ಭಾರತದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಾಗಿದೆ. ಮಸೂದೆಯನ್ನು ಕಾಂಗ್ರೆಸ್ ಪ್ರಬಲವಾಗಿ ವಿರೋಧಿಸಿದೆ. ವಿವಿಧ ಪಕ್ಷಗಳು ಮಸೂದೆಯ ಪರಿವಾಗಿದ್ದೇವೆ ಎಂದು ಘೋಷಣೆ ಮಾಡಿವೆ. 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಲು ಕಾನೂನು ತಿದ್ದುಪಡಿ ಮಾಡಲು ಮಸೂದೆಯನ್ನು ಮಂಡನೆ ಮಾಡಿದ ಬಳಿಕ ಕಲಾಪದಲ್ಲಿ ಗದ್ದಲ ಉಂಟಾಗಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಮಂಗಳವಾರ ಲೋಕಸಭೆ ಕಲಾಪದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಮಂಡನೆ ಮಾಡಿದರು. ಮಸೂದೆ ಮಂಡನೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ಇದನ್ನು ಪ್ರಬಲವಾಗಿ ವಿರೋಧಿಸಿದರು.

ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದನ್ನು 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಪ್ರಸ್ತಾಪಿಸುತ್ತದೆ. ಈ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಅಂಗೀಕಾರ ಮಾಡಲಾಗಿತ್ತು, ಮಸೂದೆ ಮಂಡನೆ ಮಾಡಲು ಒಪ್ಪಿಗೆ ಕೊಡಲಾಗಿತ್ತು.
ಮಸೂದೆ ಜೆಪಿಸಿಗೆ ಹಸ್ತಾಂತರ: ಲೋಕಸಭೆಯಲ್ಲಿ ಮಸೂದೆ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,"ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ವಹಿಸಲು ಬಯಸಿದೆ. ಈ ಕುರಿತು ವಿವರವಾಗಿ ಪರಾಮರ್ಶಿಸಿ ಸಮಿತಿ ತೀರ್ಮಾನಿಸಲಿ" ಎಂದು ಹೇಳಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಜಂಟಿ ಸಂಸದೀಯ ಸಮಿತಿಗೆ ವರ್ಗಾಯಿಸಿದರು. ಡಿಸೆಂಬರ್ 20ರಂದು ಸಂಸತ್ ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಈ ವಿಧೇಯಕದ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಮತಕ್ಕೆ ಹಾಕಿದರು. ಆಗ 149 ಸದಸ್ಯರು ಇದನ್ನು ವಿರೋಧಿಸಿದರು.
'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಐಯುಎಂಎಲ್ ವಿರೋಧಿಸಿತು. ಸಂಸದ ಇ. ಟಿ. ಮೊಹಮ್ಮದ್ ಬಶೀರ್ ಮಾತನಾಡಿ, "ನಾನು ಈ ವಿಧೇಯಕವನ್ನು ಬಲವಾಗಿ ವಿರೋಧಿಸುತ್ತೇನೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುವ ವಿಧೇಯಕವಾಗಿದೆ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರಿತ್ವ ತರಲಾಗುತ್ತಿದೆ. ಈ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿದರೆ ಕೆಲವು ರಾಜ್ಯಗಳ ಸರ್ಕಾರ ಅವಧಿ 3 ವರ್ಷಗಳಿಗೆ ಅಂತ್ಯವಾಗಲಿದೆ" ಎಂದರು.
'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಐಯುಎಂಎಲ್ ವಿರೋಧಿಸಿತು. ಸಂಸದ ಇ. ಟಿ. ಮೊಹಮ್ಮದ್ ಬಶೀರ್ ಮಾತನಾಡಿ, "ನಾನು ಈ ವಿಧೇಯಕವನ್ನು ಬಲವಾಗಿ ವಿರೋಧಿಸುತ್ತೇನೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುವ ವಿಧೇಯಕವಾಗಿದೆ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರಿತ್ವ ತರಲಾಗುತ್ತಿದೆ. ಈ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿದರೆ ಕೆಲವು ರಾಜ್ಯಗಳ ಸರ್ಕಾರ ಅವಧಿ 3 ವರ್ಷಗಳಿಗೆ ಅಂತ್ಯವಾಗಲಿದೆ" ಎಂದರು.
ಶಿವಸೇನೆ (ಉದ್ಭವ್ ಠಾಕ್ರೆ ಬಣ) ಸಂಸದ ಅನಿಲ್ ದೇಸಾಯಿ ಸಹ ವಿಧೇಯಕ ವಿರೋಧಿಸಿದರು. "ಭಾರತದಂತಹ ಪ್ರಜಾಪ್ರಭುತ್ವ ದೇಶಕ್ಕೆ ಈ ವಿಧೇಯಕ ಮಾರಕವಾಗಿದೆ. ಆಯಾಯ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಅವುಗಳದ್ದೇ ಆದ ಮಹತ್ವ ಪಡೆದಿವೆ. ಇದನ್ನು ಈ ವಿಧೇಯಕ ನಾಶ ಮಾಡುತ್ತದೆ" ಎಂದು ಹೇಳಿದರು.












Click it and Unblock the Notifications